Saturday, January 18, 2025
Saturday, January 18, 2025

ಯಕ್ಷಗಾನ ಕಲಾರಂಗ 48ನೇ ವಾರ್ಷಿಕ ಮಹಾಸಭೆ

ಯಕ್ಷಗಾನ ಕಲಾರಂಗ 48ನೇ ವಾರ್ಷಿಕ ಮಹಾಸಭೆ

Date:

ಉಡುಪಿ, ಜು. 11: ಉಡುಪಿಯ ಸಾಂಸ್ಕೃತಿಕ ಸಾಮಾಜಿಕ ಸಂಘಟನೆ ಯಕ್ಷಗಾನ ಕಲಾರಂಗದ 48ನೇ ವಾರ್ಷಿಕ ಮಹಾಸಭೆಯು ಪೇಜಾವರ ಮಠದ ಶ್ರೀರಾಮವಿಠಲ ಸಭಾಭವನದಲ್ಲಿ ಎಂ. ಗಂಗಾಧರ ರಾವ್‍ರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಹಾಸಭೆಯು ಡಾ. ರಾಜೇಶ್ ನಾವಡರ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ವರದಿ ವರ್ಷದಲ್ಲಿ ಅಗಲಿದ ಸಂಸ್ಥೆಯ ಸದಸ್ಯರು ಹಾಗೂ ಕಲಾವಿದರಿಗೆ ಕಾರ್ಯದರ್ಶಿ ಮುರಲಿ ಕಡೆಕಾರ್ ನುಡಿನಮನ ಸಲ್ಲಿಸಿದರು. ಮಹಾಸಭೆಯ ಕಲಾಪಗಳಾದ ಗತ ಮಹಾಸಭೆಯ ವರದಿ, ವಾರ್ಷಿಕ ವರದಿ, ಪರಿಶೋಧಿತ ಲೆಕ್ಕಪತ್ರ ಮಂಡನೆ, ಲೆಕ್ಕಪರಿಶೋಧಕರ ನೇಮಕದ ಅನಂತರ ಕಾರ್ಯಕಾರಿ ಸಮಿತಿ ಮತ್ತು ಸಲಹಾ ಸಮಿತಿಗೆ ಸದಸ್ಯರನ್ನು ಆಯ್ಕೆ ಮಾಡಲಾಯಿತು.

ವೇದಿಕೆಯಲ್ಲಿ ಉಪಾಧ್ಯಕ್ಷರುಗಳಾದ ಪಿ.ಕಿಶನ್ ಹೆಗ್ಡೆ, ವಿ.ಜಿ.ಶೆಟ್ಟಿ ಮತ್ತು ಕೋಶಾಧಿಕಾರಿ ಪ್ರೊ. ಕೆ. ಸದಾಶಿವ ರಾವ್ ಉಪಸ್ಥಿತರಿದ್ದರು. ಡಾ. ಎಂ. ಪ್ರಭಾಕರ ಜೋಷಿ ಹಾಗೂ ವಿದ್ಯಾವಂತ ಆಚಾರ್ಯ ಸಂಸ್ಥೆಯ ಕಾರ್ಯಚಟುವಟಿಕೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ನಿವೃತ್ತ ಪ್ರಾಂಶುಪಾಲ ಪ್ರೊ. ಎಂ. ಆರ್. ಹೆಗಡೆ ಒಂದು ಮನೆಯ ಪ್ರಾಯೋಜಕತ್ವಕ್ಕೆ ಹಾಗೂ ವಿದ್ಯಾಪೋಷಕ್‍ಗೆ ಧನಸಹಾಯ ನೀಡಿದರು. ನಿವೃತ್ತ ಮುಖ್ಯೋಪಾಧ್ಯಾಯ ಅಲೆವೂರು ರಘುಪತಿ ಭಟ್, ಮೀನುಗಾರಿಕಾ ಇಲಾಖೆಯ ನಿವೃತ್ತ ಉದ್ಯೋಗಿ ಎನ್. ರಾಮ ಭಟ್, ಎಂ.ಜಿ.ಎಂ ಕಾಲೇಜಿನ ನಿವೃತ್ತ ಕಛೇರಿ ವ್ಯವಸ್ಥಾಪಕ ಎಚ್. ನರಸಿಂಹಮೂರ್ತಿ, ಮುರಲಿ ಕಡೆಕಾರ್ ಧನಸಹಾಯ ನೀಡಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!