Tuesday, February 25, 2025
Tuesday, February 25, 2025

ಜು. 17 ರಿಂದ 25: ಉಡುಪಿಯಲ್ಲಿ ಅಗ್ನಿಪಥ್ ಸೇನಾ ನೇಮಕಾತಿ ರ‍್ಯಾಲಿ

ಜು. 17 ರಿಂದ 25: ಉಡುಪಿಯಲ್ಲಿ ಅಗ್ನಿಪಥ್ ಸೇನಾ ನೇಮಕಾತಿ ರ‍್ಯಾಲಿ

Date:

ಉಡುಪಿ, ಜುಲೈ 12: ಉಡುಪಿಯ ಅಜ್ಜರಕಾಡು ಕ್ರೀಡಾಂಗಣದಲ್ಲಿ ಭಾರತೀಯ ಸೇನೆಯ ಅಗ್ನಿಪಥ್ ಸೇನಾ ನೇಮಕಾತಿ ರ‍್ಯಾಲಿಯು ಜುಲೈ 17 ರಿಂದ 25 ರ ವರೆಗೆ ನಡೆಯಲಿದ್ದು, ಇದಕ್ಕಾಗಿ ಎಲ್ಲ ರೀತಿಯ ಅಗತ್ಯ ಸಿದ್ಧತೆಗಳನ್ನು ಕೈಗೊಂಡು, ಅಭ್ಯರ್ಥಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ತಿಳಿಸಿದರು. ಅವರು ಬುಧವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೇನಾ ನೇಮಕಾತಿ ರ‍್ಯಾಲಿ ಕುರಿತು ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅಜ್ಜರಕಾಡು ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಸೇನಾ ನೇಮಕಾತಿ ರ‍್ಯಾಲಿಗೆ ಈಗಾಗಲೇ ಆನ್‌ಲೈನ್ ಮೂಲಕ ಹೆಸರು ನೊಂದಾಯಿಸಿಕೊಂಡಿರುವ, ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಭ್ಯರ್ಥಿಗಳು ಭಾಗವಹಿಸಲಿದ್ದು, ರ‍್ಯಾಲಿಗೆ ಇದುವರೆಗೆ 6,800 ಕ್ಕೂ ಅಧಿಕ ಮಂದಿ ನೊಂದಣಿ ಮಾಡಿಕೊಂಡಿದ್ದಾರೆ ಎಂದರು. ನೇಮಕಾತಿ ರ‍್ಯಾಲಿಗೆ ಪ್ರತಿದಿನ ಸುಮಾರು 1000 ಮಂದಿ ಆಗಮಿಸಲಿದ್ದು, ಇವರಿಗೆ ಮೂಲಭೂತ ಅವಶ್ಯಕತೆಯಾಗಿ ಕ್ರೀಡಾಂಗಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಕ್ರೀಡಾಂಗಣದ ಸುತ್ತಲೂ ಸ್ಚಚ್ಛತೆಯನ್ನು ಕಾಪಾಡಲು ಸಾಕಷ್ಟು ಸಂಖ್ಯೆಯ ಮೊಬೈಲ್ ಟಾಯ್ಲೆಟ್‌ಗಳ ವ್ಯವಸ್ಥೆಯನ್ನು ಮಾಡುವುದರ ಮೂಲಕ ಸ್ವಚ್ಛತೆಗೆ ಅತ್ಯಂತ ಗರಿಷ್ಠ ಆದ್ಯತೆಯನ್ನು ನೀಡಿ, ಪ್ರತಿದಿನ ಈ ಬಗ್ಗೆ ಪರಿಶೀಲಿಸುವಂತೆ ಉಡುಪಿ ನಗರಸಭೆಯ ಪೌರಾಯುಕ್ತರಿಗೆ ಸೂಚನೆ ನೀಡಿದರು.

ರ‍್ಯಾಲಿಗೆ ಆಗಮಿಸುವ ಅಭ್ಯರ್ಥಿಗಳಲ್ಲಿ ನೂಕು ನುಗ್ಗಲು ಉಂಟಾಗದಂತೆ ಹಾಗೂ ವಾಹನಗಳು ಮತ್ತು ಸಾರ್ವಜನಿಕರ ಸಂಚಾರಕ್ಕೆ ಅಡಚಣೆಯಾಗದಂತೆ ಮತ್ತು ರಾತ್ರಿ ವೇಳೆಯಲ್ಲಿ ರಸ್ತೆ ಬದಿಗಳಲ್ಲಿ ಅಭ್ಯರ್ಥಿಗಳು ಮಲಗದಂತೆ, ಕ್ರೀಡಾಂಗಣ ಸುತ್ತಮುತ್ತ ಅಗತ್ಯ ಭದ್ರತಾ ವ್ಯವಸ್ಥೆ ಒದಗಿಸುವಂತೆ ಪೊಲೀಸ್ ಇಲಾಖೆ ವತಿಯಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು. ಮೆಸ್ಕಾಂ ವತಿಯಿಂದ ರ‍್ಯಾಲಿ ನಡೆಯುವ ಕ್ರೀಡಾಂಗಣಕ್ಕೆ ನಿರಂತರ ವಿದ್ಯುತ್ ಸರಬರಾಜು ಮಾಡುವಂತೆ ಮತ್ತು ಅಪಾಯಕಾರಿ ಮರದ ಕೊಂಬೆಗಳು ಮತ್ತು ವಿದ್ಯುತ್ ತಂತಿಗಳಿದ್ದಲ್ಲಿ ಸೂಕ್ತ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಬಿ.ಎಸ್.ಎನ್.ಎಲ್ ವತಿಯಿಂದ ಸೇನಾ ಕಾರ್ಯಗಳನ್ನು ನಿರ್ವಹಿಸಲು ಇಂಟರ್ನೆಟ್ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ನೀಡಿದರು.

ರ‍್ಯಾಲಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳ ಶೈಕ್ಷಣಿಕ ದಾಖಲೆಗಳ ನೈಜತೆಯನ್ನು ಪರಿಶೀಲನೆ ನಡೆಸಲು ಶಿಕ್ಷಣ ಇಲಾಖೆಯ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಮತ್ತು ರ‍್ಯಾಲಿ ನಡೆಯುವ ಸ್ಥಳದಲ್ಲಿ ತುರ್ತು ಆರೋಗ್ಯ ಸಹಾಯಕ್ಕಾಗಿ ಆಂಬುಲೆನ್ಸ್ ಒಳಗೊಂಡ ವೈದ್ಯಕೀಯ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಆರೋಗ್ಯ ಇಲಾಖೆಗೆ ಸೂಚಿಸಿದರು. ಈ ನೇಮಕಾತಿ ರ‍್ಯಾಲಿಗೆ ಸಂಬಂಧಿಸಿದಂತೆ ಏಪ್ರಿಲ್ 17 ರಿಂದ ನೊಂದಣಿ ಪ್ರಕ್ರಿಯೆ ನಡೆಯುತ್ತಿದ್ದು, ಅಗ್ನಿವೀರ್ ಜನರಲ್ ಡ್ಯೂಟಿ, ಅಗ್ನಿವೀರ್ ಟೆಕ್ನಿಕಲ್, ಅಗ್ನಿವೀರ್ ಟ್ರೇಡ್ಸ್ಮೆನ್, ಅಗ್ನಿವೀರ್ ಕ್ಲಕ್/ಸ್ಟೋರ್ ಕೀಪರ್ ಹುದ್ದೆಗಳಿಗೆ ನೇಮಕ ನಡೆಯಲಿದ್ದು, ಈಗಾಗಲೇ ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನ ಪತ್ರಗಳನ್ನು ಈ ಮೇಲ್ ಮೂಲಕ ಕಳುಹಿಸಲಾಗಿದೆ. ಸಭೆಯಲ್ಲಿ ಸಹಾಯಕ ಪೊಲೀಸ್ ಅಧೀಕ್ಷಕ ಸಿದ್ಧಲಿಂಗಪ್ಪ, ನಗರಸಭೆಯ ಪೌರಾಯುಕ್ತ ರಾಯಪ್ಪ, ಡಿಹೆಚ್‌ಓ ಡಾ. ನಾಗಭೂಷಣ ಉಡುಪ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...
error: Content is protected !!