Sunday, January 19, 2025
Sunday, January 19, 2025

ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳಿಗೆ ಸಹಾಯಧನ: ಅರ್ಜಿ ಆಹ್ವಾನ

ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳಿಗೆ ಸಹಾಯಧನ: ಅರ್ಜಿ ಆಹ್ವಾನ

Date:

ಉಡುಪಿ, ಜುಲೈ 15: ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕಿನಲ್ಲಿ ಅನುಷ್ಠಾನಗೊಳ್ಳಲಿರುವ ವಿವಿಧ ಯೋಜನೆಯಡಿ ಸಹಾಯಧನ ಸೌಲಭ್ಯ ಪಡೆಯಲು ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ರೈತರಿಗೆ ಕಾಳಮೆಣಸು, ಗೇರು, ಜಾಯಿಕಾಯಿ, ಅನಾನಸು, ಅಂಗಾಂಶ ಬಾಳೆ, ರಾಗದ ಕಂದು ಬಾಳೆ, ಅಪ್ರಧಾನ ಹಣ್ಣುಗಳಾದ ರಾಂಟಾನ್ ಮಾಂಗೋಸಿನ್ ಮತ್ತು ಡ್ರ್ಯಾಗನ್ ಫ್ರೂಟ್ ಹೊಸ ತೋಟಗಳ ಸ್ಥಾಪನೆಗೆ ಶೇ. 40 ರ ಸಹಾಯಧನ, ಸಣ್ಣ ಸಸ್ಯಾಗಾರಗಳ ನರ್ಸರಿ ಸ್ಥಾಪನೆಗೆ ಶೇ. 50 ರ ಸಹಾಯಧನ, ಅಂಗಾಂಶ ಕೃಷಿ ಘಟಕ ಸ್ಥಾಪನೆಗೆ ಶೇ.40 ರಂತೆ ಸಹಾಯಧನ, ನೀರು ಸಂಗ್ರಹಣ ಘಟಕ (20*20*3 ಮೀ. ಅಳತೆ) ನಿರ್ಮಾಣಕ್ಕೆ ಗರಿಷ್ಠ 0.75 ಲಕ್ಷ ರೂ.ಗಳ ಸಹಾಯಧನ ಲಭ್ಯವಿದೆ.

ವಿವಿಧ ತೋಟಗಾರಿಕೆ ಬೆಳೆಗಳಿಗೆ ಹಾನಿಯುಂಟು ಮಾಡುವ ರೋಗ/ಕೀಟಗಳ ನಿಯಂತ್ರಣಕ್ಕಾಗಿ ಸಸ್ಯ ಸಂರಕ್ಷಣಾ ಔಷಧಿಗಳಿಗೆ ಶೇ. 30 ರಿಂದ ಶೇ. 75 ರ ಸಹಾಯಧನ, ಅಡಿಕೆ ತೋಟ ಹೊಂದಿರುವ ರೈತರಿಗೆ ಅಡಿಕೆ ಸಂರಕ್ಷಣೆ ಒಣಗಿಸಲು ಸೋಲಾರ್ ಶೀಟ್ ಖರೀದಿಗೆ ಶೇ.40 ರ ಸಹಾಯಧನ, ವಿವಿಧ ಜಾತಿಯ ಅಣಬೆ ಉತ್ಪಾದನೆಗಾಗಿ ಅಣಬೆ ಉತ್ಪಾದನಾ ಘಟಕ, ಸ್ಪಾನ್ ಉತ್ಪಾದನಾ ಘಟಕಗಳ ಸ್ಥಾಪನೆಗೆ ಶೇ. 40 ರ ಸಹಾಯಧನ, ರೈತರ ಉತ್ಪನ್ನಗಳನ್ನು ನೇರವಾಗಿ ಗ್ರಾಹಕರಿಗೆ ತಲುಪಿಸುವ ಉದ್ದೇಶದಿಂದ ವಿವಿಧ ಸಂಸ್ಥೆಗಳು ಸ್ಥಾಪಿಸುವ ಗ್ರಾಮೀಣ ಮಾರುಕಟ್ಟೆ, ರೈತ ಸಂತೆ ಹಾಗೂ ನೇರ ಮಾರುಕಟ್ಟೆ ಸ್ಥಾಪಿಸಲು ಶೇ.40 ರಂತೆ ಗರಿಷ್ಠ ರೂ. 10.00 ಲಕ್ಷಗಳ ಸಾಲ ಆಧಾರಿತ ಸಹಾಯಧನ ಪಡೆಯಲು ಅವಕಾಶವಿರುತ್ತದೆ. ತೋಟಗಾರಿಕೆ ಬೆಳೆಗಳ ಪ್ರಾಥಮಿಕ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಶೇ.40, ಪ್ಯಾಕ್ ಹೌಸ್‌ಗಳ ನಿರ್ಮಾಣಕ್ಕೆ ಗರಿಷ್ಠ 2 ಲಕ್ಷ ರೂ. ವರೆಗೆ ಶೇ. 50 ರ ಸಹಾಯಧನ ಹಾಗೂ ರೈತರ ಯಾಂತ್ರೀಕರಣ ಅವಶ್ಯಕತೆಗೆ 20 ಹೆಚ್‌ಪಿ ಗಿಂತ ಕಡಿಮೆ ಸಾಮರ್ಥ್ಯದ ಟ್ರ‍್ಯಾಕ್ಟರ್ ಖರೀದಿಗೆ ರೂ. 75,000 ದಿಂದ 1 ಲಕ್ಷ ರೂ. ವರೆಗೆ ಸಹಾಯಧನ ಲಭ್ಯವಿದೆ.

ಹಳೆ ತೆಂಗು ತೋಟಗಳಲ್ಲಿ ಶೇ. 10 ರಷ್ಟು ಹಳೆ ಮರಗಳನ್ನು ತೆಗೆದು ಹೊಸ ಗಿಡಗಳ ನಾಟಿ, ಬುಡ ಮಾಡಿ ಗೊಬ್ಬರ ಕೊಡುವುದು, ಸಸ್ಯ ಸಂರಕ್ಷಣೆ ಹಾಗೂ ನೀರಿನ ಸಂರಕ್ಷಣೆ ಕಾರ್ಯಕ್ರಮಗಳನ್ನು ಕೈಗೊಂಡು ಪುನಶ್ಚೇತನಗೊಳಿಸಲು, ಪ್ರಾತ್ಯಕ್ಷತೆ ತಾಕುಗಳ ನಿರ್ಮಾಣಕ್ಕಾಗಿ ಹಾಗೂ ತೆಂಗು ಬೆಳೆಗೆ ತಗಲುವ ರೋಗ ಮತ್ತು ಕೀಟಗಳ ನಿಯಂತ್ರಣಕ್ಕಾಗಿ ಕೀಟ ಮತ್ತು ರೋಗಗಳಿಗನುಗುಣವಾಗಿ ಒಟ್ಟು ಘಟಕ ವೆಚ್ಚದ ಶೇ. 50 ರಂತೆ ಹಾಗೂ ಹೊಸ ತೆಂಗು ತೋಟ ಮಾಡಲಿಚ್ಛಿಸುವ ರೈತರಿಗೆ ಕೂಡ ಸಹಾಯಧನ ಲಭ್ಯವಿದೆ. ಕೃಷಿ ಯಾಂತ್ರೀಕರಣ ಉಪ ಅಭಿಯಾನ ಹಾಗೂ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಗಳಡಿ ತೋಟಗಾರಿಕೆ ಯಾಂತ್ರಿಕರಣ ಕಾರ್ಯಕ್ರಮದಡಿ ಅನುಮೋದಿತ ವಿವಿಧ ಯಂತ್ರೋಪಕರಣಗಳಿಗೆ ಶೇ. 40/50 ರ ಸಹಾಯಧನ ಹಾಗೂ ದೊಡ್ಡ ಗಾತ್ರದ ನೀರು ಸಂಗ್ರಹಣಾ ಘಟಕ, ಪ್ಯಾಕಿಂಗ್ ಮತ್ತು ಸಂಗ್ರಹಣಾ ಘಟಕಗಳ ನಿರ್ಮಾಣಕ್ಕೆ ಮತ್ತು ನೀರಿನಲ್ಲಿ ಕರಗುವ ರಸಗೊಬ್ಬರ ಮತ್ತು ಲಘು ಪೋಷಕಾಂಶಗಳ ಖರೀದಿಗೆ ಸಹಾಯಧನ ಸಿಗಲಿದೆ.

ತೋಟಗಾರಿಕೆ ಬೆಳೆಗಳಲ್ಲಿ ನೀರಿನ ಸಮರ್ಪಕ ಬಳಕೆಗಾಗಿ ಹನಿ ನೀರಾವರಿ/ತುಂತುರು ನೀರಾವರಿ ಅಳವಡಿಕೆಗೆ ಪ್ರರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ. 90 ರಷ್ಟು ಹಾಗೂ ಇತರೇ ವರ್ಗದ ರೈತರಿಗೆ ಶೇ. 75 ರಷ್ಟು ಸಹಾಯಧನ ಲಭ್ಯವಿದೆ. ಕಚೇರಿಯಲ್ಲಿ ಅರ್ಜಿ ಸಲ್ಲಿಸಿ ಕಾರ್ಯಾದೇಶ ಪಡೆದು ಇಲಾಖೆಯಿಂದ ಅನುಮೋದಿತ ಡೀಲರ್‌ಗಳ ಮೂಲಕ ರೈತರು ಹನಿ ನೀರಾವರಿ ಆಳವಡಿಸಿಕೊಂಡು ಸಹಾಯಧನ ಪಡೆಯಬಹುದಾಗಿದೆ. ತಾಳೆಬೆಳೆ ಯೋಜನೆಯಡಿ ಹೊಸದಾಗಿ ತಾಳೆ ಬೆಳೆ ಪ್ರದೇಶ ವಿಸ್ತರಣೆಗೆ ಹಾಗೂ ತಾಳೆ ಬೆಳೆ ಬೆಳೆಯುವ ರೈತರಿಗೆ ಬೋರ್‌ವೆಲ್, ಬಾವಿ ನಿರ್ಮಿಸಿಕೊಳ್ಳಲು, ವಿದ್ಯುತ್, ಡೀಸೆಲ್ ಪಂಪ್ ಮತ್ತು ಯಂತ್ರೋಪಕರಣ ಖರೀದಿಗೆ ಹಾಗೂ ಜೇನು ಸಾಕಾಣಿಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ 2 ದಿನಗಳ ತರಬೇತಿಯೊಂದಿಗೆ ಜೇನು ಕುಟುಂಬ ಸಹಿತ ಗರಿಷ್ಠ 4 ಪೆಟ್ಟಿಗೆ ಖರೀದಿಗೆ ಶೇ. 75 ರಿಂದ 90 ರ ಸಹಾಯಧನ ಲಭ್ಯವಿದೆ.
ಮಹಾತ್ಮಾ ಗಾಂಧೀ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ, ಹಳೆ ತೋಟಗಳ ಪುನಶ್ಚೇತನ ಹಾಗೂ ಪೌಷ್ಟಿಕ ತೋಟಗಳ ನಿರ್ಮಾಣಕ್ಕೆ, ಗ್ರಾಮ ಪಂಚಾಯತಿಯಲ್ಲಿ ಅರ್ಜಿ ಸಲ್ಲಿಸಿ, ಈ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ. ಈ ಎಲ್ಲಾ ಯೋಜನೆಗಳ ಪ್ರಯೋಜನೆ ಪಡೆಯಲು ಆಸಕ್ತ ರೈತರು ಪ್ರಥಮ ಹಂತದಲ್ಲಿ, ನೋಂದಣಿ ಅರ್ಜಿಯೊಂದಿಗೆ ಬೆಳೆ ನಮೂದಿಸಿರುವ ಇತ್ತೀಚಿನ ಪಹಣಿ ಪತ್ರ ಮತ್ತು ಅಗತ್ಯ ಪ್ರಮಾಣ ಪತ್ರಗಳೊಂದಿಗೆ ಇಲಾಖೆಯಲ್ಲಿ ನೋಂದಾಯಿಸಿಕೊಳ್ಳಬೇಕು. ಇಲಾಖಾ ಮಾರ್ಗಸೂಚಿ ಅನುಸಾರ ಅರ್ಜಿಗಳನ್ನು ಜೇಷ್ಠತೆಯ ಆಧಾರದಲ್ಲಿ, ಇಲಾಖೆ ನಿಗಧಿಪಡಿಸಿದ ಗುರಿಗೆ ಅನುಗುಣವಾಗಿ ಸಹಾಯಧನಕ್ಕೆ ಪರಿಗಣಿಸಲಾಗುವುದು.

ರಾಷ್ಟ್ರೀಯ ತೋಟಗಾರಿಕೆ ಮಂಡಳಿಯ ವಿವಿಧ ಯೋಜನೆಗಳಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ: ತೋಟಗಾರಿಕೆ ಬೆಳೆಗಳ ಉತ್ಪಾದನೆ, ಉತ್ಪಾದಕತೆಯನ್ನು ಹೆಚ್ಚಿಸಿ, ಸಂಸ್ಕರಣೆ, ಶೇಖರಣೆ, ಸಾಗಾಣಿಕೆ ಹಾಗೂ ಮಾರುಕಟ್ಟೆ ವ್ಯವಸೆಯನ್ನು ಉತ್ತಮಗೊಳಿಸಿ ತೋಟಗಾರಿಕೆ ಉದ್ಯಮದ ಸಮಗ್ರ ಅಭಿವೃದ್ಧಿಯನ್ನು ಸುಧಾರಿಸುವ ಉದ್ದೇಶದಿಂದ ರಾಷ್ಟ್ರೀಯ ತೋಟಗಾರಿಕೆ ಮಂಡಳಿಯು ವಿವಿಧ ಯೋಜನೆಗಳನ್ನು ಜಾರಿಗೊಳಿಸಿದೆ. 2 ಹೆಕ್ಟೇರ್ (5.00 ಎಕ್ರೆ) ಗಿಂತ ಹೆಚ್ಚು ಪ್ರದೇಶದಲ್ಲಿ ಹೊಸ ತೋಟಗಳ ರಚನೆಗಾಗಿ ವಿವಿಧ ಘಟಕಗಳಾದ ಸಸ್ಯ ಉತ್ಪಾದನೆ, ಪ್ರದೇಶ ವಿಸ್ತರಣೆ, ನೀರಾವರಿ, ರಸಾವರಿ, ನಿಖರ ಬೇಸಾಯ ಮುಂತಾದವುಗಳನ್ನು ಒಳಗೊಂಡ ತೋಟ ಆಭಿವೃದ್ಧಿಗಾಗಿ ಶೆ.40 ರಂತೆ ಗರಿಷ್ಠ ರೂ. 30.00 ಲಕ್ಷ ಪ್ರತಿ ಯೋಜನೆಗೆ ಸಾಲ ಆಧಾರಿತ ಸಹಾಯಧನ ಹಾಗೂ ಸಂರಕ್ಷಿತ ಬೇಸಾಯದಡಿ 2500 ಚ.ಮೀ.ಗೂ ಹೆಚ್ಚಿನ ಆಧುನಿಕ ರೀತಿಯ ಹಸಿರು ಮನೆ ನಿರ್ಮಾಣಕ್ಕೆ, ಶೇ. 50 ರ ದರದಲ್ಲಿ ಗರಿಷ್ಠ ರೂ. 56.00 ಲಕ್ಷ ಪ್ರತಿ ಯೋಜನೆಗೆ ಸಾಲ ಆಧಾರಿತ ಸಹಾಯಧನ ಸೌಲಭ್ಯ ಲಭ್ಯವಿದೆ. ಸಮಗ್ರ ಕೊಯ್ಲೋತ್ತರ ನಿರ್ವಹಣೆಗಾಗಿ ಪ್ಯಾಕ್ ಹೌಸ್, ಹಣ್ಣು ಮಾಗಿಸುವ ಘಟಕ, ಶೀತಲ ವಾಹನ ಖರೀದಿ, ಚಿಲ್ಲರೆ ಮಾರಾಟ ಮಳಿಗೆ, ಶೀತಲ ಘಟಕ, ಪ್ರಾಥಮಿಕ ಸಂಸ್ಕರಣೆ ಘಟಕಗಳ ನಿರ್ಮಾಣಕ್ಕೆ ಗರಿಷ್ಠ ರೂ. 50.75 ಲಕ್ಷ ಸಾಲ ಆಧಾರಿತ ಪ್ರತಿ ಘಟಕಗಳಿಗೆ ಶೇ. 35 ರ ದರದಲ್ಲಿ ಹಾಗೂ ತೋಟಗಾರಿಕೆ ಉತ್ಪನ್ನಗಳನ್ನು ಶೇಖರಿಸಲು ವಿವಿಧ ಸಾಮರ್ಥ್ಯದ ಶೀತಲ, ಉಗ್ರಾಣಗಳ ನಿರ್ಮಾಣ, ವಿಸ್ತರಣೆ ಹಾಗೂ ಆಧುನೀಕರಣಗೊಳಿಸಲು ಸಹ ಶೇ. 35ರ ಸಹಾಯಧನ ಸೌಲಭ್ಯವಿದ್ದು, ಈ ಯೋಜನೆಗಳನ್ನು ವೈಯುಕ್ತಿಕ ಅಥವಾ ಸಂಸ್ಥೆಗಳು ಪಡೆಯಬಹುದಾಗಿದೆ.

ಸರ್ಕಾರಿ ಸಂಸ್ಥೆಗಳಲ್ಲಿ, ಉತ್ತಮ ಜಾತಿಯ ಗುಣಮಟ್ಟದ ಸಸಿಗಳ ಉತ್ಪಾದನೆಯಲ್ಲಿ ತಾಯಿ ಮರಗಳ ಘಟಕ, ಹಸಿರುಮನೆ, ಅಂಗಾಂಶ ಕೃಷಿ ಪ್ರಯೋಗಾಲಯ, ವೈರಸ್ ಇಂಡೆಕ್ಸಿಂಗ್ ಅನುಕೂಲ, ಗುಣಮಟ್ಟ ಧೃಢೀಕರಣ ಪ್ರಯೋಗಾಲಯ ಮುಂತಾದವುಗಳ ಸ್ಥಾಪನೆಗಾಗಿ ಶೇ.100 ರಷ್ಟು ಸಹಾಯಧನ ಸೌಲಭ್ಯವಿದ್ದು, ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕ ನಿರ್ದೇಶಕರು, ಜಿಲ್ಲಾ ಪಂಚಾಯತ್, ಉಡುಪಿ ಮೊ.ನಂ: 8095991105 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!