Wednesday, January 22, 2025
Wednesday, January 22, 2025

ಬಾಲ್ಯದಿಂದಲೇ ಓದುವ ಹವ್ಯಾಸ ರೂಢಿಸಿಕೊಳ್ಳಿ: ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ

ಬಾಲ್ಯದಿಂದಲೇ ಓದುವ ಹವ್ಯಾಸ ರೂಢಿಸಿಕೊಳ್ಳಿ: ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ

Date:

ಉಡುಪಿ, ಜುಲೈ 19: ಪುಸ್ತಕಗಳಲ್ಲಿ ಆಗಾಧ ಮಾಹಿತಿ ಸಿಗುವುದರಿಂದ ಮಕ್ಕಳು ಬಾಲ್ಯದಿಂದಲೇ ಓದುವ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ ಕೆ. ವಿದ್ಯಾಕುಮಾರಿ ಹೇಳಿದರು. ಅವರು ನಗರದ ಅಜ್ಜರಕಾಡು ವಿದ್ಯಾವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ನಗರ ಕೇಂದ್ರ ಗ್ರಂಥಾಲಯದಲ್ಲಿ ಓದುವ, ಡಿಜಿಟಲ್ ಓದುವ ದಿನ, ಓದುವ ತಿಂಗಳು ಆಚರಣೆ ಪ್ರಯುಕ್ತ ಪುಸ್ತಕ ಪ್ರದರ್ಶನ ಮತ್ತು ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಓದು ನಮ್ಮ ಹವ್ಯಾಸವಾದಾಗ ಮುಂದೆ ಓದುವ ಪ್ರವೃತ್ತಿ ಬೆಳೆಯುತ್ತದೆ. ಗ್ರಂಥಾಲಯಗಳು ವಿವಿಧ ತರಹದ ಸ್ಪರ್ಧೆಗಳನ್ನು ಏರ್ಪಡಿಸುವುದರ ಮೂಲಕ ಓದುವ ಪ್ರವೃತ್ತಿಯನ್ನು ಉತ್ತೇಜಿಸಬೇಕು. ಇದು ಹೈಟೆಕ್ ಗ್ರಂಥಾಲಯವಾಗಿದ್ದು, ಎಲ್ಲಾ ತರಹದ ಪುಸ್ತಕಗಳು ಲಭ್ಯವಿದೆ. ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಗ್ರಂಥಾಲಯದ ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು. ಕಾರ್ಯಕ್ರಮದ ಅಂಗವಾಗಿ ನಗರದ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು.

ಎಸ್ ದೇವೇಂದ್ರ ಪೆಜತ್ತಾಯ ಬರೆದಿರುವ 400 ಕ್ಕೂ ಅಧಿಕ ಪುಸ್ತಕಗಳನ್ನು ಉಚಿತವಾಗಿ ಜಿಲ್ಲಾಧಿಕಾರಿಯವರ ಮುಖಾಂತರ ಗ್ರಂಥಾಲಯಕ್ಕೆ ಹಸ್ತಾಂತರ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಉಪಾಧ್ಯಕ್ಷೆ ವಸಂತಿ ಶೆಟ್ಟಿ ಬ್ರಹ್ಮಾವರ, ಸಾಹಿತಿ ಸಂಗೀತ ಜಾನ್ಸನ್ ಉಪಸ್ಥಿತರಿದ್ದರು. ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜಿ.ಐ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು, ಗ್ರಂಥಪಾಲಕಿ ರಂಜಿತ ಸಿ ನಿರೂಪಿಸಿ, ಪ್ರಥಮ ದರ್ಜೆ ಸಹಾಯಕಿ ಶಕುಂತಳಾ ಕುಂದರ್ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆಎಂಸಿ ಮಣಿಪಾಲಕ್ಕೆ ಪ್ರತಿಷ್ಠಿತ ಸ್ಪಾರ್ಕ್ ಅನುದಾನ

ಮಣಿಪಾಲ, ಜ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ನೇತ್ರಶಾಸ್ತ್ರ ವಿಭಾಗದ...

ಮಲ್ಪೆ: ಸಿರಿಧಾನ್ಯ ರೋಡ್ ಶೋ

ಉಡುಪಿ, ಜ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಉಡುಪಿ...

‘ಬೃಂದಾವನದಿಂದ ಉಡುಪಿಯೆಡೆ’ ಸಾಂಝಿ ಕಲಾಕೃತಿಗಳ ಪ್ರದರ್ಶನ

ಉಡುಪಿ, ಜ.22: ಭಾವನಾ ಫೌಂಡೇಶನ್ ಹಾವಂಜೆ ಹಾಗೂ ಭಾಸ ಗ್ಯಾಲರಿ ಮತ್ತು...
error: Content is protected !!