ಮಣಿಪಾಲ, ಜು. 20: ಪ್ರತಿಷ್ಠಿತ ಭಾರತೀಯ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಸಂಸ್ಥೆ ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಹೊಸ ಶೈಕ್ಷಣಿಕ ವರ್ಷದ ಉದ್ಘಾಟನಾ ಸಮಾರಂಭ ನಡೆಯಿತು. ಉಡುಪಿ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾ ಕುಮಾರಿ ಸಮಾರಂಭ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಉಡುಪಿ ಜಿಲ್ಲೆಗೆ ಇನ್‌ಸ್ಟಿಟ್ಯೂಟ್ ಆಫ್ ಎಮಿನೆನ್ಸ್ ಮತ್ತು ಅಗ್ರ ಶ್ರೇಯಾಂಕದ ಸಂಸ್ಥೆಯನ್ನು ಜಿಲ್ಲೆಗೆ ಕೊಡುಗೆ ನೀಡುತ್ತಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು.
ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್‌ನ ಉಪಕುಲಪತಿ ಲೆಫ್ಟಿನೆಂಟ್ ಜನರಲ್ ಡಾ. ಎಂ. ಡಿ. ವೆಂಕಟೇಶ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವರ್ಷ ಫಲಪ್ರದವಾಗಲಿ ಎಂದರು. ಕಾರ್ಯಕ್ರಮದಲ್ಲಿ ಮಾಹೆ ರಿಜಿಸ್ಟ್ರಾರ್ ಡಾ.ಗಿರಿಧರ್ ಕಿಣಿ, ಎಂಐಟಿ ನಿರ್ದೇಶಕ ಕಮಾಂಡರ್ ಡಾ.ಅನಿಲ್ ರಾಣಾ, ಎಂಐಟಿ ಜಂಟಿ ನಿರ್ದೇಶಕ ಡಾ.ಸೋಮಶೇಖರ ಭಟ್, ವಿದ್ಯಾರ್ಥಿ ಕ್ಷೇಮಪಾಲನಾ ಸಹ ನಿರ್ದೇಶಕಿ ಡಾ.ಪೂರ್ಣಿಮಾ ಕುಂದಾಪುರ ಉಪಸ್ಥಿತರಿದ್ದರು. ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳು, ಪೋಷಕರು ಮತ್ತು ಎಂ.ಐ.ಟಿ ಹಳೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.