ಉಡುಪಿ, ಜುಲೈ 20: ಉಡುಪಿ ತಾಲೂಕಿನಲ್ಲಿ ಕೋಟ್ಪಾ ಕಾಯಿದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ತಾಲೂಕು ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಆವರ್ಸೆ ಮತ್ತು ಮಂದಾರ್ತಿ ವ್ಯಾಪ್ತಿ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಿ, ಸೆಕ್ಷನ್ 4, 6(ಎ) ಮತ್ತು 6(ಬಿ) ಅಡಿಯಲ್ಲಿ 36 ಪ್ರಕರಣ ದಾಖಲಿಸಿ, 5900 ರೂ. ದಂಡ ವಸೂಲಿ ಮಾಡಲಾಯಿತು. ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದೇವಪ್ಪ ಪಟಗಾರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ, ಶಿಕ್ಷಣ ಸಂಯೋಜಕ ಪ್ರಕಾಶ್ ಬಿ., ಬ್ರಹ್ಮಾವರ ಪೊಲೀಸ್ ಠಾಣೆಯ ಎಎಸ್‌ಐ ಬಿ.ಕೆ ಶಾಂತಾರಾಜ್, ಎನ್.ಟಿ.ಸಿ.ಪಿ ವಿಭಾಗದ ಸಾಮಾಜಿಕ ಕಾರ್ಯಕರ್ತೆ ಶೈಲಾ ಶ್ಯಾಮನೂರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಆವರ್ಸೆ, ಮಂದಾರ್ತಿ: ಕೋಟ್ಪಾ ಕಾಯ್ದೆಯಡಿ 36 ಪ್ರಕರಣ ದಾಖಲು
ಆವರ್ಸೆ, ಮಂದಾರ್ತಿ: ಕೋಟ್ಪಾ ಕಾಯ್ದೆಯಡಿ 36 ಪ್ರಕರಣ ದಾಖಲು
Date: