Wednesday, November 27, 2024
Wednesday, November 27, 2024

ಜು. 25-26- ಉಡುಪಿ ಜಿಲ್ಲೆಯಲ್ಲಿ ವಿದ್ಯುತ್ ವ್ಯತ್ಯಯ

ಜು. 25-26- ಉಡುಪಿ ಜಿಲ್ಲೆಯಲ್ಲಿ ವಿದ್ಯುತ್ ವ್ಯತ್ಯಯ

Date:

ಉಡುಪಿ, ಜುಲೈ 21: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಜುಲೈ 25 ಮತ್ತು 26 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. ಶಿರಿಯಾರ ಶಾಖಾ ವ್ಯಾಪ್ತಿಯಲ್ಲಿ Structure replacement, additional TC Work, Railway Crossing shifting Work ಮತ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ 110/11 ಕೆ.ವಿ ಮಧುವನ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಬಿಲ್ಲಾಡಿ, ಮಂದಾರ್ತಿ ಮತ್ತು ಶಿರಿಯಾರ ಫೀಡರ್‌ಗಳ ಶಿರಿಯಾರ, ಶಿರೂರು, ಅಚ್ಲಾಡಿ, ಸೈಬ್ರಕಟ್ಟೆ, ಹೆಸ್ಕತ್ತೂರು, ಯಡ್ತಾಡಿ, ಬಿಲ್ಲಾಡಿ, ವಂಡಾರು, ಆವರ್ಸೆ, ಮಂದಾರ್ತಿ, ಗುಡ್ಡಟ್ಟು, ಕಕ್ಕುಂಜೆ, ಹೆಗ್ಗುಂಜೆ, ಮಧುವನ, ಕೊಕ್ಕರ್ಣೆ, ಹೆಸ್ಕತ್ತೂರು, ಬೇಳೂರು, ಕೊರ್ಗಿ, ಕಾವಡಿ ಹಿಲಿಯಾಣ, ಹಳ್ಳಾಡಿ-ಹರ್ಕಾಡಿ ಹಾಗೂ ಬಾರಾಳಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜುಲೈ 25 ರಂದು ಬೆಳಗ್ಗೆ 9 ರಿಂದ ಸಂಜೆ 6 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಮಾಡಲಾಗುವುದು.

ನಾವುಂದ ಕೊಯಾನಗರ ರೈಲ್ವೆಬ್ರಿಡ್ಜ್ ರೋಡ್ ಕ್ರಾಸ್ 11 ಕೆ.ವಿ ಆಲೂರು, ಬಡಾಕೆರೆ ಹಾಗೂ ಹೇರೂರು ಮಾರ್ಗಗಳ ಓವರ್‌ಹೆಡ್ ಮಾರ್ಗವನ್ನು ಭೂಗತ ಕೇಬಲ್ ಮಾರ್ಗಕ್ಕೆ ಬದಲಾಯಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, 110/11 ಕೆ.ವಿ ನಾವುಂದ ವಿದ್ಯುತ್ ಉಪಕೇಂದ್ರದಿಂದ ಹೊರಡುವ 33/11 ಕೆ.ವಿ ಬೈಂದೂರು ಮತ್ತು ಕೊಲ್ಲೂರು ಮಾರ್ಗ ಮತ್ತು 11 ಕೆ.ವಿ ಆಲೂರು, ಬಡಾಕೆರೆ ಹಾಗೂ ಹೇರೂರು ಮಾರ್ಗಗಳಲ್ಲಿ ಬೈಂದೂರು, ಉಪ್ಪುಂದ, ಶಿರೂರು, ಗಂಗನಾಡು, ತೂದಳ್ಳಿ, ತಗ್ಗರ್ಸೆ, ಯಡ್ತರೆ, ಕೊಲ್ಲೂರು, ಜಡ್ಕಲ್, ಇಡೂರು, ಹೊಸೂರು, ಮುದೂರು, ಗೋಳಿಹೊಳೆ,, ಯಳಜಿತ್, ಆಲೂರು, ಬಡಾಕೆರೆ ಮತ್ತು ಹೇರೂರು ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜುಲೈ 25 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

110/11 ಕೆ.ವಿ ಮಧುವನ ಉಪಕೇಂದ್ರದಿಂದ ಹೊರಡುವ ಬಾರ್ಕೂರು ಎಕ್ಸ್ಪ್ರೆಸ್ ಫೀಡರ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹೊಸಾಳ, ಕಚ್ಚೂರು, ರಂಗನಕೆರೆ, ಹೇರಾಡಿ, ಹನೆಹಳ್ಳಿ, ಕೂರಾಡಿ, ನಡೂರು, ಪಡುನೀಲಾವರ, ಬೆಣ್ಣೆಕುದ್ರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜುಲೈ 25 ರಂದು ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. 110/11 ಕೆ.ವಿ ಬೆಳಪು ವಿದ್ಯುತ್ ಸ್ಥಾವರದಿಂದ ಹೊರಡುವ 11 ಕೆ.ವಿ ಪಣಿಯೂರು ಫೀಡರ್ ಮಾರ್ಗದಲ್ಲಿ ನಿಯತಕಾಲಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಪಣಿಯೂರು, ಬೆಳಪು ಗ್ರಾಮ ಪಂಚಾಯತ್ ಏರಿಯಾ, ಕೆಐಎಡಿಬಿ ಇಂಡಸ್ಟ್ರಿಯಲ್ ಏರಿಯಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜು. 25 ರಂದು ಬೆಳಗ್ಗೆ 9 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುಗಲಿದೆ. ಲೈನ್ ಶಿಫ್ಟಿಂಗ್ ಹಾಗೂ 110 ಕೆ.ವಿ ಕಾರ್ಕಳ ವಿದ್ಯುತ್ ಕೇಂದ್ರದಲ್ಲಿ ಫೀಡರ್ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಕಾರ್ಕಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಬಂಡಿಮಠ ದುರ್ಗಾ, ಬೈಲೂರ್ ಎಕ್ಸ್ಪ್ರೆಸ್, ಮುಂಡ್ಲಿ, ಜಾರ್ಕಳ, ಕೆ.ಹೆಚ್.ಬಿ, ನಕ್ರೆ ಮತ್ತು ಪದವು ಫೀಡರ್‌ಗಳಲ್ಲಿ ವಿದ್ಯುತ್ ನಿಲುಗಡೆಗೊಳಿಸಲಾಗುವುದು. ಆದ್ದರಿಂದ ಬಂಡೀಮಠ, ಪೆರ್ವಾಜೆ, ಪತ್ತೊಂಜಿಕಟ್ಟೆ, ಜೋಡುರಸ್ತೆ, ಮುಂಡ್ಲಿ, ತೆಳ್ಳಾರು, ಪಲಾಯಿಪಕ್ಯಾರು, ಕಜೆ, ಪೊಲ್ಲಾರು, ಕುಕ್ಕುಂದೂರು, ಅಯ್ಯಪ್ಪನಗರ, ಪಿಲಿಚಂಡಿ ಸ್ಥಾನ, ಗಣಿತನಗರ, ಜಾರ್ಕಳ, ದುರ್ಗಾ, ಮಲೆಬೆಟ್ಟು, ಕಡಂಬಳ, ಬೈಲೂರು, ನೀರೆ, ಕೌಡೂರು, ಕೆ.ಹೆಚ್.ಬಿ. ಕಾಲೋನಿ, ಎರ್ಲಪಾಡಿ, ಪರಪು, ಕುಂಟಾಡಿ, ಪಳ್ಳಿ, ಆನಂದಿ ಮೈದಾನ, ನಕ್ರೆ, ಪೊಸನೊಟ್ಟು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜು. 25 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

110/33/11 ಕೆ.ವಿ ವಿದ್ಯುತ್ ಸ್ಥಾವರ ಮಣಿಪಾಲದಲ್ಲಿ 110ಕೆ.ವಿ ಬಸ್‌ನಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಸದರಿ ಸ್ಥಾವರದಿಂದ ಹೊರಡುವ 110 ಕೆ.ವಿ ನಿಟ್ಟೂರು, 110 ಕೆ.ವಿ ಬ್ರಹ್ಮಾವರ, 33 ಕೆವಿ ಶಿರ್ವ, 33 ಕೆವಿ ಕುಂಜಿಬೆಟ್ಟು 1 ಮತ್ತು 2 ಮಾರ್ಗಗಳಲ್ಲಿ, 33 ಕೆವಿ ಮಲ್ಪೆ/ಉದ್ಯಾವರ ಹಾಗೂ ಎಲ್ಲಾ 11ಕೆವಿ ಫೀಡರಿನಲ್ಲಿ ಉಡುಪಿ, ಮಣಿಪಾಲ, ಕುಂಜಿಬೆಟ್ಟು, ನಿಟ್ಟೂರು, ಮಲ್ಪೆ, ಉದ್ಯಾವರ, ಶಿರ್ವ, ಬ್ರಹ್ಮಾವರ ವ್ಯಾಪ್ತಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಜು. 26 ರಂದು ಬೆಳಗ್ಗೆ 10 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. 110/33/11 ಕೆವಿ ಮಣಿಪಾಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಕೆ.ಎಂ.ಎಫ್ ಮತ್ತು ಪ್ರಗತಿನಗರ ಫೀಡರಿನಲ್ಲಿ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಈಶ್ವರನಗರ, ಸರಳೆಬೆಟ್ಟು, ಗಣೇಶ್ ಭಾಗ್, ಪ್ರಗತಿನಗರ, 80 ಬಿಬಿಟಿ, ಟ್ಯಾಪ್ಮಿ, ಶಾಂತಿನಗರ, ರಾಜೀವನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜು. 26 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ.

33/11 ಕೆವಿ ಹೆಬ್ರಿ ಉಪವಿದ್ಯುತ್ ಸ್ಥಾವರದಿಂದ ಹೊರಡುವ 11 ಕೆ.ವಿ ಹೆಬ್ರಿ, ಶಿವಪುರ, ಚಾರ, ಮುದ್ರಾಡಿ ಫೀಡರಿನಲ್ಲಿ ವ್ಯವಸ್ಥಾ ಸುಧಾರಣಾ ಕಾಮಗಾರಿ ಹಾಗೂ ಮಾರ್ಗನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹೆಬ್ರಿಪೇಟೆ, ಗುಳಿಬೆಟ್ಟು, ಮಠದಬೆಟ್ಟು, ಬಂಗಾರಗುಡ್ಡೆ, ರಾಜೀವನಗರ, ಇಂದಿರಾನಗರ, ಹೆಬ್ರಿ, ಚಾರ, ಹೊಸೂರು, ಶಿವಪುರ, ಭಟ್ಟಂಪಳ್ಳಿ, ಪಾಂಡುಕಲ್ಲು, ಎಳ್ಳಾರೆ, ಶಂಕರಲಿಂಗೇಶ್ವರ ದೇವಸ್ಥಾನದ ಬಳಿ, ಮುಳ್ಳುಗುಡ್ಡೆ, ಕನ್ಯಾನ, ಸರ್ಕಾರಿ ಆಸ್ಪತ್ರೆ ಬಳಿ, ಮುದ್ರಾಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜು. 26 ರಂದು ಬೆಳಗ್ಗೆ 9 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಕಲಚೇತನರ ಸಪ್ತಾಹ ಉದ್ಘಾಟನೆ

ಉಡುಪಿ, ನ.26: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ...

ನಗರದ ಸ್ವಚ್ಛತೆಗೆ ಪೌರಕಾರ್ಮಿಕರ ಕೊಡುಗೆ ಅಮೂಲ್ಯ: ಶಾಸಕ ಯಶ್‌ಪಾಲ್ ಎ ಸುವರ್ಣ

ಉಡುಪಿ, ನ.26: ಸ್ವಚ್ಛತೆಯಲ್ಲಿ ಉಡುಪಿಯು ರಾಷ್ಟ್ರಮಟ್ಟದಲ್ಲಿ ಗುರುತಿಸಲು ಕಾರಣ ಜಿಲ್ಲೆಯ ಪೌರಕಾರ್ಮಿಕರು....

ರಥಬೀದಿ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಮಂಗಳೂರು, ನ.26: ಡಾ. ಪಿ. ದಯಾನಂದ ಪೈ-ಪಿ.ಸತೀಶ್ ಪೈ. ಸರ್ಕಾರಿ ಪ್ರಥಮ...

ಆಳ್ವಾಸ್ ಕಾಲೇಜಿನಲ್ಲಿ ಸಿನಿಮಾ ರಸಗ್ರಹಣ ಕಾರ್ಯಾಗಾರ

ವಿದ್ಯಾಗಿರಿ, ನ.26: ಗಾಳಿ, ನೀರು, ಅಗ್ನಿಯಷ್ಟೇ ‘ದೃಶ್ಯ-ಶ್ರವ್ಯ ಮಾಧ್ಯಮ’ವೂ ಬದುಕಿನ ಅವಿಭಾಜ್ಯ...
error: Content is protected !!