Home ಸುದ್ಧಿಗಳು ಪ್ರಾದೇಶಿಕ ಉಡುಪಿ ಜಿಲ್ಲಾ ಜೀವಶಾಸ್ತ್ರ ಉಪನ್ಯಾಸಕರ ಕಾರ್ಯಾಗಾರ

ಉಡುಪಿ ಜಿಲ್ಲಾ ಜೀವಶಾಸ್ತ್ರ ಉಪನ್ಯಾಸಕರ ಕಾರ್ಯಾಗಾರ

853
0

ಉಡುಪಿ, ಜು. 24: ಉಡುಪಿ ಜಿಲ್ಲಾ ಜೀವಶಾಸ್ತ್ರ ಉಪನ್ಯಾಸಕರ ಸಂಘ ಹಾಗೂ ಉಡುಪಿ ಜ್ಞಾನಸುಧಾ ಪ.ಪೂ. ಕಾಲೇಜು ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ.ಪೂ. ಕಾಲೇಜುಗಳ ಜೀವಶಾಸ್ತ್ರ ಉಪನ್ಯಾಸಕರಿಗೆ ಒಂದು ದಿನದ ಕಾರ್ಯಾಗಾರ ಉಡುಪಿ ಕಡಿಯಾಳಿಯ ಜ್ಞಾನಸುಧಾ ಪ.ಪೂ. ಕಾಲೇಜು ನಾಗಬನ ಕ್ಯಾಂಪಸ್ ನಲ್ಲಿ ನಡೆಯಿತು.

ಪದವಿಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರಾದ ಮಾರುತಿ ಉದ್ಘಾಟನೆ ನೆರವೇರಿಸಿದರು. ಮುಂದೆ ಬರುವ ವಿವಿಧ ರೀತಿಯ ಪರೀಕ್ಷೆಗಳನ್ನು ಧೈರ್ಯದಿಂದ ಎದುರಿಸುವಲ್ಲಿ ಉಪನ್ಯಾಸಕರ ಪಾತ್ರದ ಮಹತ್ವವನ್ನು ತಿಳಿಯಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರು ವಹಿಸಿ ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿವಿಧ ಸವಾಲುಗಳ ನಡುವೆ ಉಪನ್ಯಾಸಕರು ಉತ್ತಮವಾದ ಮೌಲ್ಯಗಳನ್ನು ರೂಢಿಸಿಕೊಂಡು ಮಕ್ಕಳಿಗೆ ಸುದೃಢ ಭವಿಷ್ಯ ಕಲ್ಪಿಸಿ ತಾವೂ ಕೂಡ ಅತ್ಯುತ್ತಮವಾದ ಜೀವನವನ್ನು ಹೊಂದುವಂತಾಗಬೇಕು. ಜೀವಶಾಸ್ತ್ರದಲ್ಲಿ ಮಹತ್ತರ ಪಾತ್ರ ವಹಿಸುವ ಪ್ರಯೋಗಾಲಯ ಬಳಕೆಯ ಉದ್ದೇಶ ನಿಜವಾದ ಅರ್ಥದಲ್ಲಿ ಗೊತ್ತಾಗಬೇಕು. ಸಂಶೋಧನೆ ಜೀವನದ ಒಂದು ಅಂಗವಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಜೀವಶಾಸ್ತ್ರ ವಿಷಯದಲ್ಲಿ 2022-23 ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ನೂರಕ್ಕೆ ನೂರು ಅಂಕ ಪಡೆದ ವಿದ್ಯಾರ್ಥಿಗಳ ಕಾಲೇಜುಗಳನ್ನು ಗುರುತಿಸಿ ಅಲ್ಲಿಯ ಉಪನ್ಯಾಸರನ್ನು ಅಭಿನಂದಿಲಾಯಿತು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿ ಜ್ಞಾನಸುಧಾ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ, ಕಾರ್ಕಳ ಜ್ಞಾನಸುಧಾ ಪ.ಪೂ. ಕಾಲೇಜು ಗಣಿತನಗರ ಕ್ಯಾಂಪಸ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಪ್ರಾಂಶುಪಾಲರಾದ ದಿನೇಶ್ ಎಂ ಕೊಡವೂರು ಉಪಸ್ಥಿತರಿದ್ದರು.

ಉಡುಪಿ ಜಿಲ್ಲಾ ಪದವಿಪೂರ್ವ ವಿಭಾಗದ ಜೀವಶಾಸ್ತ್ರ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಸುಬ್ರಹ್ಮಣ್ಯ ಭಟ್ ಸ್ವಾಗತಿಸಿ, ಸಂಘದ ಕಾರ್ಯದರ್ಶಿಗಳಾದ ಡಾ. ವಿಶಾಲಾಕ್ಷಿ ಹೆಗ್ಡೆ ವಂದಿಸಿದರು. ಭಾಗ್ಯಶ್ರೀ ಐತಾಳ್ ಕಾರ್ಯಕ್ರಮದ ನಿರೂಪಣೆಯನ್ನು ನೆರವೇರಿಸಿದರು.

ಕಾರ್ಯಕ್ರಮದ ಪ್ರಮುಖ ಅಂಗವಾಗಿ ನಿಟ್ಟೆ ಬಯೋಟೆಕ್ನಾಲಜಿ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ. ಶ್ಯಾಮಪ್ರಸಾದ್ ಸಜಂಕಿಲ ಅವರು ಜೈವಿಕ ತಂತ್ರಜ್ಞಾನ ಅನ್ವಯಗಳು ವಿಷಯದ ಬಗ್ಗೆ ಉಪನ್ಯಾಸ ನಡೆಸಿದರು. ಬದಲಾದ ಪ್ರಾಯೋಗಿಕ ಪರೀಕ್ಷೆ ಹಾಗೂ ಪಠ್ಯಕ್ರಮದ ಬಗ್ಗೆ ಮಲ್ಪೆ ಸರಕಾರಿ ಪ.ಪೂ ಕಾಲೇಜಿನ ಪ್ರಾಂಶುಪಾಲರಾದ ವರ್ಗೀಸ್ ಪಿ. ಇವರ ಅಧ್ಯಕ್ಷತೆಯಲ್ಲಿ ಚರ್ಚಿಸಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.