Tuesday, January 21, 2025
Tuesday, January 21, 2025

ಭಾರಿ ಮಳೆಯಲ್ಲಿಯೇ ಗದ್ದೆಯನ್ನು ಉಳುಮೆ ಮಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ

ಭಾರಿ ಮಳೆಯಲ್ಲಿಯೇ ಗದ್ದೆಯನ್ನು ಉಳುಮೆ ಮಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ

Date:

ಉಡುಪಿ, ಜು. 24: ಜಿಲ್ಲೆಯಾದ್ಯಂತ ಮತ್ತೊಮ್ಮೆ ಮಳೆಯು ಚುರುಕುಗೊಂಡಿದ್ದು, ಭಾರಿ ಮಳೆ ಆಗುತ್ತಿದೆ. ಈ ಬಾರಿ ಮಳೆಯು ವಿಳಂಬವಾದ ಕಾರಣ ತಡವಾಗಿ ಆರಂಭಗೊಂಡ ಭತ್ತದ ಕೃಷಿಯ ಚಟುವಟಿಕೆಗಳು, ಪ್ರಸ್ತುತ ಮಳೆಯ ನಡುವೆಯೂ ಚುರುಕಾಗಿ ನಡೆಯುತ್ತಿವೆ. ಹಡಿಲು ಭೂಮಿ ಕೃಷಿಗೂ ತೊಂದರೆಯಾಗದ ಮಳೆ ಜಿಲ್ಲೆಯಲ್ಲಿ, ಚಿಕ್ಕ ಹಿಡುವಳಿ, ಕೂಲಿಕಾರರ ಸಮಸ್ಯೆ ಹಾಗೂ ಲಾಭದಾಯಕವಲ್ಲದ ಕಾರಣದಿಂದಾಗಿ ಜನರು ಕೃಷಿಯಿಂದ ವಿಮುಖರಾಗಿ ಸಾವಿರಾರು ಎಕರೆ ಭತ್ತದ ಗದ್ದೆಗಳನ್ನ ಹಡಿಲು ಬಿಟ್ಟಿರುವುದನ್ನ ಗಮನದಲ್ಲಿರಿಸಿ ಉಡುಪಿ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರಸನ್ನ ರವರು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ- ಸಂಜೀವಿನಿ ಹಾಗೂ ಕೃಷಿ ಇಲಾಖೆಗಳ ಮೂಲಕ ಹಡಿಲು ಭೂಮಿಯನ್ನು ಕೃಷಿ ಮಾಡುವ ಮಹತ್ವಾಕಾಂಕ್ಷಿ ಕಾರ್ಯಕ್ಕೆ ಒತ್ತು ನೀಡಿ, ಗ್ರಾಮ ಪಂಚಾಯತ್ ವಾರು ಗುರಿಯನ್ನು ನಿಗದಿಗೊಳಿಸಿ ಅಧೀನ ಸಿಬ್ಬಂದಿಗಳಿಗೆ ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಕಳೆದ ಎರಡು ತಿಂಗಳುಗಳಿಂದ ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಈ ಮೂಲಕ ಈಗಾಗಲೇ 1034 ಎಕ್ರೆ ಭೂಮಿಯನ್ನು ಜಿಲ್ಲೆಯಲ್ಲಿ ಗುರುತಿಸಿ ಸಂಜೀವಿನಿ ಸದಸ್ಯರು ಭತ್ತದ ಕೃಷಿಯಲ್ಲಿ ತೊಡಗಿಸಿಕೊಂಡಿರುತ್ತಾರೆ. ಈ ಮೂಲಕ ಸುಸ್ಥಿರ ಅಭಿವೃದ್ಧಿಯ, ಸ್ವಾವಲಂಬನೆಯ ಹಾಗೂ ಪರಿಸರ ಪೂರಕವಾದ ಮಹತ್ಕಾರ್ಯದಲ್ಲಿ ಭಾಗಿಯಾಗುತ್ತಿದ್ದಾರೆ.

ಹಲವಾರು ಕಡೆ ಈಗಾಗಲೇ ನೇರ ಬಿತ್ತನೆ ಮೂಲಕ ಹಾಗೂ ನಾಟಿಯ ಮೂಲಕ ಬೇಸಾಯ ಆರಂಭವಾಗಿದೆ.
ಭಾನುವಾರ ಕುಂದಾಪುರ ತಾಲೂಕಿನ ಅಂಪಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಡಾಳಿಯಲ್ಲಿ 12 ಎಕರೆ ಹಡಿಲು ಭೂಮಿಯಲ್ಲಿ ಭತ್ತದ ಕೃಷಿಯ ನಾಟಿ ಮಾಡುವ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಖುದ್ದಾಗಿ ಭಾಗವಹಿಸಿದ್ದರು. ಕುಂದ ನಾಡು ರೈತ ಉತ್ಪಾದಕ ಸಂಸ್ಥೆ ಹಾಗೂ ಅಂಪಾರು ರೋಟರಿ ಕ್ಲಬ್ ರವರ ಸಹಯೋಗದಲ್ಲಿ ವನಶ್ರೀ ಸಂಜೀವಿನಿ ಒಕ್ಕೂಟದ ನೂರಾರು ಸದಸ್ಯರು ಭತ್ತದ ನಾಟಿ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಸಭಾ ಕಾರ್ಯಕ್ರಮವನ್ನು ಭತ್ತದ ನೇಜಿಯ ಕಟ್ಟನ್ನು ಬಿಚ್ಚಿ ವಿತರಿಸುವುದರ ಮೂಲಕ ಸಿಇಒ ರವರು ಉದ್ಘಾಟಿಸಿದರು. ಸಮಾರಂಭದಲ್ಲಿ ಸ್ಥಳೀಯ ಕೃಷಿಕರನ್ನು ಸನ್ಮಾನಿಸಲಾಯಿತು. ಸಿಇಒ ರವರು ಹಡಿಲು ಭೂಮಿ ಕೃಷಿಯ ಮಹತ್ವದ ಬಗ್ಗೆ ವಿವರಿಸಿ, ಈ‌ ಉತ್ತಮವಾದ ಕಾರ್ಯದಲ್ಲಿ ಪಾಲ್ಗೊಂಡವರನ್ನು ಶ್ಲಾಘಿಸಿದರು. ಕುಂದನಾಡು ರೈತ ಉತ್ಪಾದಕ ಸಂಸ್ಥೆಯ ಅಧ್ಯಕ್ಷರಾದ ಸಂತೋಷ್ ಬಲ್ಲಾಡಿರವರು ರೈತ ಉತ್ಪಾದಕ ಸಂಸ್ಥೆಯ ಕಾರ್ಯಚಟುವಟಿಕೆಗಳ ಬಗ್ಗೆ ಹಾಗೂ ಹಡಿಲು ಭೂಮಿ ಕೃಷಿಯ ಕಾರ್ಯದ ಬಗ್ಗೆ ತಿಳಿಸಿದರು.

ಸಭಾ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕ ಪದ್ಧತಿಗಳ ಅನಾವರಣವೂ ಆಯಿತು. ಅನಂತರ ಮಳೆಯ ನಡುವೆಯೇ ಗದ್ದೆಗೆ ಇಳಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ರವರು ಭಾರಿ ಮಳೆಯ‌ನ್ನು ಲೆಕ್ಕಿಸದೇ ಗದ್ದೆಯಲ್ಲಿ ಕೋಣಗಳ ಮೂಲಕ ಉಳುಮೆ ಮಾಡಿ ಹಾಗೂ ಭತ್ತದ ನೇಜಿಯನ್ನು ನೆಡುವುದರ ಮೂಲಕ ಹಡಿಲು ಭೂಮಿ ಕೃಷಿಯ ಮಾದರಿ ಕಾರ್ಯಕ್ಕೆ ಅರ್ಥಪೂರ್ಣ ಚಾಲನೆ ನೀಡಿದರು. ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭಾರತಿ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ರೂಪ, ಕುಂದನಾಡು ರೈತ ಉತ್ಪಾದಕ ಸಂಸ್ಥೆಯ ಕಾರ್ಯದರ್ಶಿ ಉಮೇಶ್ ಶಾನ್ಕಟ್, ರೋಟರಿ ಕ್ಲಬ್ ಅಧ್ಯಕ್ಷರಾದ ನವೀನ್ ಕುಮಾರ್ ಶೆಟ್ಟಿ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಲಕ್ಷ್ಮಿ ಶೆಟ್ಟಿ, ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ರೋಷನಿ ಶೆಟ್ಟಿ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯತ್ ಸದಸ್ಯರು, ಸಂಜೀವಿನಿ ಸದಸ್ಯರು, ರೈತ ಉತ್ಪಾದಕ ಸಂಸ್ಥೆಯ ಸದಸ್ಯರು ಸೇರಿದಂತೆ ನೂರಾರು ಜನರು ಉಪಸ್ಥಿತರಿದ್ದು, ನೇಜಿಯನ್ನು ನೆಟ್ಟರು. ಕಾರ್ಯಕ್ರಮವನ್ನು ಗ್ರಾಮೀಣ ಸೊಗಡಿನ ಸಾಂಪ್ರದಾಯಿಕ ಶೈಲಿಯಲ್ಲಿ ವಿಶಿಷ್ಟವಾಗಿ ಆಯೋಜಿಸಲಾಗಿತ್ತು.

ಹಡಿಲು ಭೂಮಿ‌ ಕೃಷಿ – ಎಲ್ಲೆಲ್ಲಿ ಎಷ್ಟು? ಬೈಂದೂರು – 70.5 ಎಕ್ರೆ, ಕುಂದಾಪುರ – 186.23 ಎಕ್ರೆ, ಬ್ರಹ್ಮಾವರ – 202.9 ಎಕ್ರೆ, ಉಡುಪಿ – 125 ಎಕ್ರೆ, ಕಾಪು – 139.34 ಎಕ್ರೆ, ಕಾರ್ಕಳ – 225.67 ಎಕ್ರೆ, ಹೆಬ್ರಿ – 84.53 ಎಕ್ರೆ. ಉಡುಪಿ ಜಿಲ್ಲೆ ಒಟ್ಟು -‌1034 ಎಕ್ರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!