Tuesday, January 21, 2025
Tuesday, January 21, 2025

ಜು. 26- ಉಡುಪಿ ಡಾ. ಟಿ.ಎಂ.ಎ.ಪೈ ಆಸ್ಪತ್ರೆಯಲ್ಲಿ ಉಚಿತ ಮೂಳೆ ಸಾಂದ್ರತೆ ಶಿಬಿರ

ಜು. 26- ಉಡುಪಿ ಡಾ. ಟಿ.ಎಂ.ಎ.ಪೈ ಆಸ್ಪತ್ರೆಯಲ್ಲಿ ಉಚಿತ ಮೂಳೆ ಸಾಂದ್ರತೆ ಶಿಬಿರ

Date:

ಉಡುಪಿ, ಜು. 24: ಮೂಳೆಗಳನ್ನು ದುರ್ಬಲಗೊಳಿಸುವ ಮತ್ತು ಮುರಿತದ ಅಪಾಯವನ್ನು ಹೆಚ್ಚಿಸುವ ಸ್ಥಿತಿಯಾದ ಆಸ್ಟಿಯೊಪೊರೋಸಿಸ್, ಅದರ ಬಗ್ಗೆ ಅರಿವಿನ ಕೊರತೆಯಿಂದಾಗಿ ಪತ್ತೆಯಾಗುವುದೇ ಇಲ್ಲ. ಇದು ಪ್ರಧಾನವಾಗಿ ಋತುಬಂಧಕ್ಕೊಳಗಾದ ಮಹಿಳೆಯರ ಮೇಲೆ ಪರಿಣಾಮ ಬೀರುತ್ತದೆ ಮತ್ತು ಅದರ ಹೆಚ್ಚುವುದನ್ನು ತಡೆಗಟ್ಟಲು ಆರಂಭಿಕ ರೋಗನಿರ್ಣಯವು ನಿರ್ಣಾಯಕವಾಗಿದೆ. ಈ ಹಿನ್ನೆಲೆಯಲ್ಲಿ ಆರ್ಥೋಪೆಡಿಕ್ಸ್ ವಿಭಾಗದ ಮುಖ್ಯಸ್ಥ ಡಾ.ರಾಜಾರಾಂ ಪೈ, ಡಾ.ಟಿ.ಎಂ.ಎ. ಪೈ ಆಸ್ಪತ್ರೆ, ಉಡುಪಿ, ಆಸ್ಟಿಯೊಪೊರೋಸಿಸ್ ತೊಂದರೆಯನ್ನು ಪತ್ತೆ ಹಚ್ಚುವಲ್ಲಿ ಬೋನ್ ಮಿನರಲ್ ಡೆನ್ಸಿಟಿ ಪರೀಕ್ಷೆಯ ಮಹತ್ವವನ್ನು ಒತ್ತಿ ಹೇಳುತ್ತಾರೆ.

ದೇಹವು ಹೊಸ ಮೂಳೆಗಳನ್ನು ಸಮರ್ಪಕವಾಗಿ ರೂಪಿಸಲು ವಿಫಲವಾದಾಗ ಅಥವಾ ಅಸ್ತಿತ್ವದಲ್ಲಿರುವ ಮೂಳೆಗಳ ನಾಶ ಹೆಚ್ಚಾದಾಗ ಆಸ್ಟಿಯೊಪೊರೋಸಿಸ್ ಸಂಭವಿಸುತ್ತದೆ. ಯಾವುದೇ ನೋವು – ಗಾಯ ಇಲ್ಲದೇ ಮಾಡುವ ಬಿ.ಎಂ.ಡಿ ಪರೀಕ್ಷೆಗೆ ಒಳಗಾಗುವ ಮೂಲಕ, ವ್ಯಕ್ತಿಗಳು ತಮ್ಮ ಮೂಳೆಗಳ ಸಾಂದ್ರತೆಯನ್ನು ಕಂಡು ಹಿಡಿಯಬಹುದು ಮತ್ತು ಸ್ಥಿತಿಯನ್ನು ನಿರ್ವಹಿಸುವಲ್ಲಿ ಸೂಕ್ತ ಮಾರ್ಗದರ್ಶನವನ್ನು ಪಡೆಯಬಹುದು.

ಆರಂಭಿಕ ಪತ್ತೆಯ ಮಹತ್ವವನ್ನು ತಿಳಿಸಲು ಮತ್ತು ಮೂಳೆಯ ಆರೋಗ್ಯವನ್ನು ಉತ್ತೇಜಿಸಲು, ಡಾ.ಟಿ.ಎಂ.ಎ. ಪೈ ಆಸ್ಪತ್ರೆಯು 26ನೇ ಜುಲೈ 2023 ರಂದು ಆರ್ಥೋಪೆಡಿಕ್ಸ್ ವಿಭಾಗದಲ್ಲಿ ಉಚಿತ ಬೋನ್ ಮಿನರಲ್ ಡೆನ್ಸಿಟಿ ಶಿಬಿರವನ್ನು ಬೆಳಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಆಯೋಜಿಸುತ್ತಿದೆ. ಶಿಬಿರವು 40 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳಿಗೆ, ವಿಶೇಷವಾಗಿ ಹೆಚ್ಚಿನ ಅಪಾಯದಲ್ಲಿರುವ ಮಹಿಳೆಯರಿಗೆ ತೆರೆದಿರುತ್ತದೆ. 100 ವ್ಯಕ್ತಿಗಳಿಗೆ ಸೀಮಿತವಾಗಿದೆ. ನೋಂದಣಿ ಮೊದಲು ಬಂದವರಿಗೇ ಮೊದಲ ಸೇವೆಯ ಆಧಾರದ ಮೇಲೆ ಇರುತ್ತದೆ. ನೋಂದಣಿಗಾಗಿ, 0820-2526501 Extn – 2164 ಅನ್ನು ಸಂಪರ್ಕಿಸಬಹುದು ಎಂದು ಡಾ. ಟಿ.ಎಂ.ಎ. ಪೈ ಆಸ್ಪತ್ರೆ, ಉಡುಪಿಯ ವೈದ್ಯಕೀಯ ಅಧೀಕ್ಷಕ ಡಾ. ಶಶಿಕಿರಣ್ ಉಮಾಕಾಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!