Tuesday, January 21, 2025
Tuesday, January 21, 2025

ಕಡೆಕಾರ್ ಗ್ರಾಮ ಪಂಚಾಯತ್ ಕಚೇರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

ಕಡೆಕಾರ್ ಗ್ರಾಮ ಪಂಚಾಯತ್ ಕಚೇರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

Date:

ಉಡುಪಿ, ಜು. 25: ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಕಡೆಕಾರ್ ಗ್ರಾಮ ಪಂಚಾಯತ್ ಕಚೇರಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಶಾಸಕರಾದ ಬಳಿಕ ಪ್ರಥಮ ಬಾರಿಗೆ ಕಡೆಕಾರ್ ಗ್ರಾಮ ಪಂಚಾಯತಿಗೆ ಭೇಟಿ ನೀಡಿದ್ದು, ಮುಂದಿನ ದಿನಗಳಲ್ಲಿ ಕ್ಷೇತ್ರದ ಎಲ್ಲಾ ಗ್ರಾಮ ಪಂಚಾಯತ್ ಗಳಿಗೂ ಭೇಟಿ ನೀಡಲಿದ್ದು ಗ್ರಾಮದ ಎಲ್ಲಾ ಸಮಸ್ಯೆ, ಬೇಡಿಕೆಗಳ ಬಗ್ಗೆ ಸದಾ ಸ್ಪಂದಿಸುವ ಆಶಯ ವ್ಯಕ್ತಪಡಿಸಿದರು.

ಮುಂದಿನ ಬಾರಿ ಭೇಟಿ ನೀಡುವ ಸಂದರ್ಭದಲ್ಲಿ ಇಲಾಖಾ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸ್ಥಳದಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ರೂಪಿಸುವುದಾಗಿ ತಿಳಿಸಿದರು.ರಸ್ತೆ ನಿರ್ಮಾಣ, ಅಂಗನವಾಡಿ ಕಟ್ಟಡ, ಕುಡಿಯುವ ನೀರು, ನದಿ ದಂಡೆ ಸಂರಕ್ಷಣೆ, ಕೃತಕ ನೆರೆ ಹಾವಳಿ ತಡೆಗೆ ಸಮರ್ಪಕ ತೋಡು ಮುಂತಾದ ಬೇಡಿಕೆಗಳ ಬಗ್ಗೆ ಗ್ರಾಮಸ್ಥರು ಮನವಿ ಸಲ್ಲಿಸಿದರು.

ಪಂಚಾಯತ್ ಅಧ್ಯಕ್ಷರಾದ ಸರಸ್ವತಿ, ಉಪಾಧ್ಯಕ್ಷರಾದ ನವೀನ ಶೆಟ್ಟಿ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ್ ಬಾಬು , ಕಡೆಕಾರ್ ಪಂಚಾಯತ್ ಮಾಜಿ ಅಧ್ಯಕ್ಷರಾದ ಪ್ರದೀಪಚಂದ್ರ ಕುತ್ಪಾಡಿ, ರಘುನಾಥ್ ಕೋಟ್ಯಾನ್, ತಾರನಾಥ್ ಸುವರ್ಣ, ಮಾಜಿ ತಾಲೂಕ ಪಂಚಾಯತ್ ಸದಸ್ಯರಾದ ಶಿಲ್ಪಾ ರವೀಂದ್ರ , ಪಂಚಾಯತ್ ಸದಸ್ಯರಾದ ರಾಘವೇಂದ್ರ ಕುತ್ಪಾಡಿ , ವಿನೋದಿನಿ, ಸತೀಶ್ ಕೋಟ್ಯಾನ್, ಸವಿತಾ ಹರೀಶ್, ಪ್ರವೀಣ್, ವೇದಾವತಿ ವಸಂತ್ ಕುಂದರ್, ಸುಲೋಚನ, ನಿರ್ಮಲಾ, ಇಂದಿರಾ ಶೆಟ್ಟಿ, ಲೀಲಾ, ಸುಕನ್ಯಾ ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಿದ್ದೇಶ್ ಹಾಗೂ ಗ್ರಾಮಸ್ಥರಾದ ರಿಕೇಶ್ ಪಾಲನ್, ವಿಜಯ್ ಭಟ್, ಅಶೋಕ್ ಭಂಡಾರಿ, ಜಯಕರ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!