ಉಡುಪಿ: ಉಡುಪಿ, ಕಾರ್ಕಳ ಹಾಗೂ ಕುಂದಾಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಿಗೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿಯನ್ನು ಜನವರಿ 18 ರಂದು ಸಹಾಯಕ ಕಮೀಷನರ್, ಕುಂದಾಪುರ, ಉಡುಪಿ, ಕಾಪು, ಕಾರ್ಕಳ, ಕುಂದಾಪುರ, ಬೈಂದೂರು, ಬ್ರಹ್ಮಾವರ, ಹೆಬ್ರಿ ತಾಲೂಕು ತಹಶೀಲ್ದಾರರ ಕಛೇರಿ, ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಕಛೇರಿಯಲ್ಲಿ ಹಾಗೂ ವೆಬ್ಸೈಟ್ Uಜuಠಿi.ಟಿiಛಿ.iಟಿ ನಲ್ಲಿ ಪ್ರಕಟಿಸಿದೆ.
ಸಾರ್ವಜನಿಕರು ಆಕ್ಷೇಪಣೆ ಅಥವಾ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಫೆಬ್ರವರಿ 2 ರ ವರೆಗೆ ಅವಕಾಶ ಕಲ್ಪಿಸಲಾಗಿದೆ.
ಸ್ವೀಕೃತವಾದ ಅರ್ಜಿಗಳ ಇತ್ಯರ್ಥವನ್ನು ಫೆಬ್ರವರಿ 3 ರಿಂದ 6 ರ ವರೆಗೆ ತೀರ್ಮಾನಿಸಿ, ಫೆಬ್ರವರಿ 7 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.