ಉಡುಪಿ, ಜು. 28: ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್ಸೈಟ್ https://shp.karnataka.gov.in/ ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 16 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-8050370006 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.