Monday, November 25, 2024
Monday, November 25, 2024

ಕಡೆಕಾರು: ಸಂಜೀವಿನಿ ಸಂತೆ

ಕಡೆಕಾರು: ಸಂಜೀವಿನಿ ಸಂತೆ

Date:

ಉಡುಪಿ, ಜು. 31: ಉಡುಪಿ ತಾಲೂಕು ಕಡೆಕಾರು ಗ್ರಾಮ ಪಂಚಾಯತಿಯಲ್ಲಿ ಮಾಣಿಕ್ಯ ಸಂಜೀವಿನಿ ಮಹಿಳಾ ಸಂಘದ ವತಿಯಿಂದ ಸಂಜೀವಿನಿ ಸಂತೆ ಕಾರ್ಯಕ್ರಮ ನಡೆಯಿತು. ಕಡೆಕಾರು ಗ್ರಾಮ ಪಂಚಾಯತ್‌ನ ಅಧ್ಯಕ್ಷೆ ಸರಸ್ವತಿ ಕಾರ್ಯಕ್ರಮ ಉದ್ಘಾಟಿಸಿ, ಮಹಿಳಾ ಸಂಘದ ಸದಸ್ಯರು ತಮಗೆ ಆಸಕ್ತಿ ಇರುವ ಆದಾಯ ತರುವಂತಹ ಸ್ವ-ಉದ್ಯೋಗಗಳಲ್ಲಿ ತೊಡಗಿಸಿಕೊಳ್ಳಲು ಅಗತ್ಯ ತರಬೇತಿ ಮತ್ತು ಬ್ಯಾಂಕ್ ಸಾಲ ಸೌಲಭ್ಯ ನೀಡಲಾಗುವುದು. ಮಹಿಳೆಯರು ಇದರ ಪ್ರಯೋಜನವನ್ನು ಪಡೆದುಕೊಂಡು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮುಖ್ಯವಾಹಿನಿಗೆ ಬರಬೇಕೆಂದು ತಿಳಿಸಿದರು.

ಕಡೆಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಾಣಿಕ್ಯ ಸಂಜೀವಿನಿ ಒಕ್ಕೂಟದ ಸದಸ್ಯರಿಂದ, ಹಡಿಲು ಭೂಮಿಯ ಪುನಶ್ಚೇತನ, ಬೇಕರಿ ಉತ್ಪನ್ನಗಳ ತಯಾರಿಕೆ, ಸಿದ್ದ ಉಡುಪುಗಳ ತಯಾರಿಕೆ ಸೇರಿದಂತೆ ಹಲವಾರು ಚಟುವಟಿಕೆಗಳು ಯಶಸ್ವಿಯಾಗಿ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಟ್ಯೂಶನ್ ತರಗತಿಗಳ ಆರಂಭ, ಮೀನಿನ ಉತ್ಪನ್ನಗಳ ತಯಾರಿಕೆ, ಉದ್ಯೋಗ ಖಾತರಿ ಯೋಜನೆ ಒಗ್ಗೂಡಿಸುವಿಕೆಯಡಿ ಕೃಷಿ, ಅರಣ್ಯ, ತೋಟಗಾರಿಕೆ ಕಾಮಗಾರಿಗಳನ್ನು ಆರಂಭಿಸುವ ಯೋಜನೆ ಇದೆ ಎಂದು ಒಕ್ಕೂಟದ ಪುಷ್ಪ ಚಂದ್ರಶೇಖರ್ ತಿಳಿಸಿದರು. ಸಂಜೀವಿನಿ ಯೋಜನೆಯ ಸೌಲಭ್ಯಗಳ ಕುರಿತು ಡಿ.ಪಿ.ಎಂ. ಗಣೇಶ್ ಮಾಹಿತಿ ನೀಡಿದರು ಕಾರ್ಯಕ್ರಮದಲ್ಲಿ ಒಕ್ಕೂಟ ಸದಸ್ಯರು ತಯಾರಿಸಿದ ಉತ್ಪನ್ನಗಳ ಸಂಜೀವಿನಿ ಸಂತೆ ನಡೆಯಿತು. ಆಹಾರ ಉತ್ಪನ್ನಗಳು, ಗೃಹ ಉಪಯೋಗಿ ಉತ್ಪನ್ನಗಳು, ಸಿದ್ಧ ಉಡುಪುಗಳು ಸಂತೆಯಲ್ಲಿ ಮಾರಾಟಗೊಂಡವು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನವೀನ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರುಗಳು, ಪಿ.ಡಿ.ಒ. ಸಿದ್ದೇಶ ಎಸ್., ಎಸ್.ಡಿ.ಎ. ವಾರಿಜ ಬಿ., ಸಾಫಲ್ಯ ಟ್ರಸ್ಟ್ ಸಂಚಾಲಕಿ ನಿರುಪಮ ಶೆಟ್ಟಿ, ಅಂಗನವಾಡಿ ಕಾರ್ಯಕರ್ತೆಯರು, ಗ್ರಂಥಪಾಲಕರು, ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು, ಪಂಚಾಯತ್ ಸಿಬ್ಬಂದಿ, ಗ್ರಾಮಸ್ಥರು ಉಪಸ್ಥಿತರಿದ್ದರು. ಇಂದಿರಾ ಶೆಟ್ಟಿ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...

ತುಳು ಭಾವಗೀತೆ ಸ್ಪರ್ಧೆ

ಉಡುಪಿ, ನ.24: ತುಳುಕೂಟ ಉಡುಪಿ (ರಿ,) ವತಿಯಿಂದ ದಿ. ನಿಟ್ಟೂರು ಸಂಜೀವ...

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...
error: Content is protected !!