Sunday, January 19, 2025
Sunday, January 19, 2025

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

Date:

ಉಡುಪಿ, ಆ. 1: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕು ಮಣಿಪಾಲದಲ್ಲಿರುವ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ, ನವೀಕರಣ ವಿದ್ಯಾರ್ಥಿಗಳ ಸೀಟು ಹಂಚಿಕೆಯಾಗಿ ಉಳಿಕೆ ಸೀಟುಗಳಿಗೆ ಸ್ಟೇಟ್ ಹಾಸ್ಟೆಲ್ ಪೋರ್ಟಲ್ ತಂತ್ರಾಂಶದ ಮೂಲಕ ಪಿ.ಯು.ಸಿ ನಂತರದ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ವರ್ಗದ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆಗಸ್ಟ್ 16 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಕಚೇರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2573596, ಸಹಾಯವಾಣಿ ಸಂಖ್ಯೆ 8277799990, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಅಜಾದ್ ಭವನ, ಪಶು ಚಿಕಿತ್ಸಾಲಯದ ಹತ್ತಿರ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ದೂರವಾಣಿ : 0820-2574596 ಅಥವಾ ಕಾರ್ಕಳ ದೂರವಾಣಿ : 08258-231101 ಹಾಗೂ ಕುಂದಾಪುರ ದೂರವಾಣಿ : 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...

ಮಾನವೀಯ ಮೌಲ್ಯಗಳೇ ವಿವೇಕಾನಂದರ ತತ್ವ: ಡಾ. ನಿಕೇತನ

ಉಡುಪಿ, ಜ.18: ಶಾಂತಿ ಮತ್ತು ಪ್ರೀತಿಯ ಮೂಲಕ ಮಾನವ ಜನಾಂಗ ಉತ್ತಮ...
error: Content is protected !!