Monday, November 25, 2024
Monday, November 25, 2024

ಉಡುಪಿ ಪರ್ಯಾಯೋತ್ಸವ ನಗರದ ಮೂಲಸೌಕರ್ಯ ಅಭಿವೃದ್ಧಿಗೆ 50 ಕೋಟಿ ವಿಶೇಷ ಅನುದಾನ ಬಿಡುಗಡೆಗೆ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

ಉಡುಪಿ ಪರ್ಯಾಯೋತ್ಸವ ನಗರದ ಮೂಲಸೌಕರ್ಯ ಅಭಿವೃದ್ಧಿಗೆ 50 ಕೋಟಿ ವಿಶೇಷ ಅನುದಾನ ಬಿಡುಗಡೆಗೆ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

Date:

ಉಡುಪಿ, ಆ.1: ಉಡುಪಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ಮಾಡಿ ವಿವಿಧ ಬೇಡಿಕೆಗಳ ಬಗ್ಗೆ ಮನವಿ ಸಲ್ಲಿಸಿದರು. 2024 ರ ಜನವರಿಯಲ್ಲಿ ನಡೆಯಲಿರುವ ಪರ್ಯಾಯ ಮಹೋತ್ಸವದ ಅಂಗವಾಗಿ ನಗರದ ಮೂಲಸೌಕರ್ಯ ಅಭಿವೃದ್ಧಿಗೆ 50 ಕೋಟಿ ವಿಶೇಷ ಅನುದಾನ ಬಿಡುಗಡೆಗೆ ಮನವಿ ಮಾಡಿದರು.

ಮನವಿಯಲ್ಲಿ ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ಅನುದಾನ ಬಿಡುಗಡೆ, ಉಡುಪಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ನಿರ್ವಹಣೆಗೆ ಅನುದಾನ ಬಿಡುಗಡೆ, ಉಡುಪಿ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಕೃಷಿ ಕಾಲೇಜು ಪ್ರಾರಂಭ, ಬಜೆಟ್ ನಲ್ಲಿ ಘೋಷಿಸಿರುವ ಮೀನುಗಾರಿಕೆಗೆ ಡೀಸೆಲ್ ಸಬ್ಸಿಡಿ, ನಾಡದೋಣಿ ಸೀಮೆಎಣ್ಣೆ ಪೂರೈಕೆ, ಮಹಿಳಾ ಮೀನುಗಾರರಿಗೆ ಶೂನ್ಯ ಬಡ್ಡಿದರದ ಸಾಲ ಯೋಜನೆಗಳ ಶೀಘ್ರ ಅನುಷ್ಠಾನ, ಕಡಲು ಕೊರೆತಕ್ಕೆ ಶಾಶ್ವತ ಪರಿಹಾರ, ಪ್ರಾಕೃತಿಕ ವಿಕೋಪ ನಿರ್ವಹಣೆಗೆ ವಿಶೇಷ ಅನುದಾನ, ಗ್ರಾಮೀಣ ಭಾಗದಲ್ಲಿ ಸರಕಾರಿ ಬಸ್ ಗಳ ಸಂಚಾರ ಹೆಚ್ಚಳ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ನೂತನ ವಸತಿ ನಿಲಯಗಳ ಸ್ಥಾಪನೆ ಮತ್ತಿತರ ಬೇಡಿಕೆಗಳ ಪತ್ರವನ್ನು ನೀಡಿ ಬೇಡಿಕೆಗಳನ್ನು ಶೀಘ್ರ ಈಡೇರಿಸಿ ಉಡುಪಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸುವಂತೆ ಮನವಿ ಮಾಡಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!