Sunday, January 19, 2025
Sunday, January 19, 2025

ಜಿಲ್ಲಾಸ್ಪತ್ರೆ ವೈದ್ಯಾಧಿಕಾರಿಗಳೊಂದಿಗೆ ಶಾಸಕ ಯಶ್ಪಾಲ್ ಸುವರ್ಣ ಸಭೆ

ಜಿಲ್ಲಾಸ್ಪತ್ರೆ ವೈದ್ಯಾಧಿಕಾರಿಗಳೊಂದಿಗೆ ಶಾಸಕ ಯಶ್ಪಾಲ್ ಸುವರ್ಣ ಸಭೆ

Date:

ಉಡುಪಿ, ಆ.2: ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಬುಧವಾರ ಉಡುಪಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ವೈದ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿ ಜಿಲ್ಲಾಸ್ಪತ್ರೆಯ ಕಾರ್ಯಚಟುವಟಿಕೆ, ಸಮಸ್ಯೆ ಹಾಗೂ ಬೇಡಿಕೆಗಳ ಬಗ್ಗೆ ಸಮಾಲೋಚನೆ ನಡೆಸಿದರು.

ಡಯಾಲಿಸಿಸ್ ಘಟಕ ನಿರ್ವಹಣೆ, ಜಿಲ್ಲಾ ಆಸ್ಪತ್ರೆಯ ವೈದ್ಯರ ಹಾಗೂ ಸಿಬ್ಬಂದಿಗಳ ಕೊರತೆ, ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸಿಬ್ಬಂದಿಗಳ ವೇತನ ಬಿಡುಗಡೆ, ಜಿಲ್ಲಾ ಮೆಡಿಕಲ್ ಕಾಲೇಜು ಮಂಜೂರು ಪ್ರಸ್ತಾವನೆ, ಜಿಲ್ಲಾಸ್ಪತ್ರೆ ಕಟ್ಟಡ ಕಾಮಗಾರಿ ಪ್ರಗತಿ ಸಹಿತ ವಿವಿಧ ವಿಷಯಗಳ ಬಗ್ಗೆ ಮಾಹಿತಿ ಪಡೆದು ಈ ಬಗ್ಗೆ ಸೂಕ್ತ ವರದಿ ನೀಡುವಂತೆ ಜಿಲ್ಲಾ ಸರ್ಜನ್ ರವರಿಗೆ ಸೂಚನೆ ನೀಡಿದರು. ಶೀಘ್ರದಲ್ಲಿಯೇ ರಾಜ್ಯ ಸರಕಾರದ ಆರೋಗ್ಯ ಸಚಿವರು ಹಾಗೂ ವೈದ್ಯಕೀಯ ಶಿಕ್ಷಣ ಸಚಿವರನ್ನು ಭೇಟಿಯಾಗಿ ಬೇಡಿಕೆಗಳ ಬಗ್ಗೆ ಮನವಿ ಮಾಡುವುದಾಗಿ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಸರ್ಜನ್ ಡಾ. ಸುದೇಶ್ ಕುಮಾರ್, ವೈದ್ಯಾಧಿಕಾರಿಗಳಾದ ಡಾ. ವೀಣಾ ಕುಮಾರಿ, ಡಾ. ರಾಜಗೋಪಾಲ ಭಂಡಾರಿ, ಡಾ. ನಿತ್ಯಾನಂದ ನಾಯಕ್, ಡಾ. ವಾಸುದೇವ ಎಸ್., ಡಾ. ಸುಭಾಷ್, ಡಾ. ದಯಾಮಣಿ, ಡಾ. ನಿಕಿನ್ ಶೆಟ್ಟಿ, ಡಾ. ಪ್ರಕಾಶ್ ಕೆ. ಎಸ್., ಡಾ. ಸಂದೀಪ್, ಡಾ. ಸೂರ್ಯನಾರಾಯಣ, ಡಾ. ಕೃಪಾಲಿನಿ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!