Wednesday, February 26, 2025
Wednesday, February 26, 2025

ನಗರಸಭೆ ಅಧಿಕಾರಿಗಳೊಂದಿಗೆ ಶಾಸಕ ಯಶ್ಪಾಲ್ ಸುವರ್ಣ ಸಭೆ

ನಗರಸಭೆ ಅಧಿಕಾರಿಗಳೊಂದಿಗೆ ಶಾಸಕ ಯಶ್ಪಾಲ್ ಸುವರ್ಣ ಸಭೆ

Date:

ಉಡುಪಿ, ಆ. 5: ಉಡುಪಿ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ಶಾಸಕ ಯಶ್ಪಾಲ್ ಸುವರ್ಣರವರು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ನಡೆಸಿದರು. ನಗರಸಭೆ ವ್ಯಾಪ್ತಿ ಸಮರ್ಪಕ ಕುಡಿಯುವ ನೀರಿನ ಪೂರೈಕೆ ಮತ್ತು ಬೀದಿ ದೀಪ ನಿರ್ವಹಣೆ ಬಗ್ಗೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸರಳಬೆಟ್ಟಿನಲ್ಲಿ ನಿರ್ಮಾಣ ಹಂತದಲ್ಲಿರುವ ವಸತಿ ಯೋಜನೆಯ ಸಮಸ್ಯೆಗಳ ಬಗ್ಗೆ, ನಗರದ ಸ್ವಚ್ಚತೆ ಹಾಗೂ ತ್ಯಾಜ್ಯ ವಿಲೇವಾರಿ, ಮಣಿಪಾಲದಲ್ಲಿ ವ್ಯವಸ್ಥಿತ ರೀತಿಯಲ್ಲಿ ನೂತನ ಬಸ್ ನಿಲ್ದಾಣ ನಿರ್ಮಾಣದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಮುಂಬರುವ ಪರ್ಯಾಯ ಮಹೋತ್ಸವದ ಅಂಗವಾಗಿ ನಗರದ ಮೂಲಸೌಕರ್ಯಗಳ ಅಭಿವೃದ್ಧಿಗೆ ಅನುದಾನ ಮೀಸಲು, ಉಡುಪಿ ಭುಜಂಗ ಪಾರ್ಕ್ ಸಮರ್ಪಕ ನಿರ್ವಹಣೆ ಹಾಗೂ ಕ್ರೀಡಾ ಚಟುವಟಿಕೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಉಡುಪಿ ನಗರದಾದ್ಯಂತ ಅಳವಡಿಸಿರುವ ಟ್ರಾಫಿಕ್ ಸಿಗ್ನಲ್ ಬಗ್ಗೆ ಜನಸಾಮಾನ್ಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಬಗ್ಗೆ ಪರಾಮರ್ಶಿಸಿ ಅವೈಜ್ಞಾನಿಕ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಟ್ರಾಫಿಕ್ ಸಿಗ್ನಲ್ ತೆರವಿಗೆ ಕ್ರಮ ಕೈಗೊಳ್ಳಬೇಕು ಹಾಗೂ ಮುಂದಿನ ದಿನಗಳಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಕೆ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಇಲಾಖೆ, ಪೊಲೀಸ್ ಇಲಾಖೆ ಸಹಿತ ಸಂಬಂಧಿತ ಇಲಾಖೆಗಳ ಅನುಮತಿಯನ್ನು ಕಡ್ಡಾಯವಾಗಿ ಪಡೆಯುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ನಗರಸಭೆ ನಿಕಟಪೂರ್ವ ಅಧ್ಯಕ್ಷರಾದ ಸುಮಿತ್ರ ನಾಯಕ್, ಪೌರಾಯುಕ್ತ ರಾಯಪ್ಪ, ಎಇಇ ಯಶವಂತ ಪ್ರಭು, ನಗರಸಭಾ ಸದಸ್ಯರಾದ ಪ್ರಭಾಕರ ಪೂಜಾರಿ, ಬಾಲಕೃಷ್ಣ ಶೆಟ್ಟಿ, ಶ್ರೀಶ ಕೊಡವೂರು, ಕಲ್ಪನಾ ಸುಧಾಮ, ಸಂತೋಷ್ ಜತ್ತನ್, ಕೃಷ್ಣ ಕೊಡಂಚ ಹಾಗೂ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

51 ವಯಸ್ಸಿನಲ್ಲೂ ಸ್ಪೋಟಕ ಆಟ; ಗತ ವೈಭವ ನೆನಪಿಸಿದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್

ಮುಂಬಯಿ, ಫೆ.26: ಮಂಗಳವಾರ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ...

ಮಹಾಕುಂಭ ವೈಭವ- 45 ದಿನಗಳಲ್ಲಿ 65 ಕೋಟಿಗೂ ಹೆಚ್ಚು ಭಕ್ತರು, 3 ಲಕ್ಷ ಕೋಟಿ ರೂ. ಆದಾಯ

ಪ್ರಯಾಗರಾಜ್, ಫೆ.26: ಬುಧವಾರ ಮಹಾಶಿವರಾತ್ರಿಯಂದು ಸಂಪನ್ನಗೊಂಡ ಮಹಾಕುಂಭಮೇಳ ಕಳೆದ 45 ದಿನಗಳಲ್ಲಿ...

ಜೆಇಇ ಬಿ ಆರ್ಕ್ ಮತ್ತು ಬಿ ಪ್ಲಾನಿಂಗ್ ಫಲಿತಾಂಶ: ಕ್ರಿಯೇಟಿವ್ ಸಾಧನೆ

ಉಡುಪಿ, ಫೆ.26: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್.ಟಿ.ಎ) ವತಿಯಿಂದ ನಡೆಸಲಾದ ಜೆಇಇ...

ಪರೀಕ್ಷಾ ತರಬೇತಿ

ಕುಂದಾಪುರ, ಫೆ.26: ಜೆಸಿಐ ಶಂಕರನಾರಾಯಣ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಶಂಕರನಾರಾಯಣ...
error: Content is protected !!