ಗಂಗೊಳ್ಳಿ, ಆ. 6: ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳನ್ನು ಹೆಚ್ಚು ಕ್ರಿಯಾಶೀಲವಾಗಿಡುವಲ್ಲಿ ಸಹಕಾರ ನೀಡುತ್ತವೆ. ಉತ್ತಮ ಬದುಕಿಗೆ ಬೇಕಾದ ಆತ್ಮವಿಶ್ವಾಸವನ್ನು ನೀಡುತ್ತವೆ ಎಂದು ಗಂಗೊಳ್ಳಿಯ ರೋಟರಿ ಕ್ಲಬ್ ಅಧ್ಯಕ್ಷ ಎಂ ನಾಗೇಂದ್ರ ಪೈ ಹೇಳಿದರು. ಅವರು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಸೇವಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಭಟ್ಕಳದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ವೈಶಾಲಿ ಜಿ ಆರ್ ಮಾತನಾಡಿ, ವಿದ್ಯಾರ್ಥಿಗಳು ಮನಸ್ಸು ಮತ್ತು ಮನಸ್ಥಿತಿಯನ್ನು ಯಾವತ್ತು ಉತ್ತಮವಾಗಿಟ್ಟುಕೊಳ್ಳಬೇಕು. ಆ ಮೂಲಕ ವ್ಯಕ್ತಿತ್ವದ ವಿಕಸನವನ್ನು ಕಂಡುಕೊಳ್ಳಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ ಸಿ ಅಧ್ಯಕ್ಷತೆಯನ್ನು ವಹಿಸಿದ್ದರು. ವಿದ್ಯಾರ್ಥಿನಿ ದೀಪ್ತಿ ಶೆಣೈ ಸ್ವಾಗತಿಸಿದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಸುಗುಣ ಆರ್ ಕೆ ಪ್ರಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿನಿ ನೇತನ ಅತಿಥಿಗಳನ್ನು ಪರಿಚಯಿಸಿದರು. ಶ್ರೇಯ ಪೂಜಾರಿ ಪ್ರತಿಜ್ಞಾವಿಧಿ ಬೋಧಿಸಿದರು. ಸನ್ನಿಧಿ ಹೊಳ್ಳ ಮತ್ತು ದೀಪ್ತಿ ಭಾವೈಕ್ಯ ಗೀತೆ ಹಾಡಿದರು. ಎನ್ಎಸ್ಎಸ್ ವಿದ್ಯಾರ್ಥಿನಿ ದೀಕ್ಷಾ ಎನ್ ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು ಅರ್ಜುನ ವಂದಿಸಿದರು.