ಉಡುಪಿ, ಆ. 9: ಉಡುಪಿ ಕೈಮಗ್ಗ ಮತ್ತು ಉಡುಪಿ ಸೀರೆಗಳ ಪುನಶ್ಚೇತನಕ್ಕಾಗಿ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನಿಂದ 180 ದಿನಗಳವರೆಗೆ 30 ಗ್ರಾಮೀಣ ಮಹಿಳೆಯರಿಗೆ ಒಂದು ಬ್ಯಾಚ್‌ನ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮವನ್ನು ನಡೆಸಲು ರೂ 14,70,000/- ಅನುದಾನವನ್ನು ಮಂಜೂರು ಮಾಡಲಾಗಿದೆ.
ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಅಂಗವಾಗಿ ಪದ್ಮಶಾಲಿ ನೇಕಾರ ಪ್ರತಿಷ್ಠಾನ, ಉಡುಪಿ ಮತ್ತು ಉಡುಪಿ ಮತ್ತು ದ.ಕ ಜಿಲ್ಲೆಯ ಪ್ರಾಥಮಿಕ ನೇಕಾರರ ಸೇವಾ ಸಹಕಾರ ಸಂಘಗಳ ಸಹಭಾಗಿತ್ವದಲ್ಲಿ ಉಡುಪಿಯ ಪೂರ್ಣಪ್ರಜ್ಞಾ ಸಭಾಂಗಣದಲ್ಲಿ ಆಯೋಜಿಸಿದ್ದ ಕೈ ಮಗ್ಗ ಸೀರೆಗಳ ಉತ್ಸವ ಕಾರ್ಯಕ್ರಮದಲ್ಲಿ ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ರತ್ನಾಕರ್ ಇಂದ್ರಾಳಿ ಹಾಗೂ ಸಿಇಒ ದಿನೇಶ್ ಕುಮಾರ್ ಅವರಿಗೆ ನಬಾರ್ಡ್ ಡಿಡಿಎಂ ಸಂಗೀತಾ ಎಸ್.ಕರ್ತಾ ಅವರು ಮಂಜೂರಾತಿ ಪತ್ರವನ್ನು ಹಸ್ತಾಂತರಿಸಿದರು.