Wednesday, January 22, 2025
Wednesday, January 22, 2025

ಆದಿಉಡುಪಿ ಸಂತೆ ಮಾರುಕಟ್ಟೆಯಲ್ಲಿ ನಿಷೇಧಿತ ಪ್ಲಾಸ್ಟಿಕ್ ವಶ: ದಂಡ ವಸೂಲಿ

ಆದಿಉಡುಪಿ ಸಂತೆ ಮಾರುಕಟ್ಟೆಯಲ್ಲಿ ನಿಷೇಧಿತ ಪ್ಲಾಸ್ಟಿಕ್ ವಶ: ದಂಡ ವಸೂಲಿ

Date:

ಉಡುಪಿ, ಆ. 9: ಉಡುಪಿ ನಗರಸಭಾ ವ್ಯಾಪ್ತಿಯ ಆದಿಉಡುಪಿ ಸಂತೆ ಮಾರುಕಟ್ಟೆಯಲ್ಲಿ ನಿಷೇದಿತ ಪ್ಲಾಸ್ಟಿಕ್‌ಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಬುಧವಾರ ದಾಳಿ ನಡೆಸಿ 62 ಕೆ.ಜಿ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ವಶಪಡಿಸಿಕೊಂಡು ಸಂತೆ ಅಂಗಡಿಯವರಿಗೆ ರೂ. 700 ದಂಡ ವಿಧಿಸಲಾಯಿತು ಹಾಗೂ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬದಲಿಗೆ ಮರುಬಳಕೆಯ ವಸ್ತುಗಳನ್ನು ಬಳಸುವಂತೆ ಹಾಗೂ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ಬಳಸಿದ್ದಲ್ಲಿ ಭಾರಿ ದಂಡವನ್ನು ವಿಧಿಸಿ ಉದ್ದಿಮೆ ಪರವಾನಿಗೆಯನ್ನು ರದ್ದು ಪಡಿಸಲಾಗುವುದು ಎಂದು ತಿಳಿಸಲಾಯಿತು. ನಗರಸಭೆಯ ಪೌರಾಯುಕ್ತರು, ಹಿರಿಯ ಆರೋಗ್ಯ ನಿರೀಕ್ಷಕರು, ಕಿರಿಯ ಆರೋಗ್ಯ ನಿರೀಕ್ಷಕರು, ಸ್ಯಾನೀಟರಿ ಸೂಪರ್‌ವೈಸರ್ ಹಾಗೂ ಪೌರಕಾರ್ಮಿಕರು ದಾಳಿಯಲ್ಲಿ ಭಾಗವಹಿಸಿದ್ದರು.

ಜುಲೈ ಮಾಹೆಯಲ್ಲಿ ಒಟ್ಟು 324 ಕೆ.ಜಿ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ವಶಪಡಿಸಿಕೊಂಡು ರೂ. 58,200 ನ್ನು ದಂಡ ವಿಧಿಸಲಾಗಿದ್ದು, ಉದ್ದಿಮೆಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್‌ಗಳನ್ನು ಉಪಯೋಗಿಸದ ಉದ್ದಿಮೆಯನ್ನು ಹಸಿರು ಸಂಸ್ಥೆ ಎಂದು ಘೋಷಿಸಲಾಯಿತು. ಎಲ್ಲಾ ಉದ್ದಿಮೆದಾರರು ಏಕ ಬಳಕೆಯ ಪ್ಲಾಸ್ಟಿಕ್‌ಗಳನ್ನು ಉಪಯೋಗಿಸುವುದನ್ನು ತ್ಯಜಿಸಿ ಹಸಿರು ಸಂಸ್ಥೆ ಎಂದು ಘೋಷಿಸಿಕೊಳ್ಳುವಂತೆ ಪೌರಾಯುಕ್ತರು ಸೂಚಿಸಿರುತ್ತಾರೆ.

ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಮನೆ, ಮದುವೆ ಹಾಲ್, ಹೊಟೇಲ್‌ಗಳಲ್ಲಿ ಸಮಾರಂಭ ಮಾಡುವಾಗ ಹಾಗೂ ರಸ್ತೆ ಬದಿ ಟೀ, ಕಾಫಿ, ತಿಂಡಿ ಮಾರಾಟ ಮಾಡುವವರು ರಾಜ್ಯ ಸರ್ಕಾರದ ನಿರ್ದೇಶನದಂತೆ ರೆಡ್ಯೂಸ್, ರೀಯೂಸ್, ರೀಸೈಕಲ್ ಮಾದರಿಯಲ್ಲಿ ತ್ಯಾಜ್ಯ ವಸ್ತುಗಳನ್ನು ಕಡಿಮೆ ಮಾಡುವ ಹಿತದೃಷ್ಟಿಯಿಂದ ಪ್ರತಿಯೊಬ್ಬ ನಾಗರಿಕರು ಸಭೆ ಸಮಾರಂಭಗಳಲ್ಲಿ ಟೀ, ಕಾಫಿ, ತಿಂಡಿ, ಊಟಕ್ಕೆ ಬಳಸುವಾಗ ಮರುಬಳಕೆಯ ವಸ್ತುಗಳಾದ ಸ್ಟೀಲ್ ಲೋಟ, ಸ್ಟೀಲ್ ತಟ್ಟೆಗಳನ್ನು ಕಡ್ಡಾಯವಾಗಿ ಬಳಸಿ ತ್ಯಾಜ್ಯವನ್ನು ಕಡಿಮೆ ಮಾಡಿ ಉಡುಪಿ ನಗರವನ್ನು ಕಸ ಮುಕ್ತ ನಗರವನ್ನಾಗಿ ಮಾಡುವುದು. ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಹಾಗೂ ಪರಿಸರ ಸಂರಕ್ಷಣೆ ಮಾಡಲು ಸಾರ್ವಜನಿಕರು ನಗರಸಭೆಯೊಂದಿಗೆ ಕೈಜೋಡಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜ.23: (ನಾಳೆ) ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉಡುಪಿಗೆ

ಉಡುಪಿ, ಜ.22: ಕರ್ನಾಟಕ ಸರಕಾರದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು...

ಪೆರ್ಡೂರು: ಕೊರಗ ಸಮುದಾಯದ ಕಾಲನಿಗೆ ಶಾಸಕರ ಭೇಟಿ

ಪೆರ್ಡೂರು, ಜ.22: ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಕ್ಕುಂಡಿ ಕೊರಗರ ಕಾಲೋನಿಗೆ...

ಜ್ಞಾನಸುಧಾ: ಕಂಪೆನಿ ಸೆಕ್ರೇಟರಿ ಸಾಧಕರಿಗೆ ಸನ್ಮಾನ

ಕಾರ್ಕಳ, ಜ.22: ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೇಟರೀಸ್ ಇನ್ ಇಂಡಿಯಾ ಅವರು...

ಅಮೆರಿಕದಲ್ಲಿ H-1B ವೀಸಾ ಹೊಂದಿರುವವರ ಮಕ್ಕಳಿಗೆ ಹುಟ್ಟಿನಿಂದಲೇ ಪೌರತ್ವವಿಲ್ಲ: ಟ್ರಂಪ್ ಹೊಸ ಆದೇಶ

ನ್ಯೂಯಾರ್ಕ್, ಜ.22: ಅಮೆರಿಕದಲ್ಲಿ ನವಜಾತ ಶಿಶುವಿನ ಕನಿಷ್ಠ ಒಬ್ಬ ಪೋಷಕ ಅಮೆರಿಕನ್...
error: Content is protected !!