Wednesday, January 22, 2025
Wednesday, January 22, 2025

ಕರ್ನಾಟಕ ಕರಾವಳಿಯ ರಾಷ್ಟ್ರೀಯ ಭದ್ರತೆಯ ಬಗ್ಗೆ ವಿಚಾರ ವಿನಿಮಯ

ಕರ್ನಾಟಕ ಕರಾವಳಿಯ ರಾಷ್ಟ್ರೀಯ ಭದ್ರತೆಯ ಬಗ್ಗೆ ವಿಚಾರ ವಿನಿಮಯ

Date:

ಉಡುಪಿ, ಆ.9: ಕರಾವಳಿ ಕಾವಲು ಪೊಲೀಸ್ ಕರ್ನಾಟಕ, ಕೇಂದ್ರ ಕಛೇರಿ ಮಲ್ಪೆಯಲ್ಲಿ ಬುಧವಾರ ಅಬ್ದುಲ್ ಅಹದ್, ಐಪಿಎಸ್‌ರವರ ಉಪಸ್ಥಿತಿಯಲ್ಲಿ ಮರ್ಚೆಂಟ್ ನೇವಿಯ ನಿವೃತ್ತ ಅಧಿಕಾರಿಗಳು ಮತ್ತು ಭಾರತೀಯ ನೌಕಾಸೇನೆ, ಭಾರತೀಯ ತಟರಕ್ಷಣ ಪಡೆಯಲ್ಲಿ ಪ್ರಸ್ತುತ ಕೆಲಸ ಮಾಡುತ್ತಿರುವ ಅಧಿಕಾರಿ, ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಕರ್ನಾಟಕ ಕರಾವಳಿಯ ರಾಷ್ಟ್ರೀಯ ಭದ್ರತೆಯ ಬಗ್ಗೆ ವಿಚಾರ ವಿನಿಮಯ ನಡೆಸಲಾಯಿತು.

ಮಂಗಳೂರು ಮರೈನ್ ಕಾಲೇಜಿನ ಉಪಪ್ರಾಂಶುಪಾಲ ಡಾಲ್ಸಿ ಪಿಂಟೋ ಹಾಗೂ ಇತರೇ ನಿವೃತ್ತ ಹಾಗೂ ಪ್ರಸ್ತುತ ಸೇವೆಯಲ್ಲಿರುವ ನೌಕಾಧಿಕಾರಿಗಳು ತಮ್ಮ ಕರ್ತವ್ಯದ ಸಮಯದಲ್ಲಿ ಅವರ ಬೇರೆ ಬೇರೆ ದೇಶಗಳ ಪ್ರಯಾಣದ ವೇಳೆ ಆದ ಅವರ ಅನುಭವಗಳನ್ನು ಹಾಗೂ ರಾಷ್ಟ್ರೀಯ ಭದ್ರತೆಯ ಬಗ್ಗೆ ಅನಿಸಿಕೆಯನ್ನು ಹಂಚಿಕೊಂಡರು. ಸಭೆಯಲ್ಲಿ ಕರಾವಳಿ ಕಾವಲು ಪೊಲೀಸ್ ಘಟಕದ 9 ಠಾಣೆಗಳ ಪೊಲೀಸ್ ನಿರೀಕ್ಷಕರು ಹಾಗೂ ಉಪ ನಿರೀಕ್ಷಕರುಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಮೆರಿಕದಲ್ಲಿ H-1B ವೀಸಾ ಹೊಂದಿರುವವರ ಮಕ್ಕಳಿಗೆ ಹುಟ್ಟಿನಿಂದಲೇ ಪೌರತ್ವವಿಲ್ಲ: ಟ್ರಂಪ್ ಹೊಸ ಆದೇಶ

ನ್ಯೂಯಾರ್ಕ್, ಜ.22: ಅಮೆರಿಕದಲ್ಲಿ ನವಜಾತ ಶಿಶುವಿನ ಕನಿಷ್ಠ ಒಬ್ಬ ಪೋಷಕ ಅಮೆರಿಕನ್...

ಉಪ್ಪೂರು: ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ತ್ಯಾಜ್ಯದ ರಾಶಿ; ಉಡುಪಿ ಜಿಲ್ಲೆಯ ಸ್ವಚ್ಛತೆಗೆ ಇದೊಂದು ದೊಡ್ಡ ಕಪ್ಪುಚುಕ್ಕೆ

ಉಪ್ಪೂರು, ಜ.21: ಒಂದೆಡೆ ದೇಶಾದ್ಯಂತ ಸ್ವಚ್ಛತೆಯ ಕಾಳಜಿಯ ಬಗ್ಗೆ ಸರಣಿ ಕಾರ್ಯಕ್ರಮಗಳು...

ಪಾಳೆಕಟ್ಟೆ: ನೂತನ ಬಸ್ಸು ತಂಗುದಾಣಕ್ಕೆ ಭೂಮಿ ಪೂಜೆ

ಕೊಡವೂರು, ಜ.21: ಕೊಡವೂರು ವಾರ್ಡಿನ ಪಾಳೆಕಟ್ಟೆಯಲ್ಲಿ ಬಸ್ಸು ತಂಗುದಾಣಕ್ಕೆ ನಗರಸಭಾ ಸದಸ್ಯರಾದ...

ಸಂಚಾರ ಪ್ರಜ್ಞೆಯು ಜೀವನದ ಭಾಗವಾಗಬೇಕು: ಮನೋಹರ್ ಹೆಚ್ ಕೆ

ಮಣಿಪಾಲ, ಜ.21: ಮಾಹೆಯ ಎಂಐಟಿ, ಎನ್‌ಎಸ್‌ಎಸ್ ಘಟಕಗಳು, ಉಡುಪಿ ಜಿಲ್ಲಾ ಪೊಲೀಸ್​...
error: Content is protected !!