Wednesday, January 22, 2025
Wednesday, January 22, 2025

ಜಲ ಜೀವನ್ ಮಿಷನ್ ಕಾಮಗಾರಿ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ: ಸಿಇಓ ಪ್ರಸನ್ನ ಹೆಚ್

ಜಲ ಜೀವನ್ ಮಿಷನ್ ಕಾಮಗಾರಿ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ: ಸಿಇಓ ಪ್ರಸನ್ನ ಹೆಚ್

Date:

ಉಡುಪಿ, ಆ.16: ಗ್ರಾಮೀಣ ಭಾಗದ ಜನರಿಗೆ ಕುಡಿಯುವ ನೀರನ್ನು ಒದಗಿಸುವ ಮನೆ ಮನೆಗೆ ನಳ ಸಂಪರ್ಕ ಕಲ್ಪಿಸುವ ಜಲ ಜೀವನ್ ಮಿಷನ್ ನ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಂಡು ನಿಗಧಿತ ಕಾಲಾವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಪಂಚಾಯತ್ ಸಿಇಓ ಪ್ರಸನ್ನ ಹೆಚ್ ಅವರು ತಿಳಿಸಿದರು. ಅವರು ಬುಧವಾರ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಸರಬರಾಜು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅದ್ಯಕ್ಷತೆ ವಹಿಸಿ ಮಾತನಾಡಿದರು.

ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಜಲ ಜೀವನ್ ಮಿಷನ್ ಯೋಜನೆಯಕಾಮಗಾರಿಗಳನ್ನು ನಿಗದಿತ ಕಾಲಾವಧಿಯೊಳಗೆ ಪೂರ್ಣಗೊಳಿಸಿ ಜನ ಸಾಮಾನ್ಯರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದರು. ಈ ಯೋಜನೆಯಡಿ ಜಿಲ್ಲೆಯಲ್ಲಿ 2,47,190 ಮನೆಗಳಿಗೆ ನಳ ಸಂಪರ್ಕ ಕಲ್ಪಿಸುವ ಗುರಿ ಹೊಂದಲಾಗಿದ್ದು, ಈಗಾಗಲೇ 3 ಹಂತಗಳಲ್ಲಿ ಕಾಮಗಾರಿಗಳನ್ನು ಕೈಗೊಂಡು 1,90,974 ಮನೆಗಳಿಗೆ ನಲ್ಲಿ ನೀರಿನ ಸೌಲಭ್ಯವನ್ನು ಕಲ್ಪಿಸಲಾಗಿದೆ. ಬಾಕಿ ಉಳಿದ ಮನೆಗಳಿಗೆ ತ್ವರಿತವಾಗಿ ನೀರಿನ ಸಂಪರ್ಕವನ್ನು ಕಲ್ಪಿಸಬೇಕು ಎಂದರು.

3 ಹಂತಗಳಲ್ಲಿ ಕೈಗೊಂಡಿರುವ ಕಾಮಗಾರಿಗಳಲ್ಲಿ ಮೊದನೇ ಹಂತದಲ್ಲಿ 17 ಕಾಮಗಾರಿಗಳನ್ನು ಜಾಗದ ಸಮಸ್ಯೆ ಸೇರಿದಂತೆ ಮತ್ತಿತರೆ ಕಾರಣಗಳಿಂದ ನಿಗಧಿತ ಕಾಲಾವಧಿಯಲ್ಲಿ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ ಇವುಗಳನ್ನು ಆದ್ಯತೆಯ ಮೇಲೆ ಗ್ರಾಮ ಪಂಚಾಯತ್ ಅಭಿವೃಧ್ದಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಿ, ಪೂರ್ಣಗೊಳಿಸಬೇಕು ಎಂದರು. ಕಾಮಗಾರಿಗಳನ್ನು ಕೈಗೊಳ್ಳಲು ಕೆಲವು ಗುತ್ತಿಗೆದಾರರು ನಿರ್ಲಕ್ಷ್ಯ ವಹಿಸಿ ವಿನಾಕಾರಣ ಕಾಮಗಾರಿಗಳನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸದೇ ಇದ್ದಲ್ಲಿ ಅಂತಹವರ ಮೇಲೆ ನಿರ್ದಾಕ್ಷಿಣ್ಯವಾಗಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದರು.

ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಉದಯಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಕೃಷಿ ಇಲಾಖೆ ಉಪ ನಿರ್ದೇಶಕ ಚಂದ್ರಶೇಖರ್ ನಾಯಕ್, ಡಿಡಿಪಿಐ ಗಣಪತಿ ಕೆ., ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಮೆರಿಕದಲ್ಲಿ H-1B ವೀಸಾ ಹೊಂದಿರುವವರ ಮಕ್ಕಳಿಗೆ ಹುಟ್ಟಿನಿಂದಲೇ ಪೌರತ್ವವಿಲ್ಲ: ಟ್ರಂಪ್ ಹೊಸ ಆದೇಶ

ನ್ಯೂಯಾರ್ಕ್, ಜ.22: ಅಮೆರಿಕದಲ್ಲಿ ನವಜಾತ ಶಿಶುವಿನ ಕನಿಷ್ಠ ಒಬ್ಬ ಪೋಷಕ ಅಮೆರಿಕನ್...

ಉಪ್ಪೂರು: ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ತ್ಯಾಜ್ಯದ ರಾಶಿ; ಉಡುಪಿ ಜಿಲ್ಲೆಯ ಸ್ವಚ್ಛತೆಗೆ ಇದೊಂದು ದೊಡ್ಡ ಕಪ್ಪುಚುಕ್ಕೆ

ಉಪ್ಪೂರು, ಜ.21: ಒಂದೆಡೆ ದೇಶಾದ್ಯಂತ ಸ್ವಚ್ಛತೆಯ ಕಾಳಜಿಯ ಬಗ್ಗೆ ಸರಣಿ ಕಾರ್ಯಕ್ರಮಗಳು...

ಪಾಳೆಕಟ್ಟೆ: ನೂತನ ಬಸ್ಸು ತಂಗುದಾಣಕ್ಕೆ ಭೂಮಿ ಪೂಜೆ

ಕೊಡವೂರು, ಜ.21: ಕೊಡವೂರು ವಾರ್ಡಿನ ಪಾಳೆಕಟ್ಟೆಯಲ್ಲಿ ಬಸ್ಸು ತಂಗುದಾಣಕ್ಕೆ ನಗರಸಭಾ ಸದಸ್ಯರಾದ...

ಸಂಚಾರ ಪ್ರಜ್ಞೆಯು ಜೀವನದ ಭಾಗವಾಗಬೇಕು: ಮನೋಹರ್ ಹೆಚ್ ಕೆ

ಮಣಿಪಾಲ, ಜ.21: ಮಾಹೆಯ ಎಂಐಟಿ, ಎನ್‌ಎಸ್‌ಎಸ್ ಘಟಕಗಳು, ಉಡುಪಿ ಜಿಲ್ಲಾ ಪೊಲೀಸ್​...
error: Content is protected !!