ಉಡುಪಿ, ಆ. 16: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪ್ರಸಕ್ತ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ 2022ನೇ ಕ್ಯಾಲೆಂಡರ್ ವರ್ಷದಲ್ಲಿ (ದಿನಾಂಕ:-01-01-2022 ರಿಂದ ದಿನಾಂಕ:-31-12-2022) ಅಂತರಾಷ್ಟ್ರೀಯ/ರಾಷ್ಟ್ರೀಯ/ರಾಜ್ಯಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡುವ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗುತ್ತಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಅರ್ಹ ಕ್ರೀಡಾಪಟುಗಳು ತಮ್ಮ ಪ್ರಸ್ತಾವನೆಗಳನ್ನು ನಿಗದಿತ ನಮೂನೆಯಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನಾಂಕವಾಗಿದ್ದು, ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗಾಗಿ ಡಾ. ರೋಶನ್ ಕುಮಾರ್ ಶೆಟ್ಟಿ, ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಜಿಲ್ಲೆ (0820-2521324, 9845432303) ಇವರನ್ನು ಸಂಪರ್ಕಿಸಲು ಕೋರಿದೆ.