ಉಡುಪಿ, ಆ. 18: ರಾಜ್ಯದ ಎಲ್ಲಾ ಶಾಲೆಗಳಲ್ಲಿ ಒಂದರಿಂದ ಎಂಟನೇ ತರಗತಿಯ ಮಕ್ಕಳಿಗೆ ಮಧ್ಯಾಹ್ನದ ಬಿಸಿ ಊಟದೊಂದಿಗೆ ಪೂರಕ ಪೌಷ್ಟಿಕ ಆಹಾರವಾಗಿ ಮೊಟ್ಟೆ, ಮೊಟ್ಟೆ ಸೇವಿಸದ ಮಕ್ಕಳಿಗೆ ಬಾಳೆಹಣ್ಣು/ಶೇಂಗಾ ಚಿಕ್ಕಿ ವಿತರಿಸಲಾಗುತ್ತಿದ್ದು, ಈ ಮಕ್ಕಳೊಂದಿಗೆ 9 ಮತ್ತು 10 ನೇ ತರಗತಿಯ ಮಕ್ಕಳಿಗೂ ಪೂರಕ ಪೌಷ್ಠಿಕ ಆಹಾರ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಅಜ್ಜರಕಾಡು ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಚಾಲನೆ ನೀಡಿದರು.
ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್., ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಕೆ., ಎಸ್.ಡಿ.ಎಂ.ಸಿ ಅಧ್ಯಕ್ಷರು, ವಿದ್ಯಾರ್ಥಿಗಳ ಪೋಷಕರು, ಶಾಲಾ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.