ಉಡುಪಿ, ಆ. 19: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ನಿ. ಉಡುಪಿ ಇದರ 2022-23ನೇ ಸಾಲಿನ ಸರ್ವತೋಮುಖ ಅಭಿವೃದ್ಧಿಗಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ನೀಡಲ್ಪಡುವ ಸಾಧನಾ ಪ್ರಶಸ್ತಿ ಸತತ 7 ನೇ ಬಾರಿಗೆ ಲಭಿಸಿದೆ. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಡಾ| ಎಂ . ಎನ್. ರಾಜೇಂದ್ರ ಕುಮಾರ್ ರವರಿಂದ ಬ್ಯಾಂಕಿನ ಅಧ್ಯಕ್ಷರಾದ ಯಶ್‌ಪಾಲ್ ಎ. ಸುವರ್ಣ ಹಾಗೂ ಪ್ರಧಾನ ವ್ಯವಸ್ಥಾಪನಾ ನಿರ್ದೇಶಕರಾದ ಜಗದೀಶ್ ಮೊಗವೀರ್ ಪ್ರಶಸ್ತಿಯನ್ನು ಸ್ವೀಕರಿಸಿದರು. ಬ್ಯಾಂಕಿನ ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಶ್ರೀಮತಿ ಶಾರಿಕಾ ಕಿರಣ್ ಉಪಸ್ಥಿತರಿದ್ದರು.
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಯಶ್‌ಪಾಲ್ ಸುವರ್ಣ ರವರ ಅಧ್ಯಕ್ಷತೆಯಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಶಾಖೆಗಳ ಮೂಲಕ ಗ್ರಾಹಕರಿಗೆ ಆಧುನಿಕ ಬ್ಯಾಂಕಿಂಗ್ ಸೌಲಭ್ಯಗಳ ಸೇವೆಯೊಂದಿಗೆ ವ್ಯವಹಾರ ನಡೆಸುತ್ತಿದ್ದು, ಕಳೆದ 13 ವರ್ಷಗಳಿಂದ ನಿರಂತರವಾಗಿ ಸದಸ್ಯರಿಗೆ 18% ಡಿವಿಡೆಂಡ್ ನೀಡುವ ಮೂಲಕ ಕರಾವಳಿ ಭಾಗದ ಅತೀ ಹೆಚ್ಚು ಡಿವಿಡೆಂಡ್ ನೀಡುವ ಅಗ್ರಗಣ್ಯ ಪಟ್ಟಣ ಸಹಕಾರಿ ಬ್ಯಾಂಕ್ ಎಂಬ ಹೆಗ್ಗಳಿಕೆ ಪಾತ್ರವಾಗಿದೆ. ಆಧುನಿಕ ಬ್ಯಾಂಕಿಂಗ್ ವ್ಯವಸ್ಥೆಯೊಂದಿಗೆ ಸುಸಜ್ಜಿತ ಶಾಖೆಗಳ ಮೂಲಕ ಗ್ರಾಹಕ ಸ್ನೇಹಿಯಾಗಿ ವ್ಯವಹಾರ ನಡೆಸುತ್ತಾ ಸರ್ವಾಂಗೀಣ ಪ್ರಗತಿ ಸಾಧಿಸಿದ್ದು ಬ್ಯಾಂಕಿನ ಕಾರ್ಯವೈಖರಿಗೆ ಈ ಬಾರಿಯ ಪ್ರತಿಷ್ಟಿತ ಸಾಧನಾ ಪ್ರಶಸ್ತಿಯ ಮೂಲಕ ಗೌರವಿಸಲಾಗಿದೆ.