Wednesday, July 29, 2026
Wednesday, July 29, 2026

ಜಿಲ್ಲೆಯಲ್ಲಿ 4253 ಯುವ ಮತದಾರರ ನೋಂದಣಿ: ಜಿಲ್ಲಾಧಿಕಾರಿ

ಜಿಲ್ಲೆಯಲ್ಲಿ 4253 ಯುವ ಮತದಾರರ ನೋಂದಣಿ: ಜಿಲ್ಲಾಧಿಕಾರಿ

Date:

ಉಡುಪಿ: ಜಿಲ್ಲೆಯಲ್ಲಿ ಈ ಸಾಲಿನ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಸಂದರ್ಭದಲ್ಲಿ 4253 ಯುವ ಮತದಾರರು ನೋಂದಣಿಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.

ಅವರು ಜಿಲ್ಲಾಧಿಕಾರಿ ಕಛೇರಿಯ ಕೋರ್ಟ್ಹಾಲ್‌ನಲ್ಲಿ, ಭಾರತೀಯ ಚುನಾವಣಾ ಆಯೋಗವು 1-1-2022 ನ್ನು ಅರ್ಹತಾ ದಿನವನ್ನಾಗಿಟ್ಟುಕೊಂಡು ಸಿದ್ಧಪಡಿಸಿರುವ ಭಾವಚಿತ್ರವುಳ್ಳ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ, ಅಂತಿಮ ಮತದಾರರ ಪಟ್ಟಿಯ ಪ್ರತಿಗಳನ್ನು ಹಸ್ತಾಂತರಿಸಿ ಮಾತನಾಡಿದರು.

ಪರಿಷ್ಕೃತ ಅಂತಿಮ ಮತದಾರರ ಪಟ್ಟಿಯಂತೆ ಜಿಲ್ಲೆಯಲ್ಲಿ 4,87,676 ಪುರುಷರು, 5,25,155 ಮಹಿಳಾ ಮತದಾರರು, ಇತರೆ 11 ಸೇರಿದಂತೆ ಒಟ್ಟು 10,12,842 ಮತದಾರರಿದ್ದು, ಈ ಬಾರಿಯ ಪರಿಷ್ಕರಣೆ ಸಂದರ್ಭದಲ್ಲಿ ಹೊಸ ಸೇರ್ಪಡೆಗಾಗಿ 7862, ಹೆಸರು ತೆಗೆದು ಹಾಕಲು 16815, ತಿದ್ದುಪಡಿಗಾಗಿ 2962, ವಿಧಾನಸಭಾ ವ್ಯಾಪ್ತಿಯಲ್ಲಿ ಬದಲಾವಣೆಗಾಗಿ 552 ಅರ್ಜಿಗಳು ಸ್ವೀಕೃತವಾಗಿದ್ದು, 4253 ಯುವ ಮತದಾರರು ನೋಂದಣಿಯಾಗಿದ್ದಾರೆ ಎಂದರು.

ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಗಾಗಿ 4 ದಿನಗಳ ವಿಶೇಷ ಅಭಿಯಾನ ನಡೆಸಲಾಗಿದ್ದು, ಮನೆ ಮನೆಗೆ ಲಸಿಕಾ ಮಿತ್ರ ಕಾರ್ಯಕ್ರಮ ನಡೆಸುವ ಸಂದರ್ಭದಲ್ಲಿ ಸಹ ಸಾರ್ವಜನಿಕರಿಗೆ ಅರಿವು ಮೂಡಿಸಲಾಗಿದೆ. ಅಲ್ಲದೆ ಜಿಲ್ಲಾ ಮಟ್ಟದ ಮತದಾರರ ಸಹಾಯವಾಣಿ ಕೆಂದ್ರದ ಉಚಿತ ಸಹಾಯವಾಣಿ ಸಂಖ್ಯೆ 1950 ಮತದಾರರಿಗೆ ಅಗತ್ಯ ಮಾಹಿತಿಯನ್ನು ನೀಡಲಾಗಿದೆ ಎಂದರು.

ಜಿಲ್ಲೆಯ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಅಂತಿಮ ಮತದಾರರ ಪಟ್ಟಿಯ ಪ್ರತಿಗಳನ್ನು ನೀಡಿದ ಜಿಲ್ಲಾಧಿಕಾರಿಗಳು, ಮತದಾರರ ಪಟ್ಟಿಯ ಸಾಫ್ಟ್ ಪ್ರತಿಯನ್ನು ಸಿ.ಡಿ ಮೂಲಕ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲೆಯ ಬಿ.ಜೆ.ಪಿ., ಕಾಂಗ್ರೆಸ್, ಜೆಡಿಎಸ್, ಮತ್ತು ಸಿಪಿಐ(ಎಂ) ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!