Monday, January 20, 2025
Monday, January 20, 2025

ಅಂಚೆ ಇಲಾಖೆಯಿಂದ ಪತ್ರ ಲೇಖನ ಸ್ಪರ್ಧೆ

ಅಂಚೆ ಇಲಾಖೆಯಿಂದ ಪತ್ರ ಲೇಖನ ಸ್ಪರ್ಧೆ

Date:

ಉಡುಪಿ, ಆ.22: ಭಾರತೀಯ ಅಂಚೆ ಇಲಾಖೆಯ ವತಿಯಿಂದ ನವ ಭಾರತದ ನಿರ್ಮಾಣಕ್ಕಾಗಿ ಡಿಜಿಟಲ್ ಇಂಡಿಯಾ (ಡಿಜಿಟಲ್ ಇಂಡಿಯಾ ಫಾರ್ ನ್ಯೂ ಇಂಡಿಯಾ) ಎಂಬ ವಿಷಯದ ಕುರಿತು 18 ವರ್ಷ ಒಳಗಿನವರಿಗೆ ಹಾಗೂ 18 ವರ್ಷ ಮೇಲ್ಪಟ್ಟವರಿಗೆ ಮುಕ್ತವಾಗಿ ಭಾಗವಹಿಸಲು ಪತ್ರ ಲೇಖನ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸ್ಪರ್ಧಾಳುಗಳು ಕನ್ನಡ, ಇಂಗ್ಲಿಷ್ ಅಥವಾ ಹಿಂದಿ ಭಾಷೆಯಲ್ಲಿ ಅಂತರ್ದೇಶಿಯ ಪತ್ರದಲ್ಲಿ ಐದು ನೂರು ಶಬ್ದಗಳಿಗೆ ಮೀರದಂತೆ ಅಥವಾ ಎ4 ಹಾಳೆಯಲ್ಲಿ ಒಂದು ಸಾವಿರ ಶಬ್ದಗಳು ಮೀರದಂತೆ ಲೇಖನವನ್ನು ಕೈಬರಹದಲ್ಲಿ ಬರೆದು, ಅಂಚೆ ಲಕೋಟೆಯಲ್ಲಿ (ಎನ್ವಲಪ್) ಹಾಕಿ, ಅಕ್ಟೋಬರ್ 31 ರೊಳಗೆ ಮಾನ್ಯ ಅಂಚೆ ಅಧೀಕ್ಷಕರು, ಉಡುಪಿ ಅಂಚೆ ವಿಭಾಗ, ಉಡುಪಿ, ಇವರಿಗೆ ಸಲ್ಲಿಸಬೇಕು.

ಲೇಖನವನ್ನು ಬರೆಯುವಾಗ ಸ್ಪರ್ಧಾಳುಗಳು ತಮ್ಮ ಲೇಖನವನ್ನು ಚೀಫ್ ಪೋಸ್ಟ್ ಮಾಸ್ಟರ್ ಜನರಲ್, ಕರ್ನಾಟಕ ವೃತ್ತ, ಬೆಂಗಳೂರು-560001 ಇವರಿಗೆ ಉದ್ದೇಶಿಸಿ ಬರೆಯಬೇಕಾಗಿದ್ದು, ಲಕೋಟೆಯ ಮೇಲೆ ಢಾಯೀ ಆಕರ್ ಎಂದು ನಮೂದಿಸಿ, ಅದರೊಂದಿಗೆ 18 ವರ್ಷ ಮೇಲಿನವರು / 18 ವರ್ಷ ಕೆಳಗಿನವರು ಎಂಬ ಮಾಹಿತಿಯನ್ನು ಸ್ಪಷ್ಟವಾಗಿ ಬರೆದು, ಸಲ್ಲಿಸಬಹುದು.

ಪತ್ರಲೇಖನ ಸ್ಪರ್ಧೆಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಾಗೂ ಮಾಹಿತಿಗಾಗಿ ಅಂಚೆ ಕಚೇರಿ ದೂ.ಸಂಖ್ಯೆ: 0820-2521780 ಅಥವಾ ವೆಬ್‌ಸೈಟ್ http://www.indiapost.gov.inwww.indiapost.gov.in ಹಾಗೂ http://www.karnatakapost.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!