ಉಡುಪಿ, ಆ. 23: ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ತ್ರಿಷಾ ಪಿ.ಯು. ಕಾಲೇಜಿನ ಸಹಯೋಗದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಚದುರಂಗ ಪಂದ್ಯಾಟದಲ್ಲಿ ಭಾಗವಹಿಸಿದ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ವಿದ್ಯಾರ್ಥಿಗಳಾದ ನೇಸರ್ ಎಂ. ಕಾಂಚನ್ ಮತ್ತು ಯಶಸ್ವಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.
ಚದುರಂಗ: ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಚದುರಂಗ: ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ
Date: