Tuesday, January 21, 2025
Tuesday, January 21, 2025

ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗಬಾರದು: ಡಾ. ಪಿ.ವಿ. ಭಂಡಾರಿ

ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗಬಾರದು: ಡಾ. ಪಿ.ವಿ. ಭಂಡಾರಿ

Date:

ಮಲ್ಪೆ, ಆ. 25: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿ ಪ್ರಥಮ ಬಿ.ಎ., ಬಿ.ಸಿ.ಎ. ಹಾಗೂ ಬಿ.ಎಸ್ಸಿ. ಪದವಿಗೆ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳು ಮತ್ತು ಅವರ ಪಾಲಕರಿಗಾಗಿ ಅಭಿವಿನ್ಯಾಸ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮನೋವೈದ್ಯ ಡಾ. ಪಿ.ವಿ. ಭಂಡಾರಿ, ಇಂದಿನ ಯುವಜನತೆ ಬೇರೆ ಬೇರೆ ಒತ್ತಡಗಳನ್ನು ಎದುರಿಸುತ್ತಿದ್ದು ಯಾವುದೇ ರೀತಿಯಲ್ಲಿ ವಿಚಲಿತರಾಗದೇ ಅಧ್ಯಯನದ ಮೇಲೆ ಮನಸ್ಸನ್ನು ಕೇಂದ್ರೀಕರಿಸಿ ಉತ್ತಮ ಸಾಧನೆಗಳೊಂದಿಗೆ ಭವಿಷ್ಯ ರೂಪಿಸಿಕೊಳ್ಳಬೇಕು. ದುಶ್ಚಟಗಳಿಗೆ ಬಲಿಯಾಗದೇ ತಮ್ಮ ಕರ್ತವ್ಯವನ್ನು ನಿರ್ವಹಿಸಿಕೊಂಡು ಹೆತ್ತವರಿಗೆ ಆಸರೆಯಾಗಬೇಕು. ಸಮಾಜದಲ್ಲಿ ಸಕಾರಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಉತ್ತಮ ನಾಗರಿಕರಾಗಿ ಬೆಳೆಯಬೇಕೆಂದು ಸಲಹೆಯಿತ್ತರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಪ್ರೊ. ಸುರೇಶ್ ರೈ ಕೆ., ಉನ್ನತ ಶಿಕ್ಷಣ ಪಡೆಯುವ ಅವಕಾಶ ಲಭಿಸಿದ ವಿದ್ಯಾರ್ಥಿಗಳು ಉನ್ನತ ಶಿಕ್ಷಣದ ಸೌಲಭ್ಯಗಳನ್ನು ಸಂಪೂರ್ಣ ಸದುಪಯೋಗಪಡಿಸಿಕೊಳ್ಳಬೇಕಾಗಿ ಸೂಚಿಸಿದರು. ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರಶಾಂತ ನೀಲಾವರ, ಪದವಿ ಶಿಕ್ಷಣದಲ್ಲಿ ಪರೀಕ್ಷಾ ವ್ಯವಸ್ಥೆ, ವಿವಿಧ ಕೋರ್ಸುಗಳು, ಹಾಜರಾತಿ ಹಾಗೂ ಕಾಲೇಜಿನಲ್ಲಿರುವ ಅವಕಾಶಗಳು, ಸಹಪಠ್ಯ ಚಟುವಟಿಕೆಗಳ ಕುರಿತಾಗಿ ಮಾಹಿತಿ ನೀಡಿದರು.

ಉಡುಪಿ ಲಯನ್ಸ್ ಅಮೃತ್‌ನ ಅಧ್ಯಕ್ಷರಾದ ಭಾರತಿ ಹೆಚ್.ಎಸ್., ಗಣಕ ವಿಜ್ಞಾನ ವಿಭಾಗ ಮುಖ್ಯಸ್ಥರಾದ ಶ್ರೀ ರಾಜ್ ಕುಮಾರ್, ಗಣಿತಶಾಸ್ತ್ರ ವಿಭಾಗ ಮುಖ್ಯಸ್ಥರಾದ ಡಾ. ಮಮತಾ ಎ.ಎಲ್., ಅಂಗ್ಲ ವಿಭಾಗ ಮುಖ್ಯಸ್ಥರಾದ ನಿತ್ಯಾನಂದ ವಿ. ಗಾಂವಕರ್ ಬೋಧಕ/ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಡಾ. ಪ್ರಸಾದ್ ರಾವ್ ಎಂ. ಸ್ವಾಗತಿಸಿ, ಗಣಕ ವಿಜ್ಞಾನ ಸಹಾಯಕ ಪ್ರಾಧ್ಯಾಪಕರಾದ ಪ್ರಸಾದ್ ಎಂ.ಹೆಚ್. ವಂದಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಾಧಾಕೃಷ್ಣ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!