Saturday, October 17, 2026
Saturday, October 17, 2026

ನೇತಾಜಿ ಜೀವನ ಯುವಕರಿಗೆ ಸ್ಪೂರ್ತಿ: ಪ್ರಶಾಂತ್ ಪೂಜಾರಿ

ನೇತಾಜಿ ಜೀವನ ಯುವಕರಿಗೆ ಸ್ಪೂರ್ತಿ: ಪ್ರಶಾಂತ್ ಪೂಜಾರಿ

Date:

ಉಡುಪಿ: ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ ಜೀವನ ಯುವಕರಿಗೆ ಸದಾಕಾಲವೂ ಸ್ಪೂರ್ತಿ ನೀಡಲಿದೆ ಎಂದು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ ಹೇಳಿದರು.

ನೆಹರು ಯುವ ಕೇಂದ್ರ ಉಡುಪಿ, ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಇದರ ಸಂಯುಕ್ತ ಆಶ್ರಯದಲ್ಲಿ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ನ ರಂಗಮಂದಿರದಲ್ಲಿ ಸುಭಾಸ್ ಚಂದ್ರ ಬೋಸ್ ರವರ 125ನೇ ಜನ್ಮದಿನಾಚರಣೆ ಮತ್ತು “ಪರಾಕ್ರಮ ದಿನ” ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಭಾರತ ಕಂಡ ಅಸಾಮಾನ್ಯ ಸ್ವಾತಂತ್ರ್ಯ ಹೋರಾಟಗಾರ, ‘ಆಜಾದ್ ಹಿಂದ್ ಫೌಜ’ ಎಂಬ ಸೇನೆಯನ್ನು ಕಟ್ಟಿ ‘ನನಗೆ ರಕ್ತ ಕೊಡಿ ನಾನು ನಿಮಗೆ ಸ್ವಾತಂತ್ರ್ಯ ಕೊಡುತ್ತೇನೆ ಎಂದು ಬ್ರಿಟಿಷ್ ಸಾಮ್ರಾಜ್ಯಶಾಹಿ ಕನಸಿನಲ್ಲೂ ಬೆಚ್ಚಿಬೀಳುವಂತೆ ಮಾಡಿದ ಸುಭಾಶ್ಚಂದ್ರಬೋಸ್ ಭಾರತೀಯರೆಲ್ಲರ ಪ್ರೀತಿಯ ‘ನೇತಾಜಿ’ ದೇಶಕಂಡ ಮಹಾನ್ ನಾಯಕ ಎಂದು ಅವರು ಹೇಳಿದರು.

ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ಬಿನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಮಾತನಾಡಿ, ಪಾದರಸದಂತೆ ಓಡಾಡಿ ಸ್ವರಾಜ್ಯ ಹೋರಾಟಕ್ಕೆ ಜೀವನವನ್ನೇ ಮುಡಿಪಾಗಿಟ್ಟ ಧೀಮಂತ ನಾಯಕ ನೇತಾಜಿ. ಇವರ ಜೀವನ ಆದರ್ಶಗಳು ನಮ್ಮಂಥ ಯುವಕರಿಗೆ ಸ್ಫೂರ್ತಿ ಎಂದರು. ಸಂಘದ ಪೂರ್ವಾಧ್ಯಕ್ಷರುಗಳು, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

2030 ರ ವೇಳೆಗೆ ಭಾರತ ಮತ್ತು ರಷ್ಯಾ 100 ಬಿಲಿಯನ್ ಡಾಲರ್ ದ್ವಿಪಕ್ಷೀಯ ವ್ಯಾಪಾರ ಗುರಿ

ನವದೆಹಲಿ, ಅ.16: ರಷ್ಯಾ ಮತ್ತು ಇತರ ಸದಸ್ಯ ರಾಷ್ಟ್ರಗಳಿಗೆ ರಫ್ತುಗಳನ್ನು ಹೆಚ್ಚಿಸಲು...

ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಶಿಕ್ಷಕ- ಪೋಷಕರ ಸಭೆ

ಕಾರ್ಕಳ, ಅ.16: ವಿದ್ಯಾರ್ಥಿಗಳ ಕನಸುಗಳಿಗೆ ದಿಕ್ಕು ತೋರಿಸಿ, ಭವಿಷ್ಯದ ಸಾಧನೆಗೆ ಭದ್ರ...

ಉಡುಪಿಯಲ್ಲಿ ತಂಪೆರೆದ ಮುಂಜಾನೆ ಮಳೆ

ಉಡುಪಿ, ಅ.16: ಉಡುಪಿ ಜಿಲ್ಲೆಯ ಹಲವೆಡೆ ಶುಕ್ರವಾರ ಮುಂಜಾನೆ ಗುಡುಗು ಸಹಿತ...

ಸಂಸ್ಕೃತಿ ನಮ್ಮ ಗೌರವದ ಪ್ರತೀಕ: ಡಾ. ವೆಂಕಟರಾಮ್ ಭಟ್

ಉಡುಪಿ, ಅ.16: ಭಾರತೀಯ ಸಂಸ್ಕೃತಿಯ ಉಳಿವಿನಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳ ಪಾತ್ರ...
error: Content is protected !!