ಬ್ರಹ್ಮಾವರ, ಆ. 28: ಉಡುಪಿ ಜಿಲ್ಲಾ ಪದವಿಪೂರ್ವ ಕಾಲೇಜುಗಳ ವಾಣಿಜ್ಯಶಾಸ್ತ್ರ ಉಪನ್ಯಾಸಕರ ಒಂದು ದಿನದ ವಿಷಯಾಧಾರಿತ ಪುನಶ್ಚೇತನ ಕಾರ್ಯಾಗಾರ ಬ್ರಹ್ಮಾವರದ ಶ್ರೀ ವಿದ್ಯಾಲಕ್ಷ್ಮೀ ಸಮೂಹ ಸಂಸ್ಥೆಗಳ ಆಶ್ರಯದಲ್ಲಿ ನಡೆಯಿತು. ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ ಉಪನಿರ್ದೇಶಕ ಮಾರುತಿ, ಮಾತನಾಡಿ ವಾಣಿಜ್ಯಶಾಸ್ತ್ರ ಉಪನ್ಯಾಸಕರು ಹೆಚ್ಚು ಕಾರ್ಯತತ್ಪರರಾಗಿದ್ದು ಎರಡೆರಡು ವಿಷಯಗಳ ಬೋಧನಾ ಅರ್ಹತೆಯನ್ನು ಹೊಂದಿರುವುದರಿಂದ ಹೆಚ್ಚು ಕ್ರಿಯಾಶೀಲರಾಗಿರುತ್ತಾರೆ ಎಂದು ಅಭಿಪ್ರಾಯಪಟ್ಟರು.
ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾಲಯ ಕಾಲೇಜಿನ ರಿಸರ್ಚ್ ಪ್ರೊಫೆಸರ್ ಡಾ.ಗಣೇಶ್ ಭಟ್ ಮಾಹಿತಿ ನೀಡಿದರು. ವಿದ್ಯಾಲಕ್ಷ್ಮಿ ಸಮೂಹ ಸಂಸ್ಥೆಗಳ ಪ್ರಾಂಶುಪಾಲೆ ಸೀಮಾ ಜಿ ಭಟ್ ಅಧ್ಯಕ್ಷತೆ ವಹಿಸಿದ್ದರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿದ್ಯಾಲಕ್ಷ್ಮಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ಉಪಸ್ಥಿತರಿದ್ದರು. ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಎಂ.ರಾಘವೇಂದ್ರ ಭಟ್, ಬ್ರಹ್ಮಾವರದ ಎಸ್ಎಂಎಸ್ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಹರೀಶ್ ಕುಮಾರ್, ಹಿರಿಯಡ್ಕ ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ರಂಜಿತಾ ಮತ್ತು ಮಲ್ಪೆಯ ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಹೇಮಲತಾ ಲೆಕ್ಕಶಾಸ್ತ್ರ ಮತ್ತು ವ್ಯವಹಾರ ಅಧ್ಯಯನ ವಿಷಯಗಳ ವಿಷಯ ತಜ್ಞರಾಗಿ ವಿಚಾರ ಮಂಡನೆ ಮಾಡಿದರು. ಈ ಸಂದರ್ಭದಲ್ಲಿ ವಯೋನಿವೃತ್ತಿಯ ಅಂಚಿನಲ್ಲಿರುವ ಮುಂಡ್ಕೂರು ವಿದ್ಯಾವರ್ಧಕ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದೇವದಾಸ್ ಕೆ ಇವರನ್ನು ಸನ್ಮಾನಿಸಲಾಯಿತು.
ವಿವೇಕ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಅನಿತಾ ಹೊಳ್ಳ ಪ್ರಾರ್ಥಿಸಿದರು. ಕೋಟ ವಿವೇಕ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಸಂಜೀವ ಗುಂಡ್ಮಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಂಘದ ನಿಕಟಪೂರ್ವ ಅಧ್ಯಕ್ಷ ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಉಪನ್ಯಾಸಕ ಸಂತೋಷ್ ಕುಮಾರ್ ಸ್ವಾಗತಿಸಿದರು. ಕೋಟ ವಿವೇಕ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಅಮಿತ್ ಕಾರ್ಯಕ್ರಮ ನಿರೂಪಿಸಿದರು. ಹೆಬ್ರಿಯ ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಬಲರಾಮ ವೈದ್ಯ ವಂದಿಸಿದರು.