Monday, November 25, 2024
Monday, November 25, 2024

ಕಿರು ಆಹಾರ ಸಂಸ್ಕರಣಾ ಉದ್ದಿಮೆ ಸ್ಥಾಪನೆ: ಅರ್ಜಿ ಆಹ್ವಾನ

ಕಿರು ಆಹಾರ ಸಂಸ್ಕರಣಾ ಉದ್ದಿಮೆ ಸ್ಥಾಪನೆ: ಅರ್ಜಿ ಆಹ್ವಾನ

Date:

ಉಡುಪಿ, ಆ.28: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯಡಿ ಘಟಕದ ಸ್ಥಾಪನೆ ಹಾಗೂ ಉನ್ನತೀಕರಣಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಣ್ಣ ಉದ್ಯಮಿಗಳು, ವೈಯಕ್ತಿಕ ಉದ್ದಿಮೆಗಳು, ಮಾಲಿಕತ್ವದ ಸಂಸ್ಥೆಗಳು, ಪಾಲುದಾರಿಕೆ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು, ರೈತ ಉತ್ಪಾದಕ ಸಂಸ್ಥೆಗಳು, ಸರ್ಕಾರೇತರ ಸಂಸ್ಥೆಗಳು, ಸ್ವ-ಸಹಾಯ ಸಂಘಗಳು ಹಾಗೂ ಸಹಕಾರಿ ಸಂಘಗಳು ಈ ಯೋಜನೆಯ ಲಾಭ ಪಡೆಯಬಹುದಾಗಿದೆ.

ಜಿಲ್ಲೆಯಲ್ಲಿ ಈ ಯೋಜನೆಗೆ ಸಾಕಷ್ಟು ಅವಕಾಶಗಳಿದ್ದು, ತೆಂಗಿನ ಎಣ್ಣೆ ತಯಾರಿಕೆ, ಒಣಮೀನು ತಯಾರಿಕೆ, ಬೇಕರಿ ಉತ್ಪನ್ನಗಳು, ಹಪ್ಪಳ ತಯಾರಿಕೆ, ಸಾಗರೋತ್ಪನ್ನ ಉತ್ಪನ್ನಗಳು, ಮಸಾಲ ಪದಾರ್ಥಗಳು, ಹಾಲಿನ ಉತ್ಪನ್ನಗಳು, ಪಶು ಆಹಾರ ತಯಾರಿಕೆ, ತೆಂಗಿನ ಸಂಸ್ಕರಣಾ ಘಟಕ ಹಾಗೂ ಬೇಕರಿ ಉತ್ಪನ್ನಗಳಿಗೆ ಅವಕಾಶವಿದ್ದು ರೈತರು ಮತ್ತು ಉದ್ದಿಮೆದಾರರು ಯೋಜನೆಯ ನೆರವನ್ನು ಪಡೆದು ಸ್ವ-ಉದ್ಯಮ ಸ್ಥಾಪಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಾದ ಸೂರಜ್ ಶೆಟ್ಟಿ ಮೊ.ನಂ: 9019075051, 7204192914, ವೆಂಕಟೇಶ್ ನಾಯಕ್ – ಮೊ.ನಂ: 8310353519 ಹಾಗೂ ಜೇಬಾ ಸೆಲ್ವನ್ ಮೊ.ನಂ: 9880821945, 7483195631 ಅಥವಾ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೃಷಿ ಇಲಾಖೆ, ರಜತಾದ್ರಿ, ಮಣಿಪಾಲ ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...

ತುಳು ಭಾವಗೀತೆ ಸ್ಪರ್ಧೆ

ಉಡುಪಿ, ನ.24: ತುಳುಕೂಟ ಉಡುಪಿ (ರಿ,) ವತಿಯಿಂದ ದಿ. ನಿಟ್ಟೂರು ಸಂಜೀವ...

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...
error: Content is protected !!