Tuesday, January 21, 2025
Tuesday, January 21, 2025

ಗರ್ಭಪೂರ್ವ ಹಾಗೂ ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ಹಚ್ಚುವುದು ಕಾನೂನಿನ ಅಡಿಯಲ್ಲಿ ಅಪರಾಧ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಗರ್ಭಪೂರ್ವ ಹಾಗೂ ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ಹಚ್ಚುವುದು ಕಾನೂನಿನ ಅಡಿಯಲ್ಲಿ ಅಪರಾಧ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

Date:

ಉಡುಪಿ, ಆ.30: ಗರ್ಭಪೂರ್ವ ಹಾಗೂ ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ಮಾಡುವುದು ಕಾನೂನಿನ ಅಡಿಯಲ್ಲಿ ಅಪರಾಧ. ಇತ್ತೀಚಿನ ದಿನಗಳಲ್ಲಿ ಹೆಣ್ಣು ಹಾಗೂ ಗಂಡು ಮಕ್ಕಳ ಲಿಂಗಾನುಪಾತ ವ್ಯತ್ಯಾಸ ಉಂಟಾಗಿ ಸಮಾಜದಲ್ಲಿ ಗಂಭೀರ ಪರಿಣಾಮ ಉಂಟಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ, ಜಿಲ್ಲಾಡಳಿ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಕ್ಷಮ ಪ್ರಾಧಿಕಾರ ಪಿ.ಸಿ. & ಪಿ.ಎನ್.ಡಿ.ಟಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ, ಜಿಲ್ಲಾ ಪಿ.ಸಿ & ಪಿ.ಎನ್.ಡಿ.ಟಿ ನೋಂದಾಯಿತ ಸಂಸ್ಥೆಗಳ ಮಾಲಿಕರು ಹಾಗೂ ವೈದ್ಯರಿಗೆ ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆ ಕುರಿತು ನಡೆದ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಹೆಣ್ಣು ಭ್ರೂಣಹತ್ಯೆಯಿಂದಾಗಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಇದರಿಂದ ಸಾಮಾಜಿಕವಾಗಿ ಅಸಮತೋಲನ ಉಂಟಾಗುತ್ತಿದೆ. ಹೆಣ್ಣು ಮಕ್ಕಳು ಹೊರೆ ಎಂದು ಭಾವಿಸದೇ, ಹೆಣ್ಣು ಮತ್ತು ಗಂಡು ಮಕ್ಕಳನ್ನು ಸಮಾನವಾಗಿ ಕಾಣಬೇಕು. ಇದರಿಂದ ಲಿಂಗಾನುಪಾತದಲ್ಲಿ ಬದಲಾವಣೆ ತರಲು ಸಾಧ್ಯ ಎಂದರು. ಸ್ಕ್ಯಾನಿಂಗ್ ಸೆಂಟರ್‌ಗಳು ಪರವಾನಿಗೆ ಹೊಂದಿ, ಅನುಮತಿ ಪಡೆದಿರಬೇಕು. ಸ್ಕ್ಯಾನಿಂಗ್ ಸೆಂಟರ್‌ಗಳು ಭ್ರೂಣವನ್ನು ಪತ್ತೆಹಚ್ಚುವ ಕಾರ್ಯವನ್ನು ಮಾಡಬಾರದು. ನಿಯಮಾನುಸಾರ ದಾಖಲಾತಿಗಳನ್ನು ಪ್ರತಿದಿನ ನಿರ್ವಹಣೆ ಮಾಡಬೇಕು ಎಂದರು.

ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಲಿಂಗಾನುಪಾತವು 1000 ಗಂಡು ಮಕ್ಕಳಿಗೆ 967 ಹೆಣ್ಣು ಮಕ್ಕಳಿದ್ದಾರೆ. ಮುಂದಿನ ದಿನಗಳಲ್ಲಿ ಲಿಂಗಾನುಪಾತವು ಮತ್ತಷ್ಟು ವ್ಯತ್ಯಾಸವಾಗುವ ಸಾಧ್ಯತೆ ಇವೆ ಎಂದ ಅವರು, ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ಹೆಣ್ಣು ಅಥವಾ ಗಂಡು ಎಂಬುದನ್ನು ತಿಳಿಸಬಾರದು. ಒಂದೊಮ್ಮೆ ಇದನ್ನು ಉಲ್ಲಂಘಿಸಿದ್ದಲ್ಲಿ ಕಾನೂನು ಅಡಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದ ಅವರು, ಹಣ ಸಂಪಾದನೆ ಮಾಡುವ ಉದ್ದೇಶದಿಂದ ಈ ರೀತಿಯ ಕೃತ್ಯಗಳು ನಡೆಯುತ್ತಿದ್ದು, ಪರೀಕ್ಷಿಸಲು ಬರುವ ಸ್ಕಾö್ಯನಿಂಗ್ ಸೆಂಟರ್‌ಗಳ ಸಿಬ್ಬಂದಿಗಳು, ಪೋಷಕರಿಗೆ ಮತ್ತು ವೈದ್ಯರುಗಳಿಗೆ ಈ ಕುರಿತು ತಿಳೀ ಹೇಳಬೇಕು ಎಂದರು. ಹೆಣ್ಣು ಭ್ರೂಣ ಹಚ್ಚಿದಲ್ಲಿ ಅವುಗಳ ಹತ್ಯೆ ನಡೆಯುತ್ತಿದ್ದು, ಇದರಿಂದ ಲಿಂಗಾನುಪಾತದಲ್ಲಿ ವ್ಯತ್ಯಾಸ ಉಂಟಾಗುತ್ತದೆ. ಇದರ ಜೊತೆಗೆ ಹೆಣ್ಣು ಮಕ್ಕಳ ಅಕ್ರಮ ಮಾರಾಟ ಮಾಡುತ್ತಿರುವಂತಹ ಅಕ್ರಮ ಜಾಲವು ಕಾರ್ಯಾಚರಿಸುತ್ತಿದ್ದು, ಇದರ ಕುರಿತು ಜಾಗೃತೆ ವಹಿಸುವುದರೊಂದಿಗೆ, ಹೆಣ್ಣು ಮಕ್ಕಳಿಗೆ ಈ ಕುರಿತು ಅರಿವು ಮೂಡಿಸಬೇಕು ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಮಾತನಾಡಿ, ಜಿಲ್ಲೆಯಲ್ಲಿ ಪೋಕ್ಸೋ ಪ್ರಕರಣಗಳು ಹೆಚ್ಚಾಗಿ ದಾಖಲಾಗುತ್ತಿದ್ದು, ಇದು ಶೋಚನೀಯ ಸಂಗತಿಯಾಗಿದೆ. ಸ್ಕ್ಯಾನಿಂಗ್ಗ್ ಸೆಂಟರ್‌ಗಳಿಗೆ ಗರ್ಣಿಣಿಯರು ಹಾಗೂ ಅಪ್ರಾಪ್ತ ವಯಸ್ಕರು ಬಂದಲ್ಲಿ ಮೊದಲು ಪೊಲೀಸರಿಗೆ ಮಾಹಿತಿ ನೀಡಬೇಕು. ವಲಸೆ ಕಾರ್ಮಿಕರ ಮಕ್ಕಳು ಹಾಗೂ ಇತರರು ಬಂದಲ್ಲಿ ಸಕ್ಷಮ ಪ್ರಾಧಿಕಾರಿಗಳಿಗೆ ಮಾಹಿತಿ ನೀಡಬೇಕು. ಸ್ಕಾನಿಂಗ್ ಸೆಂಟರ್‌ಗಳಲ್ಲಿ ಗರ್ಭಿಣಿಯರು ಭ್ರೂಣದಲ್ಲಿರುವ ಮಗುವು ಹೆಣ್ಣು ಅಥವಾ ಗಂಡು ಮಕ್ಕಳ ಕುರಿತು ತಪಾಸಣೆ ಮಾಡಿಸಿದ್ದಲ್ಲಿ ಇದಕ್ಕೆ ಕಾನೂನಿನಲ್ಲಿ 3 ವರ್ಷಗಳ ಕಾರಾಗೃಹ ವಾಸ ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಲಾಗುತ್ತದೆ. ಇದು ಪುನರಾವರ್ತನೆಯಾದಲ್ಲಿ 5 ವರ್ಷಗಳ ಕಾರಾಗೃಹ ವಾಸ ಶಿಕ್ಷೆ ಹಾಗೂ 50,000 ರೂ. ಗಳ ವರೆಗೆ ದಂಡ ವಿಧಿಸ¯ಲು ಕಾನೂನಿನಲ್ಲಿ ಅವಕಾಶವಿದೆ ಎಂದರು. ಸ್ಕ್ಯಾನಿಂಗ್ ಸೆಂಟರ್‌ನಲ್ಲಿರುವ ತಂತ್ರಜ್ಞಾನಗಳನ್ನು ಸದುಪಯೋಪಡಿಸಿಕೊಳ್ಳಬೇಕು. ಇದರ ದುರುಪಯೋಗವಾಗಬಾರದು ಎಂದರು.

ಪಿ.ಸಿ & ಪಿ.ಎನ್.ಡಿ.ಟಿ ಜಿಲ್ಲಾ ಸಲಹಾ ಸಮಿತಿ ಅಧ್ಯಕ್ಷ ಡಾ. ಪ್ರತಾಪ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಾಗಾರದಲ್ಲಿ ಹೆಣ್ಣು ಮಕ್ಕಳ ಪ್ರಾಮುಖ್ಯತೆ ಕುರಿತು ಕರಪತ್ರವನ್ನು ಬಿಡುಗಡೆಗೊಳಿಸಲಾಯಿತು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ್ ಉಡುಪ, ಡಾ. ಶಶಿಕಲಾ ಭಟ್, ವೈದ್ಯಾಧಿಕಾರಿಗಳು, ನೋಂದಾಯಿತ ಸ್ಕ್ಯಾನಿಂಗ್ ಸೆಂಟರ್‌ಗಳ ಮಾಲೀಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!