Saturday, September 26, 2026
Saturday, September 26, 2026

ಬನ್ನಾಡಿ: ಆಳುಪ ದೊರೆ ಒಂದನೇ ಕುಲಶೇಖರನ ಅಪ್ರಕಟಿತ ಶಾಸನ

ಬನ್ನಾಡಿ: ಆಳುಪ ದೊರೆ ಒಂದನೇ ಕುಲಶೇಖರನ ಅಪ್ರಕಟಿತ ಶಾಸನ

Date:

ಉಡುಪಿ: ಬ್ರಹ್ಮಾವರ ತಾಲೂಕಿನ ವಡ್ಡಾರ್ಸೆ ಪಂಚಾಯತಿ ವ್ಯಾಪ್ತಿಗೆ ಸೇರುವ ಬನ್ನಾಡಿ ಗ್ರಾಮದ ಸಂಜೀವ ಶೆಟ್ಟಿಯವರ ಕೃಷಿ ಭೂಮಿಯಲ್ಲಿನ ಶಾಸನವನ್ನು ಬಿ.ಕುಶ ಆಚಾರ್ಯ ಅವರು ಪತ್ತೆಮಾಡಿದ್ದು ಈ‌ ಶಾಸನವನ್ನು ಇತಿಹಾಸ ಮತ್ತು ಪುರಾತತ್ವ ಸಂಶೋಧನಾರ್ಥಿ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಅವರು ಓದಿ ಅರ್ಥೈಸಿರುತ್ತಾರೆ.

ಗ್ರಾನೈಟ್ (ಕಣ) ಶಿಲೆಯಲ್ಲಿ ಕೊರೆಯಲ್ಪಟ್ಟಿರುವ ಈ ಶಾಸನವು 12 ನೇ ಶತಮಾನದ ಕನ್ನಡ‌ ಲಿಪಿ‌ ಮತ್ತು ಭಾಷೆಯಲ್ಲಿದ್ದು 18 ಸಾಲುಗಳನ್ನು ಒಳಗೊಂಡಿದೆ‌. ಸುಮಾರು 5 ಅಡಿ ಎತ್ತರ 2 ಅಡಿ ಅಗಲವನ್ನು ಹೊಂದಿರುವ ಶಾಸನದ ಮೇಲ್ಭಾಗದಲ್ಲಿ ಶಿವಲಿಂಗ ಇಕ್ಕೆಲಗಳಲ್ಲಿ ಕೈ ಮುಗಿದು ನಿಂತಿರುವ ವ್ಯಕ್ತಿ ಹಾಗೂ ಎರಡು ಆಕಳುಗಳ ಉಬ್ಬು ಕೆತ್ತನೆಯನ್ನು ಮಾಡಲಾಗಿದೆ.

ಶಾಸನದ ಹೆಚ್ಚಿನ ಸಾಲುಗಳು ತೃಟಿತಗೊಂಡಿದ್ದು, ಓದಲು ಸಾಧ್ಯವಾದ ಕೆಲವು ಸಾಲುಗಳಿಂದ ಶಾಸನವು ಆಳುಪ ದೊರೆ ಒಂದನೇ ಕುಲಶೇಖರನ ಕಾಲಕ್ಕೆ ಸೇರಿದ್ದು ಎಂದು ಹೇಳಬಹುದು.‌ ಶಾಸನದಲ್ಲಿ ಶಕವರುಷ 1112 ನೆಯ ಸಾಧಾರಣ ಸಂವತ್ಸರದ ಜೇಷ್ಠ ಮಾಸ 11 ಗುರುವಾರ ಎಂಬ ಕಾಲಮಾನದ ಉಲ್ಲೇಖವಿದ್ದು ಇದು ಕ್ರಿ.ಶ 1190 ಕ್ಕೆ ತಾಳೆಯಾಗುತ್ತದೆ. ಕುಲಶೇಖರನು‌ ಮಂಗಳಾಪುರದ ಅರಮನೆಯಲ್ಲಿದ್ದು (ಮಂಗಳೂರು) ಈ‌ ಸಂದರ್ಭದಲ್ಲಿ ಬನಹಾಡಿಯ ಬಸಪ್ಪನು ದೇವರ ನಿತ್ಯ ನೈವೇದ್ಯಕ್ಕೆ ನೀಡಿದ ಭೂ ದಾನದ ವಿವರವನ್ನು‌ ಶಾಸನವು ತಿಳಿಸುತ್ತದೆ.

ಶಾಸನದಲ್ಲಿ ‌ಉಲ್ಲೇಖಗೊಂಡಂತಹ ಬನಹಾಡಿ ಎಂಬುದು ಪ್ರಸ್ತುತ ಬನ್ನಾಡಿಯ ಪ್ರಾಚೀನ‌ ಹೆಸರಾಗಿರಬಹುದೆಂದು ಸಂಶೋಧನಾರ್ಥಿಯು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕ್ಷೇತ್ರಕಾರ್ಯ ಸಂದರ್ಭದಲ್ಲಿ ಪ್ರವೀಣ್ ಡಿ ಆಚಾರ್ಯ ಸಾಲಿಗ್ರಾಮ, ಕಿಶನ್ ಕುಮಾರ್ ಮೂಡುಬೆಳ್ಳೆ ಹಾಗೂ ಸ್ಥಳೀಯರು ಸಹಕಾರ ನೀಡಿರುತ್ತಾರೆ‌.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರಂತರು ಕರ್ನಾಟಕದ ವೈಚಾರಿಕ ಪ್ರಜ್ಞೆಯ ಪ್ರತಿನಿಧಿ: ಸಚಿವ ಶಿವರಾಜ ಎಸ್ ತಂಗಡಗಿ

ಉಡುಪಿ, ಸೆ.25: ಡಾ. ಶಿವರಾಮ ಕಾರಂತರು ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ದೇಶಕ್ಕೆ...

ಮಣಿಪಾಲ ಜ್ಞಾನಸುಧಾ: ಜಿಲ್ಲಾಮಟ್ಟದ ಫುಟ್ಬಾಲ್‌ ಪಂದ್ಯಾಟ

ಮಣಿಪಾಲ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಹಾಗೂ...

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾದ ಸಮರ್ಥ್ ಕೆ.ಯು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ...

ಯುವಕರು ವಿದ್ಯಾವಂತರಾಗುವುದರ ಜೊತೆಗೆ ಹೃದಯವಂತರಾಗಬೇಕು

ತೆಂಕನಿಡಿಯೂರು, ಸೆ.25: ಇಂದಿನ ಹೊಸ ತಲೆಮಾರಿನ ಯುವಕ-ಯುವತಿಯರು ವಿದ್ಯಾವಂತರಾಗುವುದರ ಜೊತೆಗೆ ಪ್ರೀತಿ,...
error: Content is protected !!