Tuesday, February 25, 2025
Tuesday, February 25, 2025

ನುಲಿಯ ಚಂದಯ್ಯ ಜಯಂತಿ ಆಚರಣೆ

ನುಲಿಯ ಚಂದಯ್ಯ ಜಯಂತಿ ಆಚರಣೆ

Date:

ಉಡುಪಿ, ಸೆ.1: ವಚನಗಳು ಸಾಮಾನ್ಯ ಜನರ ನಾಡಿಮಿಡಿತಗಳಾಗಿ, ವೈಚಾರಿಕ ಮತ್ತು ವೈಜ್ಞಾನಿಕ ಮನೋ ಚಿಂತನೆಗೆ ತಮ್ಮ ಕಾಯಕದ ಮೂಲಕ ಮಹತ್ವವನ್ನು ನೀಡಿದವರು ಶಿವಶರಣರು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾ ಕುಮಾರಿ ಹೇಳಿದರು. ಅವರು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ, ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಶ್ರೀ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮದಲ್ಲಿ ಚಂದಯ್ಯರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

12 ನೇ ಶತಮಾನದ ಕಾಲದಲ್ಲಿ ಭಾಷೆಯಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ನಮ್ಮಲ್ಲಿರುವ ಮೂಢನಂಬಿಕೆಗಳಿಗೆ ಜೋತು ಬೀಳದೆ ಆಧುನಿಕ ಭಾರತದ ನಿರ್ಮಾಣಕ್ಕೆ ಪ್ರಾಮುಖ್ಯತೆ ನೀಡಬೇಕು. ಕಾಯಕ ನಿಷ್ಠೆಯಲ್ಲಿ ನುಲಿಯ ಚಂದಯ್ಯ ರಂತಹ ಶರಣರ ತತ್ವ ಸಿದ್ದಾಂತಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್. ಮಾತನಾಡಿ, ಕಾಯಕದಲ್ಲಿ ಕೈಲಾಸ ಕಂಡ ಮಹಾನ್ ಶರಣರು ಶ್ರೀ ನುಲಿಯ ಚಂದಯ್ಯ ನವರು. ಲಿಂಗ ನಿಷ್ಠೆಗಿಂತ ಕಾಯಕ ನಿಷ್ಠೆ ಮೇಲು ಎಂದು ಅವರು ಸಾರಿದ್ದಾರೆ. ತನು ಮನ ಧನದಿಂದ ವಚನ ಸಾಹಿತ್ಯಕ್ಕೆ ಶ್ರಮಿಸಿದ್ದಾರೆ ಎಂದರು.

ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಉಪನ್ಯಾಸಕಿ ಡಾ.ಪ್ರಜ್ಞಾ ಮಾರ್ಪಳ್ಳಿ ನುಲಿಯ ಚಂದಯ್ಯ ಅವರ ಕುರಿತು ಉಪನ್ಯಾಸ ನೀಡಿ, ಕಲೆ, ಸಾಹಿತ್ಯ, ವೈವಿಧ್ಯಮಯ ಸಂಸ್ಕೃತಿ ಹೊಂದಿರುವ ನಮ್ಮ ದೇಶ ಹಾಗೂ ರಾಜ್ಯದಲ್ಲಿ ವಿವಿಧತೆಯಲ್ಲಿ ಏಕತೆಯನ್ನು ಕಾಣುತ್ತಿದ್ದೇವೆ. ಬಸವಣ್ಣ ಸೇರಿದಂತೆ ಅನೇಕ ಶಿವಶರಣರು ಕಲ್ಯಾಣ ಕ್ರಾಂತಿಗೆ ನಾಂದಿ ಹಾಡಿದ್ದಾರೆ. ಅನುಭವ ಮಂಟಪದಲ್ಲಿದ್ದ ಶ್ರೇಷ್ಠ ಶರಣರಲ್ಲಿ ಶ್ರೀ ನುಲಿಯ ಚಂದಯ್ಯನವರು ಒಬ್ಬರು ಎಂದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕನ್ನಡ ಸಾಹಿತ್ಯ ಪರಿಷತ್ತಿನ ನರಸಿಂಹಮೂರ್ತಿ, ವಿವಿಧ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು, ಉಪನ್ಯಾಸಕ ರಾಮಾಂಜಿ ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!