ಗಂಗೊಳ್ಳಿ, ಸೆ. 2: ವಿದ್ಯಾರ್ಥಿಗಳ ಬೆಳವಣಿಗೆಯನ್ನು ಪ್ರೋತ್ಸಾಹಿಸುವುದರ ಜೊತೆಗೆ ತಾನು ಕೂಡ ಬೆಳೆಯುವುದು ಓರ್ವ ನಿಜವಾದ ಶಿಕ್ಷಕನ ಸಾಮರ್ಥ್ಯವಾಗಿರುತ್ತದೆ. ಬದುಕಿನಲ್ಲಿ ಕಲಿಕೆ ನಿರಂತರವಾಗಿರಬೇಕು ಎಂದು ಜಿ. ಎಸ್ ವಿ. ಎಸ್ ಅಸೋಸಿಯೇಷನ್ ಕಾರ್ಯದರ್ಶಿ ಎಚ್ ಗಣೇಶ್ ಕಾಮತ್ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಕಳೆದ 10 ವರ್ಷಗಳಿಗೂ ಅಧಿಕ ಕಾಲ ಸೇವೆ ಸಲ್ಲಿಸಿ ಇದೀಗ ಸರಕಾರಿ ಶಾಲಾ ಶಿಕ್ಷಕರಾಗಿ ನೇಮಕಗೊಂಡು ಬೇರೆಡೆಗೆ ತೆರಳುತ್ತಿರುವ ಭೌತಶಾಸ್ತ್ರ ಉಪನ್ಯಾಸಕ ಕೃಷ್ಣ ಗುಜ್ಜಾಡಿ ಇವರ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ ಸಿ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ನಾರಾಯಣ ಈ ನಾಯ್ಕ್, ನರೇಂದ್ರ ಎಸ್ ಗಂಗೊಳ್ಳಿ, ಪ್ರವೀಣ್ ಕಾಮತ್, ಕಚೇರಿಯ ದ್ವಿತೀಯ ದರ್ಜೆ ಸಹಾಯಕ ಶ್ರೀಧರ ಗಾಣಿಗ, ಜಿ.ಎಸ್ ವಿ.ಎಸ್ ಅಸೋಸಿಯೇಷನ್ ಸದಸ್ಯ ರಾಮನಾಥ ನಾಯಕ್ ಮೊದಲಾದವರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢಶಾಲೆಯ ಉಪ ಪ್ರಾಂಶುಪಾಲ ಉಮೇಶ್ ಕರಣಿಕ್ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್, ಜಿ ಎಸ್ ವಿ ಎಸ್ ಅಸೋಸಿಯೇಷನ್ ಸದಸ್ಯ ಅಶ್ವಿನ್ ನಾಯಕ್ ಮೊದಲಾದವರು ಉಪಸ್ಥಿತರಿದ್ದರು. ಕೃಷ್ಣ ಗುಜ್ಜಾಡಿ ಇವರನ್ನು ಸನ್ಮಾನಿಸಿ ಅಭಿನಂದಿಸಿ ಬೀಳ್ಕೊಡಲಾಯಿತು. ಉಪನ್ಯಾಸಕ ಥಾಮಸ್ ಪಿ.ಎ ಪ್ರಾಸ್ತಾವಿಕವಾಗಿ ಮಾತನಾಡಿದರು. ಭಾಸ್ಕರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಪವಿತ್ರ ವಂದಿಸಿದರು.