ಉಡುಪಿ: ಕ್ಷೇತ್ರ ಜನಸಂಪರ್ಕ ಕಾರ್ಯಾಲಯ ಮಂಗಳೂರು, ಜಿಲ್ಲಾ ಆರೋಗ್ಯ ಕಲ್ಯಾಣ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ ಕೋವಿಡ್ ಸಾರ್ವತ್ರಿಕ ಲಸೀಕಾಕರಣ ಮತ್ತು ಕೋವಿಡ್ ಸೂಕ್ತ ನಡವಳಿಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಂಚಾರಿ ವಾಹನಕ್ಕೆ, ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಪ್ರಭಾರ) ಡಾ. ರಾಮರಾವ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್, ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ, ಜಿಲ್ಲಾ ಲೆಕ್ಕಪತ್ರ ವ್ಯವಸ್ಥಾಪಕ ಗಿರೀಶ್ ಕಡ್ಡಿಪುಡಿ, ಸತೀಶ್ ರಾವ್, ಪ್ರೀತಂ, ರವಿ ಮತ್ತಿತರರು ಉಪಸ್ಥಿತರಿದ್ದರು. ಈ ಸಂಚಾರಿ ವಾಹನವು ಒಟ್ಟು 10 ದಿನಗಳ ಕಾಲ ಜಿಲ್ಲೆಯಲ್ಲಿ ಸಂಚರಿಸಲಿದ್ದು, ಸಾರ್ವಜನಿಕರಲ್ಲಿ ಅರಿವು ಮೂಡಿಸಲಿದೆ.