ಉಡುಪಿ, ಸೆ.3: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಸೆಪ್ಟಂಬರ್ 5 ಮತ್ತು 6 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 110/11 ಕೆ. ವಿ ಕಾರ್ಕಳ ಉಪವಿದ್ಯುತ್ ಸ್ಥಾವರದಿಂದ ಹೊರಡುವ 11 ಕೆ.ವಿ ಅಜೆಕಾರು ಮಾರ್ಗದ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕಡ್ತಲ, ದೊಂಡರಂಗಡಿ, ದರ್ಬುಜೆ, ಎಳ್ಳಾರೆ, ಕಾಡುಹೊಳೆ, ಗುಡ್ಡೆಯಂಗಡಿ, ಅಜೆಕಾರು ಪೇಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೆಪ್ಟಂಬರ್ 5 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
220/110/11 ಕೆ.ವಿ ಕೇಮಾರ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಫೀಡರ್‌ಗಳಾದ ನಿಟ್ಟೆ, ಕಲ್ಯಾ, ಲೆಮಿನಾ, ನಿಟ್ಟೆ ವಾಟರ್ ಸಪ್ಲೈ, ಮಿಯ್ಯಾರು, ಬಜಗೋಳಿ, ಹೊಸ್ಮಾರು 110/11ಕೆವಿ ಕಾರ್ಕಳ ಉಪಕೇಂದ್ರದಿಂದ ಹೊರಡುವ 11ಕೆವಿ ಪದವು ಫೀಡರ್ ಹಾಗೂ 110/11 ಕೆವಿ ಬೆಳ್ಮಣ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆ.ವಿ ಫೀಡರ್‌ಗಳಾದ ಮುಂಡ್ಕೂರು, ನಂದಳಿಕೆ, ಮತ್ತು ಬೆಳ್ಮಣ್ ಫೀಡರ್ ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸದರಿ ಫೀಡರ್‌ಗಳಲ್ಲಿ ನಿಟ್ಟೆ, ನಿಟ್ಟೆ ಕಾಲೇಜು, ನಿಟ್ಟೆ ವಾಟರ್ ಸಫ್ಲೈ, ಬೊರ್ಗಲ್ ಗುಡ್ಡೆ, ಹಾಮಾಜೆ, ಕುಂಟಾಡಿ, ಕೈರಬೆಟ್ಟು, ನಿಟ್ಟೆ ಪಂಚಾಯತ್, ನಿಟ್ಟೆ ಮಸೀದಿ, ಲೆಮಿನಾ ಇಂಡಸ್ಟ್ರಿಸ್, ದೂಪದಕಟ್ಟೆ, ಕೆಮ್ಮಣ್ಣು, ನೆಲ್ಲಿಗುಡ್ಡೆ, ಬಾರಾಡಿ, ಬೇಲಾಡಿ, ಕಾಂತಾವರ, ಕಲ್ಯಾ, ಬೆಳ್ಮಣ್, ಬೆಳ್ಮಣ್ ದೇವಸ್ಥಾನ, ಗೋಳಿಕಟ್ಟೆ, ನಂದಳಿಕೆ, ಜಂತ್ರ, ನೀಚಾಲು, ಕೆದಿಂಜೆ, ಅಂಬರಾಡಿ, ಪಿಲಿಯೂರು, ಕೆರೆಕೋಡಿ, ಒಂಜಾರೆ ಕಟ್ಟೆ, ಬಾರೆಬೈಲು, ಪುಕ್ಕಲ್ಲು, ಕೆಂಪುಜೋರ, ಬಜಗೋಳಿ, ಮಿಯ್ಯಾರು, ಕುಂಟಿಬೈಲು, ರೆಂಜಾಳ, ರಾಮೇರಗುತ್ತು, ಬೋರ್ಕಟ್ಟೆ, ಕಲತ್ರಪಾದೆ, ಮುಡಾರು, ಮಾಳ, ನಲ್ಲೂರು, ಹುಕ್ರಟ್ಟೆ, ಹೊಸ್ಮಾರು, ಈದು, ನೆಲ್ಲಿಕಾರು, ನೂರಾಳ್ ಬೆಟ್ಟು, ಮಾವಿನಕಟ್ಟೆ, ದೇಂದೊಟ್ಟು ಪದವು, ಇಟ್ಟಮೇರಿ, ಕೊರಜೆ, ಮುಂಡ್ಕೂರು, ಕಾಂಜರಕಟ್ಟೆ, ಸಚ್ಚರಿಪೇಟೆ, ಮುಲ್ಲಡ್ಕ, ಕೋಡಿಮಾರು, ಸಂಕಲಕರಿಯ, ನಾನಿಲ್ ತಾರ್, ಜಾರಿಗೆಕಟ್ಟೆ, ಗುಂಡ್ಯಡ್ಕ, ಕಲ್ಲಂಬಾಡಿ, ಪದವು, ಪರಪ್ಪಾಡಿ, ಲೆಮಿನಾ ಕ್ರಾಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೆ. 5 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
110/11 ಕೆ.ವಿ ಹಾಲಾಡಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಆವರ್ಸೆ, ಬಿದ್ಕಲ್ಕಟ್ಟೆ, ಬೈಲೂರು, ಬೆಳ್ವೆ, ಹೈಕಾಡಿ ಮತ್ತು ಕೆ.ಎನ್.ಎನ್.ಎಲ್ ಹಾಲಾಡಿ ಮಾರ್ಗಗಳಲ್ಲಿ ಪಾಲನಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕುಳುಂಜೆ, ಶಂಕರನಾರಾಯಣ, ಬಿದ್ಕಲ್ಕಟ್ಟೆ, ಹಾಲಾಡಿ, ಮೊಳಹಳ್ಳಿ, ಹಾರ್ದಳ್ಳಿ-ಮಂಡಳ್ಳಿ, ಕಕ್ಕುಂಜೆ, ಯಡಾಡಿ-ಮತ್ಯಾಡಿ, ಹೆಸ್ಕತ್ತೂರು, ಮಚ್ಚಟ್ಟು, ಅಮಾಸೆಬೈಲು, ಹಳ್ಳಾಡಿ-ಹರ್ಕಾಡಿ, ಅಲ್ಬಾಡಿ, ಆರ್ಡಿ, ಶೇಡಿಮನೆ, ಹೈಕಾಡಿ, ಗೋಳಿಯಂಗಡಿ, ಬೆಳ್ವೆ, ಹೆಂಗವಳ್ಳಿ, ಸೂರ್ಗೋಳಿ, ಬೈಲೂರು, ಕಾಜಾಡಿ ಮತ್ತು ಕೊಂಡಳ್ಳಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೆ. 5 ರಂದು ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ. 110/33/11 ಕೆ.ವಿ ಮಣಿಪಾಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಪ್ರಗತಿನಗರ, ಮೂಡುಬೆಳ್ಳೆ, ಕೆ.ಎಂ.ಎಫ್ ಫೀಡರಿನಲ್ಲಿ ಹಾಗೂ 110/33/11 ಕೆ.ವಿ ಹಿರಿಯಡ್ಕ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಪೆರ್ಡೂರು ಫೀಡರಿನಲ್ಲಿ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಪ್ರಗತಿನಗರ, ಶಾಂತಿನಗರ, ರಾಜೀವನಗರ, 80 ಬಡಗುಬೆಟ್ಟು, ಮಣಿಪುರ, ಮೂಡುಬೆಳ್ಳೆ, ಮರ್ಣೆ, ಕಟ್ಟಿಂಗೇರಿ, ಕೆಮ್ತೂರು, ಈಶ್ವರನಗರ, ಸರಳೇಬೆಟ್ಟು, ಗಣೇಶ್ ಭಾಗ್, ಪುತ್ತಿಗೆ, ಪಕ್ಕಾಲು, ಪೆರ್ಡೂರು ಪೇಟೆ, ಮುತ್ತೂರ್ಮೆ, ಕುಕ್ಕೆಹಳ್ಳಿ, ಪಾಡಿಗಾರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೆ. 5 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
110/11 ಕೆವಿ ಬ್ರಹ್ಮಾವರ ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಮಟಪಾಡಿ, ಹೊನ್ನಾಳ ಫೀಡರ್ ಮಾರ್ಗದಲ್ಲಿ ಹಾಗೂ 220/110/11ಕೆವಿ ಹೆಗ್ಗುಂಜೆ ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಹೊರಡುವ 11ಕೆವಿ ಹೆಗ್ಗುಂಜೆ ಫೀಡರ್ ಮಾರ್ಗದಲ್ಲಿ ಮತ್ತು 110/11ಕೆವಿ ನಿಟ್ಟೂರು ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಶಾಂತಿವನ ಫೀಡರ್ ಮಾರ್ಗದಲ್ಲಿ ಟ್ರೀ ಕಟ್ಟಿಂಗ್, ವಾಹಕ ಬದಲಾವಣೆ, ಜಿ.ಓ.ಎಸ್ ನಿರ್ವಹಣೆ, ಹೆಚ್.ಟಿ ಮಾರ್ಗ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಟಪಾಡಿ, ಕೊಳಂಬೆ, ಆದರ್ಶನಗರ, ಕೀರ್ತಿನಗರ, ಸಾಲಿಕೇರಿ, ಬಿರ್ತಿ, ಹೊನ್ನಾಳ, ಕುಕ್ಕುಡೆ, ಗೋಪಾಲಪುರ, ಶಾಂತಿವನ, ಗರಡಿಮಜಲು, ಕಾಡೂರು, ಮೊಗವೀರ ಪೇಟೆ, ಕೊಕ್ಕರ್ಣೆ, ಕೆಂಜೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೆ. 5 ರಂದು ಬೆಳಗ್ಗೆ 9.30 ರಿಂದ ಸಂಜೆ 5.30 ರ ವ ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ. 110/11ಕೆವಿ ಬ್ರಹ್ಮಾವರ ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಮಾಬುಕಳ ಫೀಡರ್ ಮಾರ್ಗದಲ್ಲಿ ಹಾಗೂ 220/110/11ಕೆವಿ ಹೆಗ್ಗುಂಜೆ ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಹೊರಡುವ 11ಕೆವಿ ನಂಚಾರು ಫೀಡರ್ ಮಾರ್ಗದಲ್ಲಿ ಹೆಚ್.ಟಿ ಮಾರ್ಗ ನಿರ್ವಹಣೆ ಮತ್ತು ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕುಮ್ರಗೋಡು, ಉಪ್ಪಿನಕೋಟೆ, ಬಾಳ್ತಾರು, ಸೂಲ್ಕುದ್ರು, ಶಿರೂರು, ಹಿಲಿಯಾಣ, ನಂಚಾರು, ಮುದ್ದೂರು, ಕಜ್ಕೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೆ. 6 ರಂದು ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆವ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.