Thursday, January 23, 2025
Thursday, January 23, 2025

ಸೆ. 12: ಕಾರ್ಕಳ ಹಾಗೂ ಹೆಬ್ರಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಸೆ. 12: ಕಾರ್ಕಳ ಹಾಗೂ ಹೆಬ್ರಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

Date:

ಉಡುಪಿ, ಸೆ.4: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಸಕ್ತ ಸಾಲಿನಲ್ಲಿ ಕಾರ್ಕಳ ಹಾಗೂ ಹೆಬ್ರಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಸೆಪ್ಟಂಬರ್ 12 ರಂದು ಕಾರ್ಕಳ ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದ್ದು, ಭಾಗವಹಿಸುವ ಸ್ಪರ್ಧಿಗಳು ಬೆಳಗ್ಗೆ 9 ಗಂಟೆಯ ಒಳಗಾಗಿ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬಹುದಾಗಿದೆ.

ಸ್ಪರ್ಧೆಗಳ ವಿವರ: ಪುರುಷ ಹಾಗೂ ಮಹಿಳೆಯರಿಗೆ ಅಥ್ಲೆಟಿಕ್ಸ್ ಸ್ಫರ್ಧೆಗಳು, ಪುರುಷರಿಗೆ ಗುಂಪು ಆಟಗಳಾದ ವಾಲಿಬಾಲ್, ಖೋ-ಖೋ, ಕಬಡ್ಡಿ, ಫುಟ್‌ಬಾಲ್, ಥ್ರೋಬಾಲ್, ಯೋಗ ಹಾಗೂ ಮಹಿಳೆಯರಿಗೆ ವಾಲಿಬಾಲ್, ಖೋ-ಖೋ, ಕಬಡ್ಡಿ, ಥ್ರೋಬಾಲ್ ಹಾಗೂ ಯೋಗ ಸ್ಪರ್ಧೆಗಳು ನಡೆಯಲಿದೆ. ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಹಾಗೂ ಗುಂಪು ಕ್ರೀಡೆಯಲ್ಲಿ ಪ್ರಥಮ ಸ್ಥಾನ ಪಡೆದ ತಂಡವು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆಯುತ್ತಾರೆ. ಕ್ರೀಡಾಕೂಟಕ್ಕೆ ಹೆಸರು ಹಾಗೂ ತಂಡಗಳನ್ನು ನೋಂದಾಯಿಸಲು ಸೆಪ್ಟಂಬರ್ 9 ಕೊನೆಯ ದಿನವಾಗಿದ್ದು, ಕ್ರೀಡಾಕೂಟ ನಡೆಯುವ ದಿನದಂದು ನೋಂದಾವಣೆಗೆ ಅವಕಾಶ ಇರುವುದಿಲ್ಲ. ಸೆ. 10 ರಂದು ಕಾರ್ಕಳದ ಸ್ವರಾಜ್ ಮೈದಾನದಲ್ಲಿ ಫುಟ್‌ಬಾಲ್ ಪಂದ್ಯಾಟ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಕಳ ತಾಲೂಕು ಯುವಜನ ಸೇವಾ ಕ್ರೀಡಾಧಿಕಾರಿ ಮೊ.ನಂ: 9008857495 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಕಾರ್ಯಾಗಾರ

ಉಡುಪಿ, ಜ.23: ಪ್ರವಾಸೋದ್ಯಮ ಇಲಾಖೆ ವತಿಯಿಂದ ರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ...

ಪುಷ್ಪಾನಂದ ಫೌಂಡೇಶನ್ ವತಿಯಿಂದ ರೂ.25 ಲಕ್ಷ ಪ್ರತಿಭಾ ಪುರಸ್ಕಾರ ವಿತರಣೆ: ಶಾಸಕ ಯಶ್ಪಾಲ್ ಸುವರ್ಣ

ಉಡುಪಿ, ಜ.23: ಪುಷ್ಪಾನಂದ ಫೌಂಡೇಶನ್ ವತಿಯಿಂದ ಉಡುಪಿ ವಿಧಾನಸಭಾ ಕ್ಷೇತ್ರದ 2023-24ನೇ...

ಸಾಲಿಗ್ರಾಮ: ಅಯೋಧ್ಯಾ ಶ್ರೀರಾಮ ಪ್ರಾಣ ಪ್ರತಿಷ್ಠೆ ವರ್ಷಾಚರಣೆ

ಸಾಲಿಗ್ರಾಮ, ಜ.23: ವಾಹನ ಚಾಲಕ ಮಾಲಕರ ಸಂಘದ ವತಿಯಿಂದ ಅಯೋಧ್ಯಾಪತಿ ಶ್ರೀರಾಮ...

ಸಾಸ್ತಾನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಲಕರಣೆಗಳ ಹಸ್ತಾಂತರ

ಕೋಟ, ಜ.23: ಇಲ್ಲಿನ ಸಾಸ್ತಾನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅಬಾಟ್ ಪ್ರಾಯೋಜಕತ್ವದ...
error: Content is protected !!