Thursday, January 23, 2025
Thursday, January 23, 2025

ಉದಯನಿಧಿ ಹೇಳಿಕೆ ಮೂಲಕ ಐ.ಎನ್.ಡಿ.ಐ.ಎ ವಿಪಕ್ಷಗಳ ಒಕ್ಕೂಟದ ಹಿಂದೂ ವಿರೋಧಿ ನಿಲುವು ಬಹಿರಂಗ: ಯಶ್ಪಾಲ್ ಸುವರ್ಣ

ಉದಯನಿಧಿ ಹೇಳಿಕೆ ಮೂಲಕ ಐ.ಎನ್.ಡಿ.ಐ.ಎ ವಿಪಕ್ಷಗಳ ಒಕ್ಕೂಟದ ಹಿಂದೂ ವಿರೋಧಿ ನಿಲುವು ಬಹಿರಂಗ: ಯಶ್ಪಾಲ್ ಸುವರ್ಣ

Date:

ಉಡುಪಿ, ಸೆ. 5: ತಮಿಳುನಾಡು ಮುಖ್ಯಮಂತ್ರಿಯ ಪುತ್ರ, ಸಚಿವ ಉದಯನಿಧಿ ಸ್ಟಾಲಿನ್ ಭಾರತದ ಸಾಮಾಜಿಕ ವ್ಯವಸ್ಥೆಯ ಹೆಮ್ಮೆಯ ಪ್ರತೀಕವಾದ ಸನಾತನ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಸಮಸ್ತ ಹಿಂದೂ ಸಮಾಜಕ್ಕೆ ಅವಮಾನಿಸುವ ಮೂಲಕ ಐ.ಎನ್.ಡಿ.ಐ.ಎ ವಿಪಕ್ಷಗಳ ಒಕ್ಕೂಟದ ಹಿಂದೂ ವಿರೋಧಿ ನಿಲುವು ಬಹಿರಂಗವಾಗಿದೆ. ತನ್ನ ಓಟ್ ಬ್ಯಾಂಕ್ ರಾಜಕೀಯಕ್ಕಾಗಿ ನಿರ್ದಿಷ್ಟ ಸಮುದಾಯದ ಓಲೈಕೆಗಾಗಿ ಹಿಂದೂ ದ್ವೇಷಿ ಹೇಳಿಕೆಯ ಮೂಲಕ ಸನಾತನ ಧರ್ಮ ಅಪಮಾನಿಸಲು ಮುಂದಾಗಿದ್ದಾರೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ಬ್ರಿಟಿಷರು, ಮುಸ್ಲಿಂ ಮತಾಂಧ ರಾಜರು ಮತಾಂತರ, ದಬ್ಬಾಳಿಕೆಯ ಮೂಲಕ ಸನಾತನ ಧರ್ಮದ ನಿರ್ಮೂಲನೆಗೆ ವಿಫಲ ಪ್ರಯತ್ನಕ್ಕೆ ಮುಂದಾಗಿದ್ದರು. ಇದೀಗ ಅದೇ ಮನಸ್ಥಿತಿಯಲ್ಲಿ ಉದಯನಿಧಿ ಈ ಹೇಳಿಕೆಯ ಮೂಲಕ ಮಹಮ್ಮದ್ ಘೋರಿ, ಘಜನಿ ವಂಶದ ಪರಂಪರೆಯನ್ನು ಮುಂದುವರಿಸುವ ಕಾಯಕದಲ್ಲಿ ತೊಡಗಿದ್ದಾರೆ.

ಸನಾತನ ಧರ್ಮ ಕೇವಲ ಒಂದು ಧರ್ಮವಾಗಿರದೇ ಭಾರತದ ಜನರ ಜೀವನ ಪದ್ಧತಿಯಾಗಿದ್ದು, ಕೇವಲ ಅಲ್ಪಸಂಖ್ಯಾತ ಓಲೈಕೆ, ಕ್ರೈಸ್ತ ಮತಾಂತರ ಸಂಸ್ಥೆಗಳ ಹಿಡನ್ ಅಜೆಂಡಾದ ಟೂಲ್ ಕಿಟ್ ಭಾಗವಾಗಿ ಉದಯನಿಧಿ ಬಹುಸಂಖ್ಯಾತ ಹಿಂದೂ ದ್ವೇಷಿ ನಿಲುವು ತಾಳಿ ಓರ್ವ ಜವಾಬ್ದಾರಿ ಸಚಿವನಾಗಿ ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿದ್ದಾರೆ.

ಉದಯನಿಧಿ ಹೇಳಿಕೆಗೆ ಐ.ಎನ್.ಡಿ.ಐ.ಎ ಒಕ್ಕೂಟದ ಕಾಂಗ್ರೆಸ್ ಸಹಿತ ವಿವಿಧ ಪಕ್ಷಗಳು ದಿವ್ಯ ಮೌನ ತಾಳುವ ಮೂಲಕ ಪರೋಕ್ಷವಾಗಿ ತಮ್ಮ ಸಹಮತ ಸೂಚಿಸಿ ಹಿಂದೂ ವಿರೋಧಿ ಹೇಳಿಕೆಗೆ ಸಮ್ಮತಿ ಸೂಚಿಸಿದೆ. ವಿಪಕ್ಷ ನಾಯಕರು ತಮ್ಮ ನಿಲುವನ್ನು ಕೂಡಲೇ ಸ್ಪಷ್ಟಪಡಿಸಬೇಕು. ತಮಿಳುನಾಡು ಸರ್ಕಾರ ಹಿಂದೂ ವಿರೋಧಿ ಹೇಳಿಕೆ ನೀಡಿದ ಉದಯನಿಧಿಯನ್ನು ಕೂಡಲೇ ಮಂತ್ರಿ ಸ್ಥಾನದಿಂದ ವಜಾಗೊಳಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಮುಂದಿನ ದಿನಗಳಲ್ಲಿ ಜನತೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಶಾಸಕ ಯಶ್ಪಾಲ್ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಂಜೀವಿನಿ ಸ್ವ ಸಹಾಯ ಗುಂಪುಗಳ ಆರ್ಥಿಕ ಸೇರ್ಪಡೆಗಾಗಿ ಬ್ಯಾಂಕರ್ಸ್ ಕಾರ್ಯಾಗಾರ

ಮಣಿಪಾಲ, ಜ.22: ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ ಬ್ಯಾಂಕ್ ಸೌಲಭ್ಯಗಳನ್ನು ಒದಗಿಸುವುದರಿಂದ...

ರಾಜ್ಯದಲ್ಲಿ ಗೋವುಗಳ ಮೇಲೆ ಆಕ್ರಮಣ- ಜ.25 ರಂದು ಉಪವಾಸಕ್ಕೆ ಪೇಜಾವರ ಶ್ರೀ ಕರೆ

ಉಡುಪಿ, ಜ.22: ರಾಜ್ಯದಲ್ಲಿ ಗೋವುಗಳ ಮೇಲೆ ಸರಣಿ ಹಿಂಸೆಗಳು ನಡೆಯುತ್ತಿದ್ದು ಗೋವುಗಳ...

ಕೆಎಂಸಿ ಮಣಿಪಾಲಕ್ಕೆ ಪ್ರತಿಷ್ಠಿತ ಸ್ಪಾರ್ಕ್ ಅನುದಾನ

ಮಣಿಪಾಲ, ಜ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ನೇತ್ರಶಾಸ್ತ್ರ ವಿಭಾಗದ...

ಮಲ್ಪೆ: ಸಿರಿಧಾನ್ಯ ರೋಡ್ ಶೋ

ಉಡುಪಿ, ಜ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಉಡುಪಿ...
error: Content is protected !!