Thursday, January 23, 2025
Thursday, January 23, 2025

ಸೌಲಭ್ಯಗಳನ್ನು ಸರ್ಕಾರ ಕಲ್ಪಿಸುವವರೆಗೂ ಪೊಲೀಸರು ತೃತೀಯ ಲಿಂಗಿಗಳ ವಿರುದ್ಧ ಕ್ರಮ ಕೈಗೊಳ್ಳಬಾರದು: ಮಂಜಮ್ಮ ಜೋಗತಿ

ಸೌಲಭ್ಯಗಳನ್ನು ಸರ್ಕಾರ ಕಲ್ಪಿಸುವವರೆಗೂ ಪೊಲೀಸರು ತೃತೀಯ ಲಿಂಗಿಗಳ ವಿರುದ್ಧ ಕ್ರಮ ಕೈಗೊಳ್ಳಬಾರದು: ಮಂಜಮ್ಮ ಜೋಗತಿ

Date:

ಉಡುಪಿ, ಸೆ. 5: ತೃತೀಯ ಲಿಂಗಿಗಳಿಗೆ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ ಅಗತ್ಯ. ಸೂಕ್ತ ಅವಕಾಶಗಳು ಸಿಗದಿದ್ದರೆ ಅವರ ಪ್ರತ್ಯೇಕತೆ ಹೀಗೆ ಮುಂದುವರಿಯುತ್ತದೆ. ಈ ಸೌಲಭ್ಯಗಳನ್ನು ಸರ್ಕಾರ ಕಲ್ಪಿಸುವವರೆಗೂ ಪೊಲೀಸರು ತೃತೀಯ ಲಿಂಗಿಗಳ ವಿರುದ್ಧ ಕ್ರಮ ಕೈಗೊಳ್ಳಬಾರದು ಎಂದು ಪದ್ಮಶ್ರೀ ಪುರಸ್ಕೃತ ಮಂಜಮ್ಮ ಜೋಗತಿ ಅಭಿಪ್ರಾಯಪಟ್ಟಿದ್ದಾರೆ. ಅಜ್ಜರಕಾಡಿನ ಜಿಲ್ಲಾ ಗ್ರಂಥಾಲಯದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ, ಜಿಲ್ಲಾ ಗ್ರಂಥಾಲಯ ಮತ್ತು ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಆಶ್ರಯದಲ್ಲಿ ನಡೆದ ಸಂವಾದದಲ್ಲಿ ಅವರು ಮಾತನಾಡಿದರು.

ತೃತೀಯ ಲಿಂಗಿಗಳು ಅನಿವಾರ್ಯ ಪರಿಸ್ಥಿತಿಯಲ್ಲಿ ಬೇಡುವ ಕಾಯಕ ಹಾಗೂ ಲೈಂಗಿಕ ಕಾರ್ಯಕರ್ತರಾಗಿದ್ದಾರೆ. ಹೀಗಾಗಿ ಅವರ ಅನ್ನವನ್ನು ಅವರೇ ಗಳಿಸುವಂತೆ ಮಾಡುವುದು ಸಮಾಜದ ಜವಾಬ್ದಾರಿ. ಇತ್ತೀಚಿನ ದಿನಗಳಲ್ಲಿ ತೃತೀಯ ಲಿಂಗಿಗಳ ಬಗ್ಗೆ ಸಮಾಜದ ಧೋರಣೆ ನಿಧಾನಕ್ಕೆ ಬದಲಾಗುತ್ತಿದ್ದು, ಬೆಂಗಳೂರಿನ ಐಟಿಬಿಟಿ ಕಂಪೆನಿಗಳಲ್ಲೂ ಕೆಲವರು ಉದ್ಯೋಗ ಪಡೆದಿದ್ದಾರೆ ಎಂದರು.

ಯಕ್ಷಗಾನ ಅಕಾಡೆಮಿ ಮಾಜಿ ಅಧ್ಯಕ್ಷ ಪ್ರೊ. ಎಂ.ಎಲ್​ ಸಾಮಗ, ಕಲಾವಿದ ಡಾ. ಸುರೇಶ್​ ಶೆಣೈ, ಕವಯತ್ರಿ ಜ್ಯೋತಿ ಮಹಾದೇವ್​, ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಉಪನ್ಯಾಸಕಿ ಡಾ. ಪ್ರಜ್ಞಾ ಮಾರ್ಪಳ್ಳಿ ಸಂವಾದ ನಡೆಸಿಕೊಟ್ಟರು. ಗ್ರಂಥಾಲಯ ಮುಖ್ಯ ಗ್ರಂಥಾಧಿಕಾರಿ ಜಯಶ್ರೀ, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ಉಡುಪಿ ವಿಶ್ವನಾಥ್​ ಶೆಣೈ, ಅಧ್ಯಕ್ಷ ಪ್ರೊ. ಶಂಕರ್​, ತುಳುಕುಟದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಗಾಂಧಿ ಆಸ್ಪತ್ರೆಯ ನಿರ್ದೇಶಕ ಡಾ. ಹರೀಶ್ಚಂದ್ರ, ಕಸಾಪ ಕಾಪು ತಾಲೂಕು ಅಧ್ಯಕ್ಷ ಪುಂಡಲೀಕ ಮರಾಠೆ, ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್​ ಎಚ್​.ಪಿ., ಉಪಸ್ಥಿತರಿದ್ದರು.

ಕಸಾಪ ಉಡುಪಿ ತಾಲೂಕು ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು ಸ್ವಾಗತಿಸಿ, ಸಂವಾದವನ್ನು ಅವಿನಾಶ್ ಕಾಮತ್ ನಿರೂಪಿಸಿದರು. ಶಿಲ್ಪಾ ಜೋಶಿ ಕಾರ್ಯಕ್ರಮ ನಿರೂಪಿಸಿದರು. ಸಂಧ್ಯಾ ಶೆಣೈ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಂಜೀವಿನಿ ಸ್ವ ಸಹಾಯ ಗುಂಪುಗಳ ಆರ್ಥಿಕ ಸೇರ್ಪಡೆಗಾಗಿ ಬ್ಯಾಂಕರ್ಸ್ ಕಾರ್ಯಾಗಾರ

ಮಣಿಪಾಲ, ಜ.22: ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ ಬ್ಯಾಂಕ್ ಸೌಲಭ್ಯಗಳನ್ನು ಒದಗಿಸುವುದರಿಂದ...

ರಾಜ್ಯದಲ್ಲಿ ಗೋವುಗಳ ಮೇಲೆ ಆಕ್ರಮಣ- ಜ.25 ರಂದು ಉಪವಾಸಕ್ಕೆ ಪೇಜಾವರ ಶ್ರೀ ಕರೆ

ಉಡುಪಿ, ಜ.22: ರಾಜ್ಯದಲ್ಲಿ ಗೋವುಗಳ ಮೇಲೆ ಸರಣಿ ಹಿಂಸೆಗಳು ನಡೆಯುತ್ತಿದ್ದು ಗೋವುಗಳ...

ಕೆಎಂಸಿ ಮಣಿಪಾಲಕ್ಕೆ ಪ್ರತಿಷ್ಠಿತ ಸ್ಪಾರ್ಕ್ ಅನುದಾನ

ಮಣಿಪಾಲ, ಜ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ನೇತ್ರಶಾಸ್ತ್ರ ವಿಭಾಗದ...

ಮಲ್ಪೆ: ಸಿರಿಧಾನ್ಯ ರೋಡ್ ಶೋ

ಉಡುಪಿ, ಜ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಉಡುಪಿ...
error: Content is protected !!