Monday, November 25, 2024
Monday, November 25, 2024

ದೈಹಿಕ ಮತ್ತು ಮಾನಸಿಕ ಆರೋಗ್ಯ ಬಹುಮುಖ್ಯ: ಡಾ. ಅಪೇಕ್ಷಾ ರಾವ್

ದೈಹಿಕ ಮತ್ತು ಮಾನಸಿಕ ಆರೋಗ್ಯ ಬಹುಮುಖ್ಯ: ಡಾ. ಅಪೇಕ್ಷಾ ರಾವ್

Date:

ಉಡುಪಿ, ಸೆ. 5: ಹದಿಹರೆಯ ಒಬ್ಬ ವ್ಯಕ್ತಿಯ ಜೀವನದ ಸಂಕ್ರಮಣ ಕಾಲ. ಈ ಸಂದರ್ಭದಲ್ಲಿ ಜೀವಜಗತ್ತಿನ ಎಲ್ಲ ಜೀವಿಗಳಲ್ಲಿ ಆಗುವಂತೆ ಮನುಷ್ಯನಲ್ಲಿಯೂ ಕೂಡ ಪ್ರಾಕೃತಿಕ ಬದಲಾವಣೆಗಳು ಆಗುವುದು ಸಹಜ. ಈ ವಿಷಯದಲ್ಲಿ ಕೀಳರಿಮೆ, ಸಂಕೋಚ, ಮುಜುಗರ ಪಡುವ ಅಗತ್ಯ ಇಲ್ಲ. ಈ ಬದಲಾವಣೆಯನ್ನು ಸಹಜ ಎಂಬಂತೆ ತಿಳಿದು ದೈಹಿಕ, ಮಾನಸಿಕ ಆರೋಗ್ಯ ಮತ್ತು ಸ್ವಚ್ಛತೆಯ ಕಡೆಗೆ ಗಮನ ಹರಿಸಿದರೆ ಸಾಕು ಎಂದು ಡಾ. ಅಪೇಕ್ಷಾ ಡಿ ರಾವ್ ಅಭಿಪ್ರಾಯಪಟ್ಟರು.

ಅವರು ಉಡುಪಿ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ನಡೆದ ಹದಿಹರೆಯದ ಸಮಸ್ಯೆಗಳು ಕುರಿತು ಉಡುಪಿ ಲಯನ್ಸ್ ಕ್ಲಬ್ ಪ್ರಾಯೋಜಕತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಗೀತಾ ಎಮ್ ರಾವ್ ಮಾತನಾಡಿ, ವಿದ್ಯಾರ್ಥಿನಿಯರು ಭಯಪಡದೆ ಹದಿಹರೆಯದ ಸಮಸ್ಯೆಗಳನ್ನು ಎದುರಿಸಬೇಕೆಂದು ಕರೆ ನೀಡಿದರು.

ಸಂಸ್ಥೆಯಲ್ಲಿ ದೀರ್ಘಕಾಲ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ ರಾಮಕೃಷ್ಣ ನಾಯಕ್ ರವರನ್ನು ಸನ್ಮಾನಿಸಲಾಯಿತು. ಲಯನ್ಸ್ ಕ್ಲಬ್ ಕೋಶಾಧಿಕಾರಿ ಶೈಲಿ ನಾಯಕ್, ನಿಕಟಪೂರ್ವ ಅಧ್ಯಕ್ಷರಾದ ಉಮೇಶ್ ನಾಯಕ್, ಕಾರ್ಯಕ್ರಮ ಅಧಿಕಾರಿ ವಾದಿರಾಜ ರಾವ್, ಮುಖ್ಯ ಶಿಕ್ಷಕರು ಹಾಗೂ ಸಂಸ್ಥೆಯ ಎಲ್ಲಾ ಶಿಕ್ಷಕರೂ ಪಾಲ್ಗೊಂಡಿದ್ದರು. ಮುಖ್ಯ ಶಿಕ್ಷಕಿ ಇಂದಿರಾ ಸ್ವಾಗತಿಸಿ, ಜ್ಯೋತಿ ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...

ತುಳು ಭಾವಗೀತೆ ಸ್ಪರ್ಧೆ

ಉಡುಪಿ, ನ.24: ತುಳುಕೂಟ ಉಡುಪಿ (ರಿ,) ವತಿಯಿಂದ ದಿ. ನಿಟ್ಟೂರು ಸಂಜೀವ...
error: Content is protected !!