Tuesday, November 26, 2024
Tuesday, November 26, 2024

ತಂದೆ, ತಾಯಿ, ಗುರುಗಳೇ ತ್ರಿಮೂರ್ತಿಗಳು: ಕುದಿ ವಸಂತ ಶೆಟ್ಟಿ ಅಭಿಮತ

ತಂದೆ, ತಾಯಿ, ಗುರುಗಳೇ ತ್ರಿಮೂರ್ತಿಗಳು: ಕುದಿ ವಸಂತ ಶೆಟ್ಟಿ ಅಭಿಮತ

Date:

ಉಡುಪಿ, ಸೆ. 6: ಲೌಕಿಕ ಜೀವನದಲ್ಲಿ ತಂದೆ, ತಾಯಿ, ಗುರುಗಳೇ ತ್ರಿಮೂರ್ತಿಗಳು. ದೇವರ ಸ್ಥಾನದಲ್ಲಿರುವ ಅವರನ್ನು ಸದಾ ಗೌರವಿಸಬೇಕು. ಅವರ ಪಾದಸ್ಪರ್ಶದಿಂದ ಪಡೆದ ಆಶೀರ್ವಾದ ನಮ್ಮಲ್ಲಿ ಸಕಾರಾತ್ಮಕ ಗುಣಗಳು ಬೆಳೆಯುವಂತೆ ಮಾಡುತ್ತದೆ. ತಾಯಿಯ ತ್ಯಾಗ ಕಾಣುವುದು ಆದರೆ ತಂದೆ ಎಲೆ ಮರೆಯ ಕಾಯಿಯಂತೆ ಮಗುವಿನ ಏಳಿಗೆಗೆ ದುಡಿಯುವ ಜೀವ. ಆ ಜೀವಕ್ಕೆ ನೋವಾಗದಂತೆ ನೋಡಿಕೊಳ್ಳಬೇಕು. ಅವರಿಗೆ ಸರಿಸಮನಾದ ವ್ಯಕ್ತಿಗಳಿಲ್ಲ ಎಂದು ಹೆತ್ತವರ ಪ್ರಾಮುಖ್ಯತೆಯ ಬಗ್ಗೆ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ವಿಷ್ಣುಮೂರ್ತಿ ಪ್ರೌಢಶಾಲೆ ಕುದಿ ಇಲ್ಲಿಯ ನಿವೃತ್ತ ಮುಖ್ಯೋಪಾಧ್ಯಾಯರಾದ ಕುದಿ ವಸಂತ ಶೆಟ್ಟಿ ಅಭಿಪ್ರಾಯಪಟ್ಟರು. ಉಡುಪಿ ಜ್ಞಾನಸುಧಾ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಮಾರಂಭದಲ್ಲಿ ಮುಖ್ಯ ಅಭ್ಯಾಗತರಾಗಿ, ಸನ್ಮಾನವನ್ನು ಸ್ವೀಕರಿಸಿ, ಸ್ಥಳೀಯ ಮೂವರು ಶಿಕ್ಷಕರನ್ನು ಸನ್ಮಾನಿಸಿ ಅವರು ಮಾತನಾಡಿದರು.

ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಹಾಗು ಉಡುಪಿ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಒಳಕಾಡು ಇಲ್ಲಿನ ನಿವೃತ್ತ ಮುಖ್ಯೋಪಾಧ್ಯಾಯಿನಿ ಪದ್ಮಾವತಿ, ಕಮಲಾಬಾಯಿ ಪ್ರೌಢಶಾಲೆ ಕಡಿಯಾಳಿ ಇಲ್ಲಿನ ನಿವೃತ್ತ ಮುಖ್ಯೋಪಾಧ್ಯಾಯರಾದ ಎನ್.ಎಮ್.ಪೂಜಾರಿ, ಬೋರ್ಡ್ ಹೈಸ್ಕೂಲ್ ಇಲ್ಲಿಯ ನಿವೃತ್ತ ಮುಖ್ಯೋಪಾಧ್ಯಾಯಿನಿ ಭಾರತಿ ಇವರನ್ನು ಗೌರವಿಸಲಾಯಿತು. ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಹಾಗೂ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡುತ್ತಾ, ಶಿಕ್ಷಕ ಸಮುದಾಯವನ್ನು ಮನದಲ್ಲಿರಿಸಿ ಸಾಂಕೇತಿಕವಾಗಿ ಮೂವರು ಶಿಕ್ಷಕರನ್ನು ಗುರುತಿಸುತ್ತಿದ್ದೇವೆ. ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಮುಖೇನ ಗುರುಗಳಿಗೆ ಕೊಡಮಾಡುವ ಗೌರವವನ್ನು ಅರಿಯಬೇಕು. ಪ್ರತಿಯೊಬ್ಬರ ಉಸಿರಿಗೆ ಉಸಿರು ಕೊಟ್ಟಂತಹ ಗುರುಗಳನ್ನು ಮರೆಯದಿರಿ ಎಂದರು.

ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿನೇಶ್ ಎಂ ಕೊಡವೂರು, ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಜ್ಯೋತಿ ಪದ್ಮನಾಭ ಭಂಡಿ, ಉಪಸ್ಥಿತರಿದ್ದರು. ಉಡುಪಿ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲರಾದ ಸಂತೋಷ್ ಸ್ವಾಗತಿಸಿ, ಕನ್ನಡ ಭಾಷಾ ಉಪನ್ಯಾಸಕಿ ಪವಿತ್ರ ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!