ಉಡುಪಿ, ಸೆ.11: ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ 3ನೇ ಹಂತದ ಕಂದುರೋಗ (Brucellosis) ಲಸಿಕಾ ಕಾರ್ಯಕ್ರಮವನ್ನು ಸೆಪ್ಟಂಬರ್ 11 ರಿಂದ 25 ರ ವರೆಗೆ ಹಮ್ಮಿಕೊಳ್ಳಲಾಗುತ್ತಿದೆ. 4 ರಿಂದ 8 ತಿಂಗಳ ಪ್ರಾಯದ ಹೆಣ್ಣು ಕರುಗಳಿಗೆ ಉಚಿತವಾಗಿ ಲಸಿಕೆ ನೀಡುವ ಕಾರ್ಯ ಇದಾಗಿದ್ದು, ಜಿಲ್ಲೆಯ ರೈತರು ಈ ಲಸಿಕಾ ಕಾರ್ಯದ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಮೀಪದ ಪಶುವೈದ್ಯ ಸಂಸ್ಥೆಗೆ ಭೇಟಿ ನೀಡುವಂತೆ ಪಶುಪಾಲನಾ ಇಲಾಖೆ ಪ್ರಕಟಣೆ ತಿಳಿಸಿದೆ.
ಕಂದುರೋಗ ಲಸಿಕೆ

ಕಂದುರೋಗ ಲಸಿಕೆ
Date: