ಬಾರ್ಕೂರು, ಸೆ. 15: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಾರ್ಕೂರು ಇಲ್ಲಿನ ಎನ್.ಸಿ.ಸಿ ಘಟಕದ ವತಿಯಿಂದ ‘ಜಿ-20 ಮಾದರಿ ಶೃಂಗಸಭೆ’ ಎಂಬ ವಿನೂತನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ರಮೇಶ ಆಚಾರ್, ವಿಶ್ವಪ್ರಜ್ಞೆಯ ಪರಿಕಲ್ಪನೆ ಭಾರತದ ಮಣ್ಣಿನಲ್ಲಿ ಪುರಾತನ ಕಾಲದಿಂದಲೂ ಬೇರು ಬಿಟ್ಟಿದ್ದು ಜಿ-20 ಅಧ್ಯಕ್ಷತೆಯನ್ನು ಭಾರತ ವಹಿಸಿರುವುದು ನಮಗೆಲ್ಲ ಹೆಮ್ಮೆಯ ವಿಚಾರ ಮತ್ತು ಇಂತಹ ಮಾದರಿ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳು ಪಾಲ್ಗೊಳ್ಳುವುದು ದೇಶದ ಭವಿಷ್ಯದ ದೃಷ್ಟಿಯಿಂದ ಆಶಾದಾಯಕ ಎಂದು ಅಭಿಪ್ರಾಯಪಟ್ಟರು.
ಸಂಪನ್ಮೂಲ ವ್ಯಕ್ತಿಯಾಗಿ ಅರ್ಥಶಾಸ್ತ್ರ ವಿಭಾಗದ ಡಾ.ಮಧು ಎನ್.ಎಂ ಜಿ-20 ಶೃಂಗಸಭೆ ಕುರಿತು ವಿಶೇಷ ಉಪನ್ಯಾಸ ನೀಡಿದರು. ನಂತರ ಎನ್.ಸಿ.ಸಿ ಕ್ಯಾಡೆಟ್‌ಗಳಿಗಾಗಿ ಜಿ-20 ರಾಷ್ಟ್ರಗಳ ಕುರಿತಾದ ಪೋಸ್ಟರ್ ಪ್ರಸೆಂಟೇಷನ್ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಮಾದರಿ ಸಮ್ಮೇಳನದಲ್ಲಿ ಭಾಗವಹಿಸಿದ ಎನ್.ಸಿಸಿ ಕ್ಯಾಡೆಟ್‌ಗಳು ವಿವಿಧ ರಾಷ್ಟ್ರಗಳನ್ನು ಪ್ರತಿನಿಧಿಸಿ ಸುಸ್ಥಿರ ಅಭಿವೃಧ್ಧಿ, ಹಸಿರು ಇಂಧನ, ಭಯೋತ್ಪಾದನೆ ನಿಗ್ರಹ, ಅಂತರಾಷ್ಟ್ರೀಯ ಹಣಕಾಸು ಸಹಾಕಾರ, ಗಡಿ ಸಮಸ್ಯೆಗಳು ಮೊದಲಾದ ವಿಷಯಗಳ ಕುರಿತು ಚರ್ಚಿಸಿದರು.
ಕಾರ್ಯಕ್ರಮದ ಆಯೋಜಕರಾದ ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಸುದಿನ ಟಿ.ಎ ಮತ್ತು ಕಾಲೇಜಿನ ಐ.ಕ್ಯೂ.ಎ.ಸಿ ಸಂಚಾಲಕರಾದ ವಿದ್ಯಾ ಪಿ ಉಪಸ್ಥಿತರಿದ್ದರು.