Tuesday, October 22, 2024
Tuesday, October 22, 2024

ತೆಂಕನಿಡಿಯೂರು: ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ

ತೆಂಕನಿಡಿಯೂರು: ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ

Date:

ಮಲ್ಪೆ, ಸೆ. 15: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿನ ಐ.ಕ್ಯೂ.ಎ.ಸಿ. ಹಾಗೂ ರಾಜ್ಯಶಾಸ್ತ್ರ ವಿಭಾಗದ ಆಶ್ರಯದಲ್ಲಿ ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸಂವಿಧಾನ ಪೀಠಿಕೆಯ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಪ್ರತಿಜ್ಞಾ ವಿಧಿ ಬೋಧಿಸಿದ ಪ್ರಾಂಶುಪಾಲ ಪ್ರೊ. ಸುರೇಶ್ ರೈ ಕೆ. ಮಾತನಾಡಿ, ಸಂವಿಧಾನ ಸರ್ವರ ಏಳಿಗೆಯ ಭವ್ಯ ಭಾರತದ ಸಂಕಲ್ಪ ಹೊಂದಿರುವ ಪವಿತ್ರ ಗ್ರಂಥ ಇದನ್ನು ಅರ್ಥೈಸಿಕೊಂಡು ಸಂವಿಧಾನದ ತಾತ್ವಿಕ ಮೌಲ್ಯಗಳನ್ನು ನಿಜ ಜೀವನದಲ್ಲಿ ಅಳವಡಿಕೊಳ್ಳಬೇಕು ಮತ್ತು ಪೌರತ್ವದ ಜವಾಬ್ದಾರಿಗಳನ್ನು ನಿರ್ವಹಿಸಬೇಕು. ಸಂವಿಧಾನದ ಆಶಯ ಬಹಳ ಮುಖ್ಯವಾಗಿ ಯುವ ಜನತೆಗೆ ತಲುಪುವಂತಾಗಬೇಕು. ಯುವಜನತೆ ಸಂವಿಧಾನದ ಆಶಯಗಳನ್ನು ನಾಗರಿಕ ಜವಾಬ್ದಾರಿಗಳನ್ನು ನಿರ್ವಹಿಸಿದ್ದಲ್ಲಿ ನಮ್ಮ ಪ್ರಜಾ ಪ್ರಭುತ್ವದ ಬೇರುಗಳು ಇನ್ನಷ್ಟು ಗಟ್ಟಿಯಾಗಲಿದೆ ಎಂದರು.

ರಾಜಕೀಯಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರಶಾಂತ್ ನೀಲಾವರ ಕಾರ್ಯಕ್ರಮದ ಔಚಿತ್ಯ ಮತ್ತು ಸಂವಿಧಾನದ ಮಹತ್ವವನ್ನು ಪ್ರಾಸ್ತಾವಿಕ ಮಾತುಗಳಲ್ಲಿ ತಿಳಿಸಿದರು. ವಿದ್ಯಾರ್ಥಿ ಭಾರ್ಗವ ಸಂವಿಧಾನದ ಪ್ರಸ್ತಾವನೆಯ ಮಹತ್ವವನ್ನು ತಿಳಿಸಿದರು. ಕಾಲೇಜಿನ ಬೋಧಕ, ಬೋಧಕೇತರರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗಿಯಾದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

ಉಡುಪಿ, ಅ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು...

ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತಗೊಳಿಸಲು ಸಹಕಾರ ಅಗತ್ಯ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಅ.22: ಜಿಲ್ಲೆಯ ಎಲ್ಲಾ ಹೈನುಗಾರರು ತಮ್ಮ ಜಾನುವಾರುಗಳಿಗೆ ಪ್ರತಿಶತ ನೂರರಷ್ಟು...

ಅ. 26-27: ಬ್ರಹ್ಮಾವರದಲ್ಲಿ ಕೃಷಿ ಮೇಳ

ಉಡುಪಿ, ಅ.22: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ...

ನಾಗರಾಜ್ ಬಲ್ಲಾಳ್ ಇವರಿಗೆ ಉತ್ತಮ ಆಡಳಿತಗಾರ ಪ್ರಶಸ್ತಿ

ಕಟಪಾಡಿ, ಅ.22: ಪೇಜಾವರ ಮಠದ ಆಡಳಿತಕ್ಕೊಳಪಟ್ಟ ಪಾಜಕ ಆನಂದತೀರ್ಥ ಸಮೂಹ ಶಿಕ್ಷಣ...
error: Content is protected !!