Home ಸುದ್ಧಿಗಳು ಪ್ರಾದೇಶಿಕ ಉಡುಪಿ ಜಿಲ್ಲೆಯಲ್ಲಿ ಗಣೇಶ ಚತುರ್ಥಿಯ ರಜೆ ಯಾವಾಗ?

ಉಡುಪಿ ಜಿಲ್ಲೆಯಲ್ಲಿ ಗಣೇಶ ಚತುರ್ಥಿಯ ರಜೆ ಯಾವಾಗ?

795
0

ಉಡುಪಿ, ಸೆ. 16: ಸರ್ಕಾರದ ಅಧಿಸೂಚನೆಯನ್ವಯ ಕರ್ನಾಟಕ ಸರ್ಕಾರವು 2023ನೇ ಸಾಲಿಗೆ ಮಂಜೂರು ಮಾಡಿರುವ ಸಾರ್ವತ್ರಿಕ ರಜೆದಿನಗಳ ಪಟ್ಟಿಯಲ್ಲಿ ದಿನಾಂಕ 18-09-2023 ರಂದು ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿರುತ್ತದೆ. ಉಡುಪಿ ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಹಬ್ಬವನ್ನು ದಿನಾಂಕ 19-09-2023 ಮಂಗಳವಾರದಂದು ಆಚರಿಸಲಾಗುತ್ತಿರುವುದರಿಂದ ಹಾಗೂ ಸಾರ್ವಜನಿಕ ಬೇಡಿಕೆಯ ಹಿನ್ನಲೆಯಲ್ಲಿ 2023ನೇ ಸಾಲಿನ ಗಣೇಶ ಚತುರ್ಥಿ ಹಬ್ಬದ ರಜೆಯನ್ನು ಉಡುಪಿ ಜಿಲ್ಲೆಯಾದ್ಯಂತ ದಿನಾಂಕ 18-09-2023 ರ ಸೋಮವಾರದಂದು ರದ್ದುಗೊಳಿಸಿ ದಿನಾಂಕ 19-09-2023 ಮಂಗಳವಾರದಂದು ಸಾರ್ವತ್ರಿಕ ರಜೆಯನ್ನು ಘೋಷಿಸಿ ಆದೇಶಿಸಲಾಗಿದೆ. ದಿನಾಂಕ 18-09-2023ರ ಸೋಮವಾರದಂದು ಕರ್ತವ್ಯದ ದಿನವೆಂದು ಪರಿಗಣಿಸಲು ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.