ಉಡುಪಿ, ಸೆ.16: ಬೊಮ್ಮರಬೆಟ್ಟು ಗ್ರಾಮ ಪಂಚಾಯಿತಿ, ಪ್ರಾಥಮಿಕ ಆರೋಗ್ಯ ಕೇಂದ್ರ ಹಿರಿಯಡ್ಕ, ಶಿಶು ಅಭಿವೃದ್ಧಿ ಇಲಾಖೆ ಹಾಗೂ ಸಾಧನ ಸಂಜೀವಿನಿ ಒಕ್ಕೂಟ ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಬೊಮ್ಮರಬೆಟ್ಟು ಗ್ರಾಮ ಪಂಚಾಯಿತಿಯಲ್ಲಿ ಗ್ರಾಮಪೌಷ್ಟಿಕ ಆಹಾರ ದಿನಾಚರಣೆ ಕಾರ್ಯಕ್ರಮ ನಡೆಯಿತು. ಬೊಮ್ಮರಬೆಟ್ಟು ಗ್ರಾಮ ಪಂಚಾಯತಿ ಅಧ್ಯಕ್ಷೆ ಜಯಂತಿ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ವೈದ್ಯಾಧಿಕಾರಿ ಡಾ. ಸತ್ಯ ಶಂಕರ್, ಅಪೌಷ್ಟಿಕತೆಯಿಂದ ಆಗುವ ತೊಂದರೆಗಳ ಬಗ್ಗೆ ವಿವರಿಸಿ, ಮಕ್ಕಳು, ಗರ್ಭಿಣಿಯರು, ತಾಯಂದಿರು, ಹರಿಹರೆಯದವರು ಹಾಗೂ ಪ್ರತಿಯೊಬ್ಬರೂ ಪ್ರತಿದಿನ ಪೌಷ್ಟಿಕಾಂಶವುಳ್ಳ ಆಹಾರವನ್ನು ಸೇವಿಸುವಂತೆ ತಿಳಿಸಿದರು.
ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಗ್ರಾಮ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಪಂಚಾಯಿತಿ ಸದಸ್ಯರು, ಸಾಧನ ಸಂಜೀವಿನಿ ಒಕ್ಕೂಟದವರು, ಪದಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಸ್ಥಳೀಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸ್ವಾಗತಿಸಿ, ವಂದಿಸಿದರು.