Tuesday, January 21, 2025
Tuesday, January 21, 2025

ಸೆ. 22: ಹಿರಿಯ ನಾಗರಿಕರಿಗೆ ಜಿಲ್ಲಾಮಟ್ಟದ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆ

ಸೆ. 22: ಹಿರಿಯ ನಾಗರಿಕರಿಗೆ ಜಿಲ್ಲಾಮಟ್ಟದ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆ

Date:

ಉಡುಪಿ, ಸೆ.16: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಹಿರಿಯ ನಾಗರಿಕರಿಗೆ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಸೆಪ್ಟಂಬರ್ 22 ರಂದು ಬೆಳಗ್ಗೆ 9.30 ಕ್ಕೆ ನಗರದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ತಮ್ಮ ಗುರುತು ಚೀಟಿ ಅಥವಾ ವಯಸ್ಸಿನ ಅಧಿಕೃತ ದಾಖಲೆಗಳೊಂದಿಗೆ ಈ ಕೆಳಕಂಡ ಸ್ಪರ್ಧೆಗಳಲ್ಲಿ ಭಾಗವಹಿಸಬಹುದಾಗಿದೆ. ಕ್ರೀಡಾ ಸ್ಪರ್ಧೆಗಳು: 60-69 ವರ್ಷ, 70-79 ವರ್ಷ ಮತ್ತು 80 ವರ್ಷ ಮೇಲ್ಪಟ್ಟ ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕ ವಿಭಾಗದಲ್ಲಿ ನಡಿಗೆ, ರಿಂಗನ್ನು ಬಕೆಟ್‌ನಲ್ಲಿ ಎಸೆಯುವುದು ಮತ್ತು ಬಾಂಬ್ ಇನ್ ದ ಸಿಟಿ ಸ್ಪರ್ಧೆಗಳು ನಡೆಯಲಿವೆ. ಸಾಂಸ್ಕೃತಿಕ ಸ್ಪರ್ಧೆಗಳು: 60-69 ವರ್ಷ, 70-79 ವರ್ಷ ಮತ್ತು 80 ವರ್ಷ ಮೇಲ್ಪಟ್ಟ ಪುರುಷರು ಮತ್ತು ಮಹಿಳೆಯರ ಪ್ರತ್ಯೇಕ ವಿಭಾಗದಲ್ಲಿ ಏಕಪಾತ್ರ ಅಭಿನಯ, ಗಾಯನ ಸ್ಪರ್ಧೆ ಮತ್ತು ಚಿತ್ರಕಲೆ ಸ್ಪರ್ಧೆಗಳು ನಡೆಯಲಿವೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2574810, 2574811 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!